ಮಾಜಿ ಸಚಿವ ಬಿ.ಸಿ ನಾಗೇಶ್ ನಿಧನಕ್ಕೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಬೆಂಗಳೂರು: ಮಾಜಿ ಸಚಿವ ಬಿ.ಸಿ ನಾಗೇಶ್ (BC Nagesh) ಅವರ ನಿಧನಕ್ಕೆ ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚಿಸಲಾಯ್ತು. ಕಲಾಪ ಪ್ರಾರಂಭ ಆದ ಕೂಡಲೇ ಸಭಾಪತಿ ಸಲೀಂ ಅಹಮದ್ ಸಂತಾಪ ಸೂಚನೆ ಮಂಡನೆ ಮಾಡಿದ್ರು. ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah), ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಸಂತಾಪ ಸೂಚಿಸಿದರು. ಡಿಸಿಎಂ ಪರಮೇಶ್ವರ್ (DCM Parameshwar) ಮಾತಾಡಿ, ಬಿ.ಸಿ.ನಾಗೇಶ್ ಅವರು ನನಗೆ ಆತ್ಮೀಯ ಸ್ನೇಹಿತರು. ಶಾಸಕರಾಗಿ, ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಸಚಿವರಾಗಿದ್ದ ವೇಳೆ ಜಿಲ್ಲೆಯ ಅಭಿವೃದ್ಧಿಯ […]
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಭೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿಯ ಸ್ಥಾಪಕ, ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಸಭೆಯನ್ನು […]
ಕೊರಗ ಸಮುದಾಯದ ಭೂಮಿ, ಹಕ್ಕುಗಳ ರಕ್ಷಣೆಗೆ ಒಗ್ಗಟ್ಟು ಅಗತ್ಯ- 19ನೇ ವರ್ಷದ ಭೂಮಿ ಹಬ್ಬದಲ್ಲಿ ಪ್ರತಿಪಾದನೆ

ಉಡುಪಿ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ–ಕೇರಳ ವತಿಯಿಂದ 19ನೇ ವರ್ಷದ ‘ಭೂಮಿ ಹಬ್ಬ ಹಾಗೂ ಅಭಿವೃದ್ಧಿ ವಿಚಾರ ಸಂಕಿರಣ’ವು ಶಿರ್ವದ ಪೆರ್ನಾಲ್‌ನ ಆದಿವಾಸಿ ಶಿಕ್ಷಣ ಕೇಂದ್ರದಲ್ಲಿ ನಡೆಯಿತು. ಕೊರಗ ಸಮುದಾಯದ ಭೂಮಿ, ಬದುಕು, ಹಕ್ಕುಗಳು ಹಾಗೂ ಸಮಗ್ರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮುದಾಯದ ವಿವಿಧ ಭಾಗಗಳ ಮುಖಂಡರು, ಸಂಘಟನೆಗಳ ಪ್ರತಿನಿಧಿಗಳು, ಹಿರಿಯರು, ಯುವಜನರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಮುದಾಯ ಎದುರಿಸುತ್ತಿರುವ ಭೂಮಿ ಸಂಬಂಧಿತ ಸಮಸ್ಯೆಗಳು, ಶಿಕ್ಷಣ, ಉದ್ಯೋಗ, ಸಾಮಾಜಿಕ […]
ಉದ್ಯಾವರ: ಚರಂಡಿಗೆ ಸ್ಲ್ಯಾಬ್ ಇಲ್ಲದೆ ಅಪಾಯ: ವಾಹನ ಸವಾರರ ಪರದಾಟ

ಉಡುಪಿ: ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆನಗರ ಮುಖ್ಯ ರಸ್ತೆಯ ಬದಿಯ ಚರಂಡಿಗೆ ಅಳವಡಿಸಿದ್ದ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ರಸ್ತೆಯಲ್ಲಿರುವ ಕಟ್ಟಡದಲ್ಲಿ ಮೆಸ್ಕಾಂ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ನೂರಾರು ಗ್ರಾಹಕರು ಆಗಮಿಸುತ್ತಾರೆ. ಚರಂಡಿ ತೆರೆದಿರುವ ಬಗ್ಗೆ ಅರಿವಿಲ್ಲದೆ ಹಲವು ವಾಹನಗಳು ಹೊಂಡಕ್ಕೆ ಬಿದ್ದು ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಲ್ಪೆಯಿಂದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ […]
25 ಗಂಟೆಗಳ ದಾಸರಪದ ಗಾಯನಕ್ಕೆ ಸಂಗೀತ ಬಾಲಚಂದ್ರ ಸಜ್ಜು

ಉಡುಪಿ: ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸಿರುವ ಆಕಾಶವಾಣಿಯ ಉನ್ನತ ಶ್ರೇಣಿಯ ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆಗಾಗಿ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಭೀಮಾ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಗಾಯನ ಕಾರ್ಯಕ್ರಮಕ್ಕೆ ‘ಪಂಚವಿಂಶತಿ’ ಎಂದು ಹೆಸರಿಡಲಾಗಿದೆ. ಉಡುಪಿಯ ಶ್ರೀಕೃಷ್ಣ ಮಠದ ಸಮೀಪದ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಕಾರ್ಯಕ್ರಮ […]