ಉಡುಪಿ: ಯುವ ಸ್ಯಾಕ್ಸಫೋನ್ ವಾದಕಿ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ (22) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.ನೀಲಾವರ ಗ್ರಾಮದ ನಿವಾಸಿ ನಮೃತಾ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ಅವರನ್ನು ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ಮುದ್ದು ಕೃಷ್ಣ ಸ್ಪರ್ಧೆ 2026: ವಿಜೇತರಿಗೆ ಕಾದಿದೆ ಭರ್ಜರಿ ಬಹುಮಾನಗಳು

ಉಡುಪಿ: ಕಿದಿಯೂರುಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ‘ಮುದ್ದು ಕೃಷ್ಣ ಸ್ಪರ್ಧೆ 2026’ ಆಯೋಜಿಸಲಾಗಿದೆ. Yad Bhavam Tad Bhavati’ ಎಂಬ ಧ್ಯೇಯವಾಕ್ಯದೊಂದಿಗೆ ಪುಟಾಣಿಗಳ ಪ್ರತಿಭೆ ಹಾಗೂ ಸಂಭ್ರಮಕ್ಕೆ ವೇದಿಕೆ ಕಲ್ಪಿಸಲು ಶಾಲೆ ಮುಂದಾಗಿದೆ. ಪುಟಾಣಿ ಕೃಷ್ಣಪ್ರೇಮಿಗಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಈ ವರ್ಣರಂಜಿತ ಕಾರ್ಯಕ್ರಮವು ಸೆಪ್ಟೆಂಬರ್ 2 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಉಡುಪಿಯ ನಿಟ್ಟೂರಿನ ಜ್ಞಾನಕಾಶಿ ಕ್ಯಾಂಪಸ್‌ನಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌ನ ಜ್ಞಾನ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. 2ರಿಂದ 5 ವರ್ಷದ […]
ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟ, ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಮುಡಿಗೆ

ಜೈಪುರ: ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ (Kaziah Liz Mejo) ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾನುವಾರ ಜೈಪುರದ ಜೀ ಸ್ಟುಡಿಯೋದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ 52 ಫೈನಲಿಸ್ಟ್‌ಗಳನ್ನು ಹಿಂದಿಕ್ಕಿ ಕಾಜಿಯಾ ಪ್ರಶಸ್ತಿ ಗೆದ್ದಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2025ರ ವಿಜೇತೆ ಮಣಿಕಾ ವಿಶ್ವಕರ್ಮ ಅವರು ಗ್ರ್ಯಾಂಡ್ ಫಿನಾಲೆ ವೇಳೆ ಕಾಜಿಯಾ ಅವರಿಗೆ ಕಿರೀಟ ತೊಡಿಸಿ, ತಮ್ಮ ಉತ್ತರಾಧಿಕಾರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಮಿಸ್ […]
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ- ಪಕ್ಕದಲ್ಲಿದ್ದ ಕಾರು, ಸ್ಕೂಟರ್‌ಗೂ ತಗುಲಿದ ಬೆಂಕಿ; ಇಬ್ಬರು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.ಘಟನೆ ವೇಳೆ ಸಮಯಪ್ರಜ್ಞೆ ಮೆರೆದ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ಅವರು ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆದು ಮನೆಯವರನ್ನು ಹಾಗೂ ಆಸ್ತಿಯನ್ನು ರಕ್ಷಿಸುವಲ್ಲಿ ನೆರವಾದರು.ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ತೀವ್ರಗೊಂಡು […]
ರಾಜ್ಯದಲ್ಲಿ SIR ಪೂರ್ಣ: 1.07 ಕೋಟಿ ಮತದಾರರ ಹೆಸರು ಡಿಲೀಟ್; 43 ಲಕ್ಷ ಮಂದಿಗೆ ನೋಟಿಸ್

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 5,54,32,314 ಮತದಾರರು ಇದ್ದು, ಪರಿಷ್ಕರಣೆ ವೇಳೆ 1,07,96,339 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, SIR ಪ್ರಕ್ರಿಯೆಯಲ್ಲಿ 15,17,042 ಮಂದಿ ಗೈರಾಗಿದ್ದಾರೆ. ಒಟ್ಟು 65,45,679 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದು, 16,39,864 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಒಂದಕ್ಕಿಂತ […]