ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ

ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಣಿಪಾಲದ ಕಾರ್‌ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್‌ನ (KarMic Design Pvt. Ltd.) ಸಿಇಒ ಶ್ರೀ ರತ್ನಾಕರ ಭಟ್ ಅವರು ಭಾಗವಹಿಸಿ ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ತಾಂತ್ರಿಕ ಕೌಶಲ್ಯಗಳ ಜೊತೆಗೆ ಸೃಜನಶೀಲತೆ, ನಿರಂತರ ಕಲಿಕೆ ಮತ್ತು ಶಿಸ್ತು ಬಹಳ ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೊಸ […]
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾವು; 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಭಾರಿ ಅನಾಹುತ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 41 ಭದ್ರತಾ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೋಟೆ ಕೋಶಿ ನದಿಯಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳಲ್ಲಿ ಭಾರಿ ಹಾನಿಯಾಗಿದ್ದು, ನದಿ ದಡದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. 41 ಭದ್ರತಾ ಸಿಬ್ಬಂದಿ ನಾಪತ್ತೆ […]
ಮಂಗಳೂರಿನ KSRTC ವಿಭಾಗದಲ್ಲಿದೆ ಕೆಲಸ, ನೇರ ಸಂದರ್ಶನ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು: ಉದ್ಯೋಗ ಹಾಗೂ ತರಬೇತಿಗಾಗಿ ಕಾಯುತ್ತಿರುವ ಯುವಜನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (KSRTC) ಸಿಹಿಸುದ್ದಿಯೊಂದು ಹೊರಬಿದ್ದಿದೆ. ಪುತ್ತೂರು ವಿಭಾಗದಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು (Apprenticeship) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ತರಬೇತಿ ಪಡೆಯುವುದರ ಜೊತೆಗೆ ಮಾಸಿಕ ಭತ್ಯೆ ಪಡೆಯಬಹುದಾದ ಈ ಅವಕಾಶವನ್ನು ಅರ್ಹ ಅಭ್ಯರ್ಥಿಗಳು ಬಳಸಿಕೊಳ್ಳಬಹುದಾಗಿದೆ. ಯಾವ ಟ್ರೇಡ್‌ಗಳಲ್ಲಿ ಎಷ್ಟು ಹುದ್ದೆ? ITI ವಿದ್ಯಾರ್ಹತೆ ಹೊಂದಿದವರಿಗೆ: SSLC ವಿದ್ಯಾರ್ಹತೆ ಹೊಂದಿದವರಿಗೆ: ತಿಂಗಳಿಗೆ […]
ಉಡುಪಿಯಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ; 83ಕ್ಕೂ ಹೆಚ್ಚು ತಂಡಗಳ ಭಾಗಿ

ಉಡುಪಿ: ಮೀನುಗಾರಿಕೆಗೆ ಹೆಸರುವಾಸಿಯಾದ ಉಡುಪಿ ಜಿಲ್ಲೆಯಲ್ಲಿ ಹವ್ಯಾಸಿ ಮೀನುಗಾರರು ಗಾಳ ಹಾಕಿ ಮೀನು ಹಿಡಿಯುವ ವಿಶಿಷ್ಟ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಸಮುದ್ರ ಮೀನುಗಾರಿಕೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಬದುಕಿನ ಆಧಾರವಾಗಿರುವ ಜಿಲ್ಲೆಯಲ್ಲಿ, ಬೃಹತ್ ಬಲೆಗಳ ಬದಲಿಗೆ ಗಾಳ ಬಳಸಿ ಮೀನು ಹಿಡಿಯುವ ಸ್ಪರ್ಧೆ ಗಮನ ಸೆಳೆಯಿತು. ಸಮುದ್ರ ತೀರದಲ್ಲಿ ನಡೆದ ಸ್ಪರ್ಧೆಯಲ್ಲಿ 83ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಸ್ಪರ್ಧಿಗಳು ಸಮುದ್ರದ ಅಲೆಗಳ ನಡುವೆ ಗಾಳ ಹಾಕಿ ಮೀನು ಬರುವಿಕೆಗಾಗಿ ಕಾದು ಕುಳಿತಿದ್ದರು. ಗಾಳಕ್ಕೆ ಮೀನು ಸಿಕ್ಕ ಪ್ರತಿಯೊಂದು ಕ್ಷಣವೂ […]
ನಿಮಗೆ SIR ನೋಟಿಸ್ ಬಂದ್ರೆ ಏನು ಮಾಡಬೇಕು? ವೋಟರ್ ಲಿಸ್ಟ್ ನಿಂದ ಹೆಸರು ಕಟ್ ಆಗುತ್ತಾ? ಮತದಾರರು ತಿಳಿಯಬೇಕಾದ ಸಂಪೂರ್ಣ ಮಾಹಿತಿ!

SIR ಪ್ರಕ್ರಿಯೆಯಲ್ಲಿ ಈಗಾಗಲೇ ನೀವು ಭಾಗವಹಿಸಿರುತ್ತೀರಿ. ಆದರೆ ಕೆಲವೊಂದು ಮಹತ್ವದ ತಪ್ಪುಗಳಾದಲ್ಲಿ ನೀವು ನೀಡಿದ ದಾಖಲೆ ಸರಿಯಿಲ್ಲದಿದ್ದಲ್ಲಿ ನಿಮಗೆ ನೊಟೀಸ್ ಬರುತ್ತದೆ. ಆದರೆ ನೋಟಿಸ್ ಬಂದಿರುವುದೇ ಮತದಾರರ ಪಟ್ಟಿಯಿಂದ ಹೆಸರು ಶಾಶ್ವತವಾಗಿ ತೆಗೆದುಹಾಕಲಾಗಿದೆ ಎಂದರ್ಥವಲ್ಲ ಆ.24ರಿಂದ ಸೆ.23ರವರೆಗೆ ಹಕ್ಕು-ಆಕ್ಷೇಪಣೆಗೆ ಅವಕಾಶ SIR ಪ್ರಕ್ರಿಯೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಹೆಸರು ಹೊರಗುಳಿದಿರುವ ಮತದಾರರಿಗೆ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ನೋಟಿಸ್ ನೀಡಲಾಗುತ್ತದೆ. ಈ ಅವಧಿಯಲ್ಲಿ ಮತದಾರರಿಗೆ ತಮ್ಮ ಹಕ್ಕು ಮಂಡಿಸಲು ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. BLOಗಳು ಮನೆ […]