ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಾಘವೇಂದ್ರ ಮಠದಲ್ಲಿ ವಿಶೇಷ ಪೂಜೆ

ಉಡುಪಿ: ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪಲ್ಲ ಪೂಜೆಯನ್ನೂ ನೆರವೇರಿಸಿದರು. ಬಳಿಕ ರಥೋತ್ಸವದಲ್ಲಿ ಪಾಲ್ಗೊಂಡ ಅವರು, ಸಂಪ್ರದಾಯದಂತೆ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು. ಆರಾಧನಾ ಮಹೋತ್ಸವದ ಅಂಗವಾಗಿ ಮಠದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು […]
ಉಡುಪಿಯಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಾಳಸರ್ಪ ಯೋಗ ಪ್ರಸ್ತಾಪ: ದೇಶ-ಲೋಕಕ್ಕೆ ಅನಾಹುತದ ಭೀತಿ!

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇತ್ತೀಚೆಗೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಾಳಸರ್ಪ ಯೋಗದ ಪರಿಣಾಮದಿಂದ ಜಗತ್ತಿನಲ್ಲಿ ವಿವಿಧ ಅನಾಹುತಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪ್ರಸ್ತಾಪವಾಗಿದೆ ಎಂದು ಮಠದ ಪ್ರಮುಖರು ತಿಳಿಸಿದ್ದಾರೆ. ಮಠದ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಅಷ್ಟಮಂಗಲ ಪ್ರಶ್ನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ರಾಹು ಮತ್ತು ಕೇತುಗಳ ಮಧ್ಯೆ ಉಳಿದ ಎಲ್ಲ ಗ್ರಹಗಳು ಬರುವ ಕಾಳಸರ್ಪ ಯೋಗದ ಕುರಿತು ಚರ್ಚೆಯಾಗಿದ್ದು, ಇದರ ಪರಿಣಾಮ ಭೂಮಂಡಲದ ಮೇಲೆ ಇರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ. ಪ್ರಾಕೃತಿಕ ವಿಕೋಪಗಳು, ರಾಜಕೀಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ

ಕುಂದಾಪುರ (ಆ.24): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿಶುಭ ಹಾರೈಸಿದರು.ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿಕೋವಾಡಿ, ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿಶ್ರೀಮತಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ,ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟುಸಂಭ್ರಮಿಸಿದರು.
ವಿಪತ್ತು ನಿರ್ವಹಣೆಗೆ ವಿದ್ಯಾರ್ಥಿಗಳಿಗೆ ತರಬೇತಿ: ಸಚೇತ್ ಸುವರ್ಣ

ಮೂಡುಬಿದಿರೆ: ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಬಾಲ್ಯದಲ್ಲೇ ನಿಸ್ವಾರ್ಥ ಸೇವೆ ಮತ್ತು ದೇಶಪ್ರೇಮದ ಗುಣಗಳನ್ನು ಬೆಳೆಸಲು ಇದು ಸಹಕಾರಿ ಎಂದು ದಕ್ಷಿಣ ಕನ್ನಡ ಜೂನಿಯರ್ ರೆಡ್ ಕ್ರಾಸ್ ಸಬ್ ಕಮಿಟಿಯ ನಿರ್ದೇಶಕ ಸಚೇತ್ ಸುವರ್ಣ ಹೇಳಿದರು.ಆಳ್ವಾಸ್ ಪದವಿಪೂರ್ವ ಕಾಲೇಜಿನ ವತಿಯಿಂದ ಶಿವರಾಮ ಕಾರಂತ ವೇದಿಕೆಯಲ್ಲಿ ಆಯೋಜಿಸಿದ್ದ ಜೂನಿಯರ್ ರೆಡ್ ಕ್ರಾಸ್ ಘಟಕದ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. […]
ಗ್ರಾಹಕರಿಗೆ ಕಹಿಯಾದ ಬೆಲ್ಲ,ಸಕ್ಕರೆ: ಏಕಾಏಕಿ ಬೆಲೆ ಏರಿಕೆಗೆ ಗ್ರಾಹಕರು ಕಂಗಾಲು!

ಬೆಂಗಳೂರು: ದರ ಏರಿಕೆಯ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ ಮತ್ತಷ್ಟು ಹೊರೆ ತಂದಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಹಾಗೂ ಬೆಲ್ಲದ ದರದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಸಿಹಿ ಪದಾರ್ಥಗಳೂ ದುಬಾರಿಯಾಗಿವೆ. ನಾಲ್ಕು ದಿನಗಳ ಹಿಂದೆ ಕೆ.ಜಿಗೆ ₹66ರಷ್ಟಿದ್ದ ಸಕ್ಕರೆ ದರ ಇದೀಗ ₹70ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಬೆಲ್ಲದ ಬೆಲೆಯಲ್ಲೂ ಏಕಾಏಕಿ ₹12ರಷ್ಟು ಹೆಚ್ಚಳವಾಗಿದ್ದು, ನಾಲ್ಕು ದಿನಗಳ ಹಿಂದೆ ₹68 ಇದ್ದ ಕೆ.ಜಿ. ಬೆಲ್ಲದ ದರ ಇದೀಗ ₹80ಕ್ಕೆ ತಲುಪಿದೆ. […]