ಅಷ್ಟಮಿ ಸಂಭ್ರಮಕ್ಕೆ ಹುಲಿಗಳ ಘರ್ಜನೆ

ಉಡುಪಿ: ಕೃಷ್ಣನೂರು ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು, ಅಷ್ಟಮಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕೃಷ್ಣಮಠದ ಸುತ್ತಮುತ್ತ ಹಾಗೂ ರಥಬೀದಿಯಲ್ಲಿ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಅಷ್ಟಮಿ ಸಂಭ್ರಮಕ್ಕೆ ಕರಾವಳಿಯ ಜನಪದ ಸೊಗಡಿನ ಹುಲಿವೇಷ ಮತ್ತಷ್ಟು ಮೆರುಗು ನೀಡಲಿದೆ. ಅಷ್ಟಮಿ ಸಂಭ್ರಮಕ್ಕೆ ಹುಲಿಗಳ ಘರ್ಜನೆ; ಎರಡು ದಿನ ಹುಲಿವೇಷ ಸ್ಪರ್ಧೆ ಅಷ್ಟಮಿ ಅಂಗವಾಗಿ ಕೃಷ್ಣಮಠದ ರಾಜಾಂಗಣದಲ್ಲಿ ಸೆ.4 ಮತ್ತು 5ರಂದು ಎರಡು ದಿನಗಳ ಕಾಲ ಹುಲಿವೇಷ ಸ್ಪರ್ಧೆ ಆಯೋಜಿಸಲಾಗಿದೆ. ಹುಲಿವೇಷ ತಂಡಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ […]

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಮೃತ್ಯು

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಆ.27ರಂದು ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಿನ್ನೆಲೆ ಹಾಗೂ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ. ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು […]

ಇನ್ನಂಜೆಯಲ್ಲಿ ಕಾಪು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಇನ್ನಂಜೆ ಎಸ್.ವಿ.ಎಚ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ–ಬಾಲಕಿಯರ ತ್ರೋಬಾಲ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಎಸ್.ವಿ.ಎಚ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನ ಕುಮಾರ್, ಉಡುಪಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್, ಉದಯ್ ಇನ್ನಂಜೆ, ಇನ್ನಂಜೆ ಗ್ರಾಮ ಪಂಚಾಯಿತಿ […]

ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು: ಶ್ರೀ ಧೂಮಾವತಿ ಯುವಕ ಮಂಡಲ (ರಿ) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ), ವಾದಿರಾಜ ಕಾಂಪ್ಲೆಕ್ಸ್, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಆಗಸ್ಟ್ 30ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಟ್ಟೂರಿನ ಶ್ರೀ ಸೋಮನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ನಿಟ್ಟೂರು ಇಲ್ಲಿಯ ಶ್ರೀಮತಿ ಯಶೋಧ ಗುಂಡುರಾಜ ಸಭಾಭವನದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಣಿಪಾಲ, […]

Kambala: ನೀವು ಒಳ್ಳೆಯ ಕ್ರೀಡಾಪಟುಗಳಾ? ಹಾಗಾದರೆ ಕಂಬಳ ಗದ್ದೆಯ ಅಖಾಡ ಸಿದ್ಧವಾಗಿದೆ! ಈ ಚಾನ್ಸ್‌ ಮಿಸ್‌ ಮಾಡಬೇಡಿ

ಕಂಬಳ ಓಟಗಾರರಾಗಬೇಕು ಅನ್ನೋ ಕನಸು ಕಾಣುತ್ತಿರುವ ಯುವಕರೇ, ನಿಮಗಾಗಿ ಇಲ್ಲಿದೆ ಸುವರ್ಣ ಅವಕಾಶ. ಸೆಪ್ಟೆಂಬರ್ 6ರಂದು ಕಾರ್ಕಳ ಮಿಯಾರಿನ ಕಂಬಳ ಕರೆಯಲ್ಲಿ ಕಂಬಳ ಓಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 15ರಿಂದ 35 ವರ್ಷದ ಯುವಕರು ಭಾಗವಹಿಸಬಹುದು. ಉಡುಪಿ ಕಾರ್ಕಳ: ಕಂಬಳದ ಅಂಕಣದಲ್ಲಿ ಓಟಗಾರನಾಗಿ (Runner) ಮಿಂಚಬೇಕು ಎಂದು ಕನಸು ಕಾಣುತ್ತಿರುವ ಯುವಕರಿಗೆ ಉತ್ತಮ ಅವಕಾಶವೊಂದು ಬಂದಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ (Karnataka Sports Association) ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿಯ […]