ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಕಲಾಕೃತಿ, ಸಂಸತ್ ಭವನದ ಮಾದರಿ ನಿರ್ಮಾಣ

ಉಡುಪಿ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಲಾಕೃತಿ ಹಾಗೂ ಪುರಾತನ ಸಂಸತ್ ಭವನದ ಸುಂದರ ಮಾದರಿಯನ್ನು ಕಪ್ಪೆಟ್ಟುವಿನಲ್ಲಿ ನಿರ್ಮಿಸಲಾಗಿದೆ. ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ತಂಡದ ಸದಸ್ಯರು ಒಗ್ಗೂಡಿ ಕಲಾಕೃತಿಯನ್ನು ನಿರ್ಮಿಸಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಮೂಲ್ಯ ಕೊಡುಗೆಯನ್ನು ಸ್ಮರಿಸುವುದರ ಜತೆಗೆ, ಪ್ರಜಾಪ್ರಭುತ್ವದ ಪ್ರತೀಕವಾಗಿರುವ ಸಂಸತ್ ಭವನದ ಮಹತ್ವವನ್ನು ಸಾರುವ ರೀತಿಯಲ್ಲಿ […]
ಆ. 15ರಂದು ಬ್ರಾಹ್ಮಣ ಮಹಾಸಭಾ ‘ಆಟಿಡೊಂಜಿ ವಿಪ್ರಕೂಟ’

ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ ಆ. 15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, 9.15ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ. ಇದೇ ಸಂದರ್ಭದಲ್ಲಿ ಭಾರತೀಯ ಯೋಧರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದರು. ವಿದ್ವಾನ್ ಡಾ. ಬಿ. ಗೋಪಾಲ ಆಚಾರ್ಯ, ಕರ್ನಾಟಕ ಬ್ಯಾಂಕ್ ನಿರ್ದೇಶಕ ಎಸ್. ಬಾಲಕೃಷ್ಣ […]
ಪಡುಬೆಳ್ಳೆ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಲೇಸ್’ ಸಂಭ್ರಮ

ಉಡುಪಿ: ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಕ್ಷಕ–ಶಿಕ್ಷಕ ಸಂಘದ ಸಹಯೋಗದಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ ನಡೆಯಿತು. ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ವಂದನಾ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಮನೆಯ ಹಿರಿಯರ ಕರ್ತವ್ಯವಾಗಿದೆ ಎಂದು ಹೇಳಿದರು. ಬಳಿಕ ಮಕ್ಕಳನ್ನು ನೃತ್ಯದ ಮೂಲಕ […]
ಸಾಲಮನ್ನಾ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಿ: ಸರ್ಕಾರಕ್ಕೆ ಸಹಕಾರ ಭಾರತಿಯ ಆಗ್ರಹ

ಪ್ಯಾಕ್ಸ್‌ಗಳ ಆರ್ಥಿಕ ಸಂಕಷ್ಟಕ್ಕೆ ಸರ್ಕಾರವೇ ಹೊಣೆ – ವಿಳಂಬ ಸಹಿಸಲಾಗದು ಬೆಂಗಳೂರು: ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪ್ಯಾಕ್ಸ್) ಮೂಲಕ ರೈತರಿಗೆ ನೀಡಲಾಗಿದ್ದ ಸಾಲಮನ್ನಾ ಯೋಜನೆಯಡಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಣವನ್ನು ಕೂಡಲೇ ಸಂಪೂರ್ಣವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಸಹಕಾರ ಭಾರತಿಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. 2018–19ನೇ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಪಡೆದ ರೈತರಿಗೆ ತಲಾ ₹1 ಲಕ್ಷದವರೆಗೆ […]
ಉಡುಪಿ: ಮಾದಕ ದ್ರವ್ಯ ಸಾಗಾಟ-ಮಾರಾಟ; ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆ.13ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಪೊಲೀಸರು ಇಕ್ಬಾಲ್‌ನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು […]