ನಾರಾಯಣ ಗುರು ಜನ್ಮದಿನ: ಆ.30ರಂದು ಗುರು ಸಂದೇಶ ಸಾಮರಸ್ಯ ಜಾಥಾ

ಉಡುಪಿ: ಶ್ರೀ ನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9.30ಕ್ಕೆ ನಾರಾಯಣಗುರು ಆಡಿಟೋರಿಯಂನಲ್ಲಿ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 1ಕ್ಕೆ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಬಳಿಕ ಗುರು […]
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ; ₹23.56 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಉಡುಪಿ ನಗರ ಠಾಣೆ ಪೊಲೀಸರು, ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು, ವಿದೇಶಿ ಕರೆನ್ಸಿ ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೆರಂಪಳ್ಳಿ ಸಂತೋಷನಗರದ ಅರುಣ್ ಎಸ್.ವಿ. (43) ಹಾಗೂ ತೆಂಕನಿಡಿಯೂರು ಗ್ರಾಮದ ಕೌಶೀಕ್ (19) ಬಂಧಿತರು.ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರು ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದುಬೈಯಲ್ಲಿದ್ದ ಅವರು ಊರಿಗೆ ಬಂದ ಬಳಿಕ, […]
ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕಿನ ಸಾಧನಾ ಪ್ರಶಸ್ತಿ

ಉಡುಪಿ: ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು 2025–26ನೇ ಸಾಲಿನ ‘ಎ’ ವರ್ಗದ ಸಹಕಾರಿ ಸಂಘಗಳ ಜಿಲ್ಲಾ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎನ್. ರಮೇಶ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಸ್ತಿ ಪತ್ರ ಹಾಗೂ […]
ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ; ರಾಜ್ಯಸಭಾ ಸದಸ್ಯ ಡಾ.ಎಂ.ನಾಗರಾಜ್ಗೆ ಮನವಿ

ಉಡುಪಿ: ಕರಾವಳಿ ಕರ್ನಾಟಕ ಭಾಗಕ್ಕೆ (ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು) ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ತಕ್ಷಣವೇ ಮಂಜೂರು ಮಾಡಬೇಕೆಂದು ಆಗ್ರಹಿಸಿ, ಉಡುಪಿಗೆ ಆ.25 ರಂದು ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಡಾ.ಎಂ.ನಾಗರಾಜ್ ಅವರಿಗೆ ಯೂ-ಆಕ್ಟ್ ಹಾಗೂ ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಲಾಯಿತು. ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ, ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಮಾತನಾಡಿ, ಕರಾವಳಿ ಭಾಗದ ಜನಸಾಮಾನ್ಯರು, ಕಕ್ಷಿದಾರರು ಹಾಗೂ […]
ನಿಮಗೆ ವಜ್ರದ ಹೊಳಪು, ಚಿನ್ನದ ಮೆರುಗು ಕೊಡಲು ಬ್ರಹ್ಮಾವರಕ್ಕೆ ಬಂದಿದೆ TDF – ದಿ ಡೈಮಂಡ್ ಫ್ಯಾಕ್ಟರಿ ವಿಶೇಷ ಜ್ಯುವೆಲ್ಲರಿ ಎಕ್ಸಿಬಿಷನ್, ನಾಳೆಯಿಂದ ಆಭರಣ ಪ್ರಿಯರ ಭರ್ಜರಿ ಹಬ್ಬ!

ಬ್ರಹ್ಮಾವರ: ವಜ್ರದ ಹೊಳಪು, ಚಿನ್ನದ ಮೆರಗೊಂದು ಇದ್ದರೆ ಬದುಕಿಗೆ ಸಂತಸ, ಆಭರಣ ಪ್ರಿಯರ ಮನಸೂರೆಗೊಳ್ಳುವ ವಿಶೇಷ ಜ್ಯುವೆಲ್ಲರಿ ಎಕ್ಸಿಬಿಷನ್ಗೆ ಬ್ರಹ್ಮಾವರ ಸಜ್ಜಾಗಿದೆ! TDF – ದಿ ಡೈಮಂಡ್ ಫ್ಯಾಕ್ಟರಿ ವತಿಯಿಂದ ಆಗಸ್ಟ್ 28, 29 ಮತ್ತು 30ರಂದು ಮೂರು ದಿನಗಳ ಕಾಲ ವಿಶೇಷ ಆಭರಣ ಪ್ರದರ್ಶನ ಆಯೋಜಿಸಲಾಗಿದೆ. ಬ್ರಹ್ಮಾವರದ ಫಾರ್ಚೂನ್ ಪ್ಲಾಜಾ ಹೋಟೆಲ್ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 7 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ವಜ್ರ ಹಾಗೂ ಚಿನ್ನದ ಆಭರಣಗಳ ಆಕರ್ಷಕ ಸಂಗ್ರಹ ಲಭ್ಯವಿರಲಿದೆ. ಗ್ರಾಹಕರಿಗಾಗಿ […]