ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ಕಾರ್ಯಕ್ರಮ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿ ಚರ್ಚ್ ದುರಸ್ತಿ/ನವೀಕರಣ, ಪುನರ್ ನಿರ್ಮಾಣ, ಪುನಃಸ್ಥಾಪನೆ, ಉನ್ನತೀಕರಣ ಹಾಗೂ ಚರ್ಚ್ ಆವರಣ ಗೋಡೆ ನಿರ್ಮಾಣ, ಸಮಾಧಿ/ಸ್ಮಶಾನ ಸ್ಥಳಗಳಲ್ಲಿ ಕಾಂಪೌಂಡ್ ಗೋಡೆ ಮತ್ತು ಮೂಲಭೂತ ಸೌಲಭ್ಯಗಳ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕ್ರಿಶ್ಚಿಯನ್ ಸಮುದಾಯದ ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳಿಗೆ ಸಹಾಯಧನ ಮತ್ತು ಎಚ್.ಐ.ವಿ/ಏಡ್ಸ್ ಪೀಡಿತರು ಹಾಗೂ ದೈಹಿಕ/ಮಾನಸಿಕ ವಿಕಲಚೇತನರಿಗಾಗಿ ಕ್ರಿಶ್ಚಿಯನ್ ಸ್ವಯಂಸೇವಾ ಸಂಸ್ಥೆಗಳು ನಡೆಸುವ ಆಶ್ರಯ/ಆರೈಕೆ ಕೇಂದ್ರಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮದಡಿ https://www.kccdclonline.karnataka.gov.inಆನ್‌ಲೈನ್ […]
ಆ. 20 ರಂದು ನೇರ ಸಂದರ್ಶನ

ಉಡುಪಿ: ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ ಇಲ್ಲಿನ 3 ನೇ ಮಹಡಿಯ ಓಮ್ನಿಯನ್ ಪ್ರೀಮಿಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಆಗಸ್ಟ್ 20 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. 3ಡಿ / ಫೋಟೋಶಾಪ್, ಸಿ.ಎಸ್.ಆರ್ ಮತ್ತು ಅಕೌಂಟಿAಗ್ ಹುದ್ದೆಗಳಿಗೆ, ಪಿ.ಯು.ಸಿ, ಎಂ.ಕಾಮ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ‘ಮೈ ಭಾರತ್’ ಯೋಜನೆಯು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕಾರ್ಯಕ್ರಮವಾಗಿದ್ದು, ಯುವಕರಲ್ಲಿ ನಾಯಕತ್ವ ಗುಣಗಳನ್ನು […]
ಎಐಯನ್ನು ಮೀರಲು ಛಾಯಾಗ್ರಾಹಕರು ನೂರು ಹೆಜ್ಜೆ ಮುಂದಿರಬೇಕು: ಸತ್ಯಬೋಧ ಜೋಶಿ

ಉಡುಪಿ: ಕೃತಕ ಬುದ್ಧಿಮತ್ತೆ (ಎಐ) ಈ ಯುಗದ ದೊಡ್ಡ ಜ್ಞಾನಿಯಾಗಿದ್ದು, ಅದು ನಮಗೆ ವಿನಮ್ರತೆಯನ್ನು ಕಲಿಸಿಕೊಡುತ್ತದೆ. ಫೋಟೋಗ್ರಫಿ ಕ್ಷೇತ್ರದಲ್ಲಿ ಎಐ ಸದ್ಯ ಬಂಧನದಂತೆ ಕಂಡರೂ ಅದನ್ನು ಮೀರಿದಾಗ ನಂದನವಾಗಲಿದೆ ಎಂದು ಮಣಿಪಾಲ ಸ್ಕೂಲ್ ಆಫ್ ಕಮ್ಯುನಿಕೇಶನ್‌ನ ಪ್ರೊಫೆಸರ್ ಸತ್ಯಬೋಧ ಜೋಶಿ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯಲ್ಲಿ ಸದಸ್ಯರ ಸುದ್ದಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು […]
ಒಕ್ಕೂಟ ವ್ಯವಸ್ಥೆಯನ್ನು ತಮಿಳುನಾಡು ರಾಜಕೀಯ ನಾಯಕರು ಗೌರವಿಸಬೇಕು: CM ಶಿವಕುಮಾರ್

ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದರು. ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಸಿಬ್ಬಂದಿಯೊಂದಿಗೆ ನಡೆದಿತ್ತು ಎನ್ನಲಾದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಹನೂರು ಎನ್‌ಕೌಂಟರ್ ಪ್ರಕರಣದ ಕುರಿತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ ನೀಡಿರುವ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರಾಜಕೀಯ ನಾಯಕರು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಹಾಗೂ ಇತರ ರಾಜ್ಯಗಳ ವ್ಯವಹಾರಗಳಲ್ಲಿ […]