25 ಗಂಟೆಗಳ ನಿರಂತರ ದಾಸವಾಣಿ ಗಾಯನ; ವಿಶ್ವದಾಖಲೆ ನಿರ್ಮಿಸಿದ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ ಬಿರುದು

ಉಡುಪಿ: ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ದಾಸರ ಕೀರ್ತನೆಗಳನ್ನು ನಿರಂತರವಾಗಿ ಹಾಡಿದ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.ಭಾನುವಾರ ಬೆಳಿಗ್ಗೆ 6.30ಕ್ಕೆ ಶ್ರೀಪುತ್ತಿಗೆ ಮಠದ ಭಗವದ್ಗೀತಾ ಮಂದಿರದ ನೃಸಿಂಹ ಸಭಾಭವನದಲ್ಲಿ ಆರಂಭವಾದ ಗಾಯನ ಸೋಮವಾರ ಬೆಳಿಗ್ಗೆ 7.40ರ ಸುಮಾರಿಗೆ ‘ಕೃಷ್ಣ ಏನ ಬಾರದೆ’ ದಾಸರ ಪದದೊಂದಿಗೆ ಮುಕ್ತಾಯವಾಯಿತು.ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥ ಡಾ. ಮನೀಷ್ ವಿಶ್ನೋಯಿ ಅವರು ಸಾಧನೆಯನ್ನು ಅಧಿಕೃತವಾಗಿ ಘೋಷಿಸಿ ಪ್ರಮಾಣಪತ್ರ ನೀಡಿದರು. ಬಳಿಕ ಅದಮಾರು […]

ಉಡುಪಿ: ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ: ಮಗ ವಶಕ್ಕೆ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಅವರ ಪುತ್ರ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ […]

ಈರುಳ್ಳಿ ಬೆಲೆ ಏರಿಕೆ: ಗ್ರಾಹಕರಿಗೆ ಶಾಕ್,ಕೆಲವೇ ದಿನಗಳಲ್ಲಿ ಮತ್ತಷ್ಟು ಏರಲಿದೆ ಬೆಲೆ!

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಎದುರಾಗಿದ್ದು, ತರಕಾರಿಗಳ ಬೇಡಿಕೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಈರುಳ್ಳಿ ಬೆಲೆಯೂ ಏರಿಕೆಯಾಗಿದ್ದು, ಸದ್ಯ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ ₹60ರಿಂದ ₹75ರ ವರೆಗೆ ತಲುಪಿದೆ. ಮುಂದಿನ ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ₹100ರ ಗಡಿ ಮುಟ್ಟುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಈ ಬಾರಿ ಈರುಳ್ಳಿ ಇಳುವರಿ ಸುಮಾರು 70ರಷ್ಟು ಕಡಿಮೆಯಾಗಿದೆ ಎನ್ನಲಾಗಿದೆ. […]

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ – ಮತ್ತೋರ್ವ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್; ಶೂಟರ್ ಗಳನ್ನು ಕಳುಹಿಸಿಕೊಟ್ಟಿದ್ದ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್

ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಮೂವರು ಶೂಟರ್‌ಗಳನ್ನು ಕಳುಹಿಸಿದ ಆರೋಪದ ಮೇರೆಗೆ ಬಿಹಾರದ ನಳಂದ ಜಿಲ್ಲೆಯ ಸಾರ್ಮರ್ ನಿವಾಸಿ ಕಮಲೇಶ್ವರ ಪಾಟೀಲ್ ಅವರ ಪುತ್ರ ಅನುಜ್ ಪಾಟೀಲ್‌ನನ್ನು ಸೋಮವಾರ ಬೆಳಿಗ್ಗೆ 6ರಿಂದ 6.30ರ […]