ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಉಡುಪಿ: ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬಾಳೆಹಣ್ಣುಗಳಿಗೆ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಲವರ […]
10 ಲಕ್ಷ ರೂ. ಲಂಚ ಪಡೆದ ಆರೋಪ: ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಸಿಬಿಐ ಬಲೆಗೆ

ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರರೊಬ್ಬರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ. ಬಂಧಿತ ಆರೋಪಿಯನ್ನು ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆ (ICAS) 2020ರ ಬ್ಯಾಚ್‌ನ ಅಧಿಕಾರಿ ಸಂದೀಪ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯ ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಿ ಅನುಮೋದನೆ ನೀಡಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 10 ಲಕ್ಷ ರೂ. ಲಂಚದ ಹಣವನ್ನು ತಮ್ಮ ಪತ್ನಿಯ ಮೂಲಕ […]
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ; 7 ಪ್ರಯಾಣಿಕರು ಪಾರು

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ (Udupi) ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ (Bus Fire Accident) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ […]
ಮಂಗಳೂರು-ಬೆಂಗಳೂರು ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ […]
ಪರಪ್ಪನ ಅಗ್ರಹಾರ ಜೈಲಿನಲ್ಲಿ 45 ಸಾವಿರಕ್ಕೆ ಮೊಬೈಲ್ ಮಾರಾಟ ದಂಧೆ: ವಿಚಾರಣಾಧೀನ ಕೈದಿ ಅಲ್ಫೋನ್ಸಾ ರಾಜ ಬಂಧಿಸಿದ CCB

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಎಗ್ಗಿಲ್ಲದೆ ಮೊಬೈಲ್ ಬಳಸುತ್ತಿರುವ ಘಟನೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ರೌಡಿ ಮಿಲ್ಟ್ರಿ ಸತೀಶ್ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ಅಲ್ಫೋನ್ಸಾ ಅಲಿಯಾಸ್ ಮಚ್ಚಾ ಎಂಬ ಕೈದಿ ಜೈಲಿನಲ್ಲಿದ್ದುಕೊಂಡೇ ಸಹಕೈದಿಗಳಿಗೆ 45,000 ರೂ. ಸ್ಮಾರ್ಟ್‌ಫೋನ್ ಮಾರಾಟ ಮಾಡ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಜೈಲಿನ ಶೌಚಾಲಯದಲ್ಲಿ ಪತ್ತೆಯಾಗಿದ್ದ ಫೋನ್‌ಗಳ ಸುಳಿವು ಬೆನ್ನತ್ತಿದ ಸಿಸಿಬಿ, ಆರೋಪಿಯನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ತನಿಖೆ ನಡೆಸಿದ್ದು, ಈ ವೇಳೆ ಸತ್ಯ ಹೊರಬಂದಿದೆ. ಆದರೆ, […]