ಅಷ್ಟಮಿಗೆ ಸಮುದ್ರ ಜೀವಿಯ ವೇಷದಲ್ಲಿ ರವಿ ಕಟಪಾಡಿ; ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗೆ ನೆರವು

ಉಡುಪಿ: ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಕಳೆದ 14 ವರ್ಷಗಳಿಂದ ವಿವಿಧ ವೇಷ ಧರಿಸಿ ಹಣ ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ಸಮಾಜಸೇವಕ ರವಿ ಕಟಪಾಡಿ ಹಾಗೂ ಅವರ ತಂಡ, ಈ ಬಾರಿ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟಾಣಿ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲು ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರವಿ ಕಟಪಾಡಿ, ‘ಕಳೆದ 10 ವರ್ಷಗಳಲ್ಲಿ ನಮ್ಮ ತಂಡವು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಒಟ್ಟು ₹1.85 ಕೋಟಿ […]

ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವ: ಮೊದಲ ದಿನ ಮಹಾಪೂಜೆ

ಉಡುಪಿ: ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು. ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲ್ಗೊಂಡರು. ಬಳಿಕ ಶ್ರೀಗುರುರಾಯರ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು. ಮಹಾಪೂಜೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದು, ಶ್ರೀಗುರುರಾಯರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ವಾಲಿಬಾಲ್ ಫ್ರೆಂಡ್ಸ್ ಪರ್ಕಳ ತಂಡದ ಲೋಗೊ ಬಿಡುಗಡೆ

ಉಡುಪಿ: ಪರ್ಕಳದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡದ ನೂತನ ಲೋಗೊ ಬಿಡುಗಡೆ ಕಾರ್ಯಕ್ರಮವು ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡವು ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ದೇವಸ್ಥಾನದ ವಾರ್ಷಿಕ ಜಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮದಲ್ಲಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲೂ ತಂಡದ ಸದಸ್ಯರು ಸಹಕಾರ […]

ಮಣಿಪಾಲದ  MSDC  ಯಲ್ಲಿ ಜಪಾನೀಸ್ ಕಲಿಯಿರಿ, ಜಾಗತಿಕ ಮಟ್ಟದಲ್ಲಿ ಮಿಂಚಿ, ಆನ್‌ಲೈನ್ ಜಪಾನೀಸ್ ಭಾಷಾ ಕೋರ್ಸ್‌ಗೆ ಶೇ.50 ರವರೆಗೆ ರಿಯಾಯಿತಿ

ಮಣಿಪಾಲ: ಜಪಾನೀಸ್ ಭಾಷೆ ಕಲಿಯಲು ಆಸಕ್ತಿ ಹೊಂದಿರುವವರಿಗೆ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ (MSDC), ಚುವೊ ಪಬ್ಲಿಷಿಂಗ್ ಕಂಪನಿ ಹಾಗೂ ಕೆಟಿಸಿ ಇಂಡಿಯಾ ಸ್ಕಿಲ್ಸ್ ಅಂಡ್ ನ್ಯೂಟ್ರಿಷನ್ ಸೆಂಟರ್‌ ಸಹಯೋಗದಲ್ಲಿ ಆನ್‌ಲೈನ್‌ ವೀಕೆಂಡ್‌ ಬ್ಯಾಚ್‌ನ N5 ಜಪಾನೀಸ್ ಭಾಷಾ ಕೋರ್ಸ್‌ ಆರಂಭಿಸಲಾಗುತ್ತಿದೆ. ಕೋರ್ಸ್‌ನ ಸಾಮಾನ್ಯ ಶುಲ್ಕ ₹20,000 ಆಗಿದ್ದು, ವಿಶೇಷ ರಿಯಾಯಿತಿ ದರದಲ್ಲಿ ಅರ್ಹ ಅಭ್ಯರ್ಥಿಗಳಿಗೆ ₹10,000ಕ್ಕೆ ಕೋರ್ಸ್ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಅಂದರೆ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ. MSDC ಸಿಬ್ಬಂದಿ, ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ […]

ನೇಪಾಳ ಭೀಕರ ಪ್ರವಾಹ: ಏರುತ್ತಲೇ ಇದೆ ಸಾವಿನ ಸಂಖ್ಯೆ, 626 ಜನ ಸಾವು, 2,500ಕ್ಕೂ ಅಧಿಕ ಮಂದಿ ನಾಪತ್ತೆ

ಕಠ್ಮಂಡು: ನೇಪಾಳ-ಚೀನಾ ಗಡಿಯ ಸಮೀಪ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಹಿಮನದಿ ಕುಸಿದ ಪರಿಣಾಮ ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ ಹಾಗೂ ಬಂಡೆಗಳು ಕೊಚ್ಚಿಕೊಂಡು ಬಂದಿವೆ. ಇದರಿಂದ ಭೋಟೆ ಕೋಶಿ ನದಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು, ರಸುವಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಪ್ರವಾಹದ […]