ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನ ಬರ್ಬರ ಹತ್ಯೆ

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.ಮೃತನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹ ಕಾರ್ಮಿಕರ ನಡುವೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಅಭಿಷೇಕ್‌ನನ್ನು ಸಹ ಕಾರ್ಮಿಕನೊಬ್ಬ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ ಹಾಗೂ ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.ಘಟನಾ ಸ್ಥಳಕ್ಕೆ ಉಡುಪಿ […]