ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಚೆಸ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿ ಶ್ರಾವ್ಯ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ. ಪಿ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 20ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿ: ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಿರುವ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ 2025-26ನೇ ಸಾಲಿನ ಕಾರ್ಯಕ್ಷಮತೆಗಾಗಿ ಸತತ 20ನೇ ಬಾರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ| ಎಂ . ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ಅರ್ಹಿತ ಅಗ್ರೋಬೋಟ್ ಪ್ರೈವೇಟ್ ಲಿಮಿಟೆಡ್ ನಡುವೆ ಒಡಂಬಡಿಕೆ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶಿಕ್ಷಣ ಮತ್ತು ಕೈಗಾರಿಕೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನ ಅರ್ಹಿತಾ ಅಗ್ರೋಬೋಟ್ ಪ್ರೈವೇಟ್, ಲಿಮಿಟೆಡ್ ಸಂಸ್ಥೆಯೊಂದಿಗೆ ಇತ್ತೀಚಿಗೆ ಒಡಂಬಡಿಕೆಗೆ ಸಹಿ ಹಾಕಿತು. ಅತ್ಯಾಧುನಿಕ ಕೃಷಿ ತಂತ್ರಜ್ಞಾನ, ಸ್ವಯಂಚಾಲಿತ ವ್ಯವಸ್ಥೆ ಮತ್ತು ರೊಬೋಟಿಕ್ಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅರ್ಹಿತಾ ಅಗ್ರೋಬೋಟ್ ಸಂಸ್ಥೆಯು, ಬುದ್ಧಿವಂತ ಹಾಗೂ ಸುಸ್ಥಿರ ಕೃಷಿ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ಪರಿಣತಿಯನ್ನು ಹೊಂದಿದೆ. ಈ ಒಡಂಬಡಿಕೆಯು ಬೋಧನೆ, ಕಲಿಕೆ, ಸಂಶೋಧನೆ ಮತ್ತು ಸುಧಾರಿತ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಿಕೆಯಲ್ಲಿ […]
ಕ್ರೈಸ್ಟ್ ಕಿಂಗ್: ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಚಾಲನೆ ಮತ್ತು ತರಬೇತಿ ಕಾರ್ಯಕ್ರಮಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಖ್ಯಾತ ನ್ಯಾಯವಾದಿ ಹಾಗೂ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷರಾದ ರೊ.ವಿಜೇಂದ್ರ ಕುಮಾರ್ ಅವರು ದೀಪ ಬೆಳಗಿ ಎನ್‍ಎಸ್‍ಎಸ್‍ನ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಸಾಮಾಜಿಕ ಬದುಕಿನ ಜ್ಞಾನಾನುಭವ ಪಡೆಯಲು ರಾಷ್ಟ್ರೀಯ ಸೇವಾಯೋಜನೆ ಸಹಕಾರಿ. ಕೇವಲ ಶಿಕ್ಷಣ ಪಡೆದ ಮಾತ್ರಕ್ಕೆ ಅತ್ಯುತ್ತಮ ವ್ಯಕ್ತಿತ್ವ ಮೂಡಿಬರುವುದಿಲ್ಲ. ರಾಷ್ಟ್ರೀಯ […]
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಬಳಿಯ ಗೀತಾಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ವಿದುಷಿ ಸಂಗೀತ ಬಾಲಚಂದ್ರ ಅವರು 25 ಗಂಟೆಗಳ ನಿರಂತರ ದಾಸವಾಣಿ ಗಾಯನದ ಮೂಲಕ ವಿಶ್ವದಾಖಲೆ ನಿರ್ಮಿಸುವ ಸಂಕಲ್ಪದೊಂದಿಗೆ ಸಂಗೀತ ಸೇವೆ ಆರಂಭಿಸಿದರು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸುವ ಉದ್ದೇಶದಿಂದ ಅವರು ಹರಿದಾಸರ ಪದಗಳು ಹಾಗೂ ಕೀರ್ತನೆಗಳನ್ನು ಸತತ 25 ಗಂಟೆಗಳ ಕಾಲ ಗಾಯನ ಮಾಡಲಿದ್ದಾರೆ. ವೇದವ್ಯಾಸ ಪುರಾಣಿಕ ಮತ್ತು ಗೀತಾ ಪುರಾಣಿಕ ದಂಪತಿಯ ಪುತ್ರಿಯಾದ ಸಂಗೀತ ಬಾಲಚಂದ್ರ ಅವರು […]