ಉಡುಪಿಯಲ್ಲಿ ಮಹಿಳಾ ಆರ್ಥಿಕ ಸ್ವಾವಲಂಬನೆಯ ಮೈಲಿಗಲ್ಲು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ಮತ್ತು ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ, ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹಾಗೂ ಸ್ವಾತಂತ್ರ‍್ಯ ಕಲ್ಪಿಸಿ ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿ ರೂಪಿಸುವ ಉದ್ದೇಶದಿಂದ ಆರಂಭಿಸಲಾದ ‘ಅಕ್ಕ ಕೆಫೆ’ಯನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಇಂದು ನಗರದ ಬ್ರಹ್ಮಗಿರಿ – ಕಿನ್ನಿಮೂಲ್ಕಿ ಮಾರ್ಗದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅಕ್ಕಕೆಫೆ ಮಹಿಳಾ ಆರ್ಥಿಕ ಸಬಲೀಕರಣದ […]

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ […]

ಯುವಕರಿಗೆ ಕೆಟ್ಟ ಪದ ಕಲಿಸಿದ್ದೇ ಬಿಜೆಪಿ ಐಟಿ ಸೆಲ್- ಸಚಿವ ರಿಜ್ವಾನ್

ಉಡುಪಿ: ಯುವಕರಿಗೆ ಕೆಟ್ಟ ಪದಗಳನ್ನು ಕಲಿಸಿರುವುದೇ ಬಿಜೆಪಿಯ ಐಟಿ ಸೆಲ್. ಸತ್ಯ ಹೇಳುವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬಿಜೆಪಿ ಸಿದ್ಧಾಂತದ ವಿರುದ್ಧ ಮಾತನಾಡುವವರ ತೇಜೋವಧೆ ಮಾಡುವುದು ಬಿಜೆಪಿ ಐಟಿ ಸೆಲ್‌ ನ ಕೆಲಸ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದರು. ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಗರದ ಎಲ್‌ಐಸಿ ಡೈಮಂಡ್ ಜ್ಯುಬಿಲಿ ಹಾಲ್‌ನಲ್ಲಿ ಶನಿವಾರ ನಡೆದ 51ನೇ ವಾರ್ಷಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.‘ಈಗ ನಿಮ್ಮ ಐಟಿ […]

ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೆಯ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಕಲ್ಯಾಣಪುರದಲ್ಲಿ ಇರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿಯವರು ಇಂದು ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದು ಸ್ವಾತಂತ್ರ್ಯ ಕೇವಲ ಬರೀ ನಮ್ಮ ಹಕ್ಕು ಮಾತ್ರ ಅಲ್ಲ ನಮ್ಮ ಜವಾಬ್ದಾರಿ ಕೂಡ ನಮ್ಮ ಹಿರಿಯರು ತ್ಯಾಗ ಬಲಿದಾನದಿಂದ ದೊರಕಿಸಿ ಕೊಟ್ಟ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಳ್ಳದೆ ಭಾರತೀಯ ಪ್ರಜೆಗಳಾದ ನಾವು ಸದ್ಭಳಕೆ ಮಾಡಿಕೊಂಡು ದೇಶದ […]

ಉಡುಪಿ ಪ್ರೀ ಓನ್ಡ್ ಕಾರ್ಸ್ ಅಸೋಸಿಯೇಷನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ:ಉಡುಪಿ ಪ್ರೀ ಓನ್ಡ್ ಕಾರ್ಸ್ ಅಸೋಸಿಯೇಷನ್ ಮತ್ತು ಧನ್ವಂತರಿ ನರ್ಸಿಂಗ್ ಕಾಲೇಜು ಜಂಟಿಯಾಗಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೃಷ್ಣಾನುಗ್ರಹ ಸಂತೆಕಟ್ಟೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಮೊಹಮ್ಮದ್ ಆಶ್ರಫ್ ಮತ್ತು ಕಾರ್ಯದರ್ಶಿಗಳಾದ ಉದಯ್ ಕಿರಣ್ ಹಾಗೂ ಸಮಿತಿಯ ಸದಸ್ಯರ ಸಜಿ ಎನ್ ಪಿಳ್ಳೈ ಅಲ್ವಿನ್ ಪಿಂಟೋ, ಗಿರೀಶ್ ,ಶಶಿ ಶೆಟ್ಟಿ ,ರಾಮಕೃಷ್ಣ ,ನವೀನ ,ಝಕೀರ್ , ಧನ್ವಂತರಿ ಅಧ್ಯಕ್ಷರಾದ ಉಮೇಶ್ ಪ್ರಭು ಆಡಳಿತ ಮಂಡಳಿ,ಕೃಷ್ಣಾನುಗ್ರಹ ಸದಸ್ಯರಾದ ಉದಯ್ ಕುಮಾರ್ ಉಪಸ್ಥಿತರಿದ್ದರು.ಹಾಗೆಯೇ […]