ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಾಸರಗೋಡಿನ ಮಂಜೇಶ್ವರ ಕಡಂಬಾರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಹಾಗೂ ದೇವಳದ ಸಹಕಾರದಲ್ಲಿ ಯಕ್ಷ ಬಳಗ ಹೊಸಂಗಡಿ ಮಂಜೇಶ್ವರ ತಂಡದಿಂದ ಹಮ್ಮಿಕೊಂಡ […]
ಕ್ರೈಸ್ಟ್‍ಕಿಂಗ್: 80ನೇ ಸ್ವಾತಂತ್ರ್ಯೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್‍ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ಯಾತಂತ್ರ್ಯ ದಿನಾಚರಣೆಯನ್ನು ಬೋಧಕ-ಬೋಧಕೇತರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದ ಸೇನಾನಿ ಹಾಗೂ ಸಾಣೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವಾನಾಥ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು “ನಾವು ಇಂದು ಧೈರ್ಯದಿಂದ ನೆಮ್ಮದಿಯ ಬದುಕು ಸಾಗಿಸಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ನಮಗಾಗಿ ಮಾಡಿದ ಹೋರಾಟ, ತ್ಯಾಗ, ಬಲಿದಾನ ಕಾರಣ. ಅಂತಹ ಮಹಾತ್ಮರನ್ನು […]
ಕಾಪು ಹೊಸಮಾರಿಗುಡಿ ಕಚೇರಿ ನಿರ್ವಾಹಕ ಸಂತೋಷ್ ಶೆಟ್ಟಿ ನಿಧನ

ಉಡುಪಿ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಹಾಗೂ ಸಾಯಿ ಕ್ಯಾಟರರ್ಸ್ ಮಾಲೀಕ ಸಂತೋಷ್ ಶೆಟ್ಟಿ ಗುರ್ಮೆ ಕಳತ್ತೂರು ಸಂತೋಷ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.ಅವರು ಪತ್ನಿ, ಪುತ್ರ, ಕುಟುಂಬಸ್ಥರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಸಂತೋಷ್ ಶೆಟ್ಟಿ ಅವರು ಕಳೆದ 32 ವರ್ಷಗಳಿಂದ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ನಿಧನಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಸಿಬ್ಬಂದಿ ವರ್ಗ ಸಂತಾಪ ವ್ಯಕ್ತಪಡಿಸಿದೆ.
ಮಣಿಪಾಲ: ಆಗಸ್ಟ್ 22ರವರೆಗೆ ಭುಜ ನೋವಿಗೆ ಉಚಿತ ಆಯುರ್ವೇದ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲ: ಮಣಿಪಾಲದ ಮುನಿಯಾಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಫ್ರೋಜನ್ ಶೋಲ್ಡರ್ (ಭುಜದ ಬಿಗಿತ) ಹಾಗೂ ಇತರೆ ಭುಜ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಆಗಸ್ಟ್ 17ರಿಂದ 22ರವರೆಗೆ ಉಚಿತ ಆಯುರ್ವೇದ ತಪಾಸಣೆ, ವೈದ್ಯಕೀಯ ಸಲಹೆಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಭುಜ ನೋವು, ಭುಜದ ಬಿಗಿತ, ಭುಜದ ಮೃದು ಭಾಗದಲ್ಲಿ ನೋವು, ಕೈ ಎತ್ತಲು ಅಥವಾ ಚಲಿಸಲು ತೊಂದರೆ ಸೇರಿದಂತೆ ವಿವಿಧ ಭುಜ ಸಂಬಂಧಿತ ಸಮಸ್ಯೆಗಳಿರುವವರಿಗೆ ಶಿಬಿರದಲ್ಲಿ ತಜ್ಞ ಆಯುರ್ವೇದ ವೈದ್ಯರಿಂದ […]
25 ಖೈದಿಗಳಿರೋ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್,”ನಂಗೆ ಈ ಜಾಗ ಬೇಡ, ಇಲ್ಲಿ ನಂಗೆ ಸೋಂಕು ಹರಡುತ್ತೆ”ಎಂದು ರಗಳೆ ಮಾಡಿದ ಪ್ರಜ್ವಲ್!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದ್ದು, ಇದೀಗ ಹೊಸ ಬ್ಯಾರಕ್‌ನಲ್ಲಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಜಿಪಿ ಸೂಚನೆ ಮೇರೆಗೆ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ಭದ್ರತಾ ವಿಭಾಗದ ಬ್ಯಾರಕ್‌ನಿಂದ ಸಾಮಾನ್ಯ ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಸುಮಾರು 25 ಮಂದಿ ಕೈದಿಗಳಿರುವ ಈ ಬ್ಯಾರಕ್‌ನಲ್ಲಿ ಕೆಮ್ಮು, ಕಜ್ಜಿ ಸೇರಿದಂತೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ […]