ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಸರ್ವೀಸ್ ರಸ್ತೆ, ಮೇಲ್ಸೇತುವೆ […]
ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ

ಬೆಂಗಳೂರು: ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ ನಾಗೇಶ್ ಅವರು ಇಂದು ನಿಧನರಾಗಿದ್ದಾರೆ. 67 ವರ್ಷದ ಬಿ.ಸಿ ನಾಗೇಶ್ ಅವರು ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಎರಡು ಸಲ ಆಪರೇಷನ್ ಕೂಡ ಆಗಿತ್ತು. ಬೆಂಗಳೂರಿನಲ್ಲೇ ಮಗಳ ಮನೆಯಲ್ಲಿದ್ದ ಅವರು ಮಂಗಳವಾರ (ಆ.18) ಕೊನೆಯುಸಿರೆಳೆದಿದ್ದಾರೆ. ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದು, ನಾಳೆ (ಆ.19) ಹುಟ್ಟೂರು ತಿಪಟೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. 1959ರ ಜುಲೈ 1ರಂದು ಜನಿಸಿದ್ದ ಬಿ.ಸಿ. ನಾಗೇಶ್ […]
ಪತ್ರಕರ್ತರು ಆರೋಗ್ಯದ ಕಡೆ ಗಮನ ಹರಿಸಬೇಕು: ಡಾ. ಸುಶೀಲ್ ಜತ್ತನ್ನ

ಉಡುಪಿ: ಪತ್ರಕರ್ತರು ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವುದರಿಂದ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಅಸಮರ್ಪಕ ಆಹಾರ ಪದ್ಧತಿ ಹಾಗೂ ವ್ಯಾಯಾಮದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಪತ್ರಕರ್ತರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಲೋಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮೃತ್ ಡಯಾಗ್ನಸ್ಟಿಕ್ ಸೆಂಟರ್ ಸಹಯೋಗದಲ್ಲಿ ಸಂಘದ ಸದಸ್ಯರಿಗಾಗಿ ಆಯೋಜಿಸಿರುವ ನಾಲ್ಕು ದಿನಗಳ ಉಚಿತ ಆರೋಗ್ಯ […]
ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯರಿಗೂ ಸುಂಕ ವಿನಾಯಿತಿ: ಸರ್ಕಾರಕ್ಕೆ ಶಿಫಾರಸು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ಸಾಸ್ತಾನ ಮತ್ತು ಶಿರೂರು ಟೋಲ್ ಕೇಂದ್ರಗಳ ಮಾದರಿಯಲ್ಲಿ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಸ್ತಾನ ಟೋಲ್ ಕೇಂದ್ರದಲ್ಲಿ 10 […]
ಜಾಗತಿಕ ಮಟ್ಟದ ರ್‍ಯಾಂಕಿಂಗ್ನಲ್ಲಿ ಮಾಹೆ ಮತ್ತಷ್ಟು ಪ್ರಗತಿ; ದೇಶದಲ್ಲಿ 7ನೇ ಸ್ಥಾನ

ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು, ಜಾಗತಿಕ ಶೈಕ್ಷಣಿಕ ಮಟ್ಟದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದೆ. ಶಾಂಘೈ ರ್‍ಯಾಂಕಿಂಗ್ ಕನ್ಸಲ್ಟೆನ್ಸಿಯ 2026ನೇ ಸಾಲಿನ ಪ್ರತಿಷ್ಠಿತ ‘ಅಕಾಡೆಮಿಕ್ ರ್‍ಯಾಂಕಿಂಗ್ ಆಫ್ ವರ್ಲ್ಡ್ ಯೂನಿವರ್ಸಿಟೀಸ್’ (ಎಆರ್‌ಡಬ್ಲ್ಯುಯು) ಪಟ್ಟಿಯಲ್ಲಿ ಮಾಹೆ 701-800ರ ಶ್ರೇಣಿಗೆ ಏರಿದೆ. ಕಳೆದ ಬಾರಿ 801-900ರ ಶ್ರೇಣಿಯಲ್ಲಿದ್ದು ಇದೀಗ ಶೈಕ್ಷಣಿಕ ಹಾಗೂ ಸಂಶೋಧನಾ ವಲಯದ ತನ್ನ ನಿರಂತರ ಸಾಧನೆಯಿಂದಾಗಿ ವಿಶ್ವಮಟ್ಟದಲ್ಲಿ ತನ್ನ ಸ್ಥಾನದಲ್ಲಿ ಮತ್ತಷ್ಟು ಪ್ರಗತಿಕಂಡಿದೆ. ಎಆರ್‌ಡಬ್ಲ್ಯುಯು ಟ್ರ್ಯಾಕರ್ ವಿಶ್ಲೇಷಣೆಯ […]