ಉಡುಪಿ: ಡೇವಿಡ್ ಡಿಸೋಜ ಹತ್ಯೆ – ಕೋಟ್ಯಂತರ ರೂ. ಗುತ್ತಿಗೆ ವಿವಾದ, ಭೂಗತ ನಂಟು

ಉಡುಪಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಯುಪಿಸಿಎಲ್‌ ಗುತ್ತಿಗೆ ಕಾಮಗಾರಿಯ ವಿವಾದವೇ ಹತ್ಯೆಗೆ ಪ್ರಮುಖ ಕಾರಣ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಹರಿರಾಂ ಶಂಕರ್‌ ತಿಳಿಸಿದ್ದಾರೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ರಾಮ್ ಪೂಜಾರಿ ಯುಪಿಸಿಎಲ್‌ ವ್ಯಾಪ್ತಿಯ ಪೈಪ್‌ಲೈನ್‌ ಮತ್ತು ಕಾಂಕ್ರೀಟ್‌ ರಸ್ತೆ ಕಾಮಗಾರಿ ಪಡೆಯಲು ಬಯಸಿದ್ದ. ಆದರೆ ಗುತ್ತಿಗೆ ಡೇವಿಡ್ […]

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ- ಕರವೇ ಆಗ್ರಹ; ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ- ಎಚ್ಚರಿಕೆ

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ಹೊಸ ಕಟ್ಟಡದಲ್ಲಿ ಆಸ್ಪತ್ರೆಯ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ […]

ಉಡುಪಿ ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸ: ನೋಟಿಸ್‌ಗೆ ಸಿದ್ಧತೆ- ಡಿಸಿ ಸ್ವರೂಪ ಟಿ.ಕೆ.

ಉಡುಪಿ: ಎನ್ಯುಮರೇಷನ್‌ ಹಂತದಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕ್ ಆಗದಿರುವ 31,903 ಪ್ರಕರಣಗಳು ಹಾಗೂ ಲಿಂಕೇಜ್‌ ಪೂರ್ಣಗೊಂಡ ಬಳಿಕದ ಪರಿಶೀಲನೆಯಲ್ಲಿ 65,803 ‘ಲಾಜಿಕಲ್‌ ಡಿಸ್ಕ್ರೆಪೆನ್ಸಿ (discrepancy) /ಅನಾಮಲಿಸ್‌ (anomalies) ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹಿಂದಿನ ಮತದಾರರ ಪಟ್ಟಿಯೊಂದಿಗೆ ವಿವರಗಳು ಲಿಂಕ್ ಆಗದಿರುವ ಪ್ರಕರಣಗಳು ಹಾಗೂ ಲಿಂಕೇಜ್‌ ಬಳಿಕದ ಪರಿಶೀಲನೆಯಲ್ಲಿ ತಾರ್ಕಿಕ ವ್ಯತ್ಯಾಸ ಅಥವಾ ಇತರ ಅಸಂಗತತೆ ಕಂಡುಬಂದ ಪ್ರಕರಣಗಳನ್ನು ಗುರುತಿಸಿ, ಸಂಬಂಧಪಟ್ಟ ಚುನಾವಣಾ […]

ಫ್ರ್ಯಾಂಚೈಸ್ ಮಾಲೀಕರಾಗುವ ಅವಕಾಶ

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಗಸ್ಟ್ 25ರಂದು ಈದ್ ಮಿಲಾದ್ ರಜೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯನ್ನು ಆ.26ರ ಬದಲಾಗಿ ಆ.25ರಂದು ನೀಡಲು ನಿರ್ಧರಿಸಲಾಗಿದೆ.ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.ಈದ್ ಮಿಲಾದ್ ಹಬ್ಬದ ಅಂಗವಾಗಿ ಆ.26ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ, ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ರಜೆಯನ್ನು ಆ.25ಕ್ಕೆ ಬದಲಾಯಿಸಲು ನಿಯಮಾನುಸಾರ […]