ಚಲಿಸುವ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: CPR ನೀಡಿ ಜೀವ ಉಳಿಸಿದ ಸಹ ಪ್ರಯಾಣಿಕರು!

ಬಂಟ್ವಾಳ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಹಠಾತ್ ಎದೆನೋವಿನಿಂದ ಕುಸಿದುಬಿದ್ದ ಘಟನೆ ಶನಿವಾರ ಸಂಜೆ ನಡೆದಿದ್ದು, ಬಸ್‌ನಲ್ಲಿದ್ದ ಸಹ ಪ್ರಯಾಣಿಕರ ಸಮಯಪ್ರಜ್ಞೆ ಹಾಗೂ ತಕ್ಷಣದ ಪ್ರಥಮ ಚಿಕಿತ್ಸೆಯಿಂದ ವ್ಯಕ್ತಿಯ ಜೀವ ಉಳಿದಿದೆ. ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ರಹೀಮ್ ಕುಕ್ಕಾಜೆ ಅವರು ಶನಿವಾರ ಸಂಜೆ ಸುಮಾರು 4.45ಕ್ಕೆ ಮೆಲ್ಕಾರ್‌ನಿಂದ ಸ್ಟೇಟ್ ಬ್ಯಾಂಕ್–ಪುತ್ತೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಬಸ್ ಸ್ವಲ್ಪ ದೂರ ಸಾಗುತ್ತಿದ್ದಂತೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ತಕ್ಷಣ ನೆರವಿಗೆ ಧಾವಿಸಿದ ಸಹ […]
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಮನೆ ಬಾಗಿಲಿಗೆ ಬರಲಿದ್ದಾರೆ ಅಧಿಕಾರಿಗಳು

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದೆ. ಒಂದು ತಿಂಗಳ ಕಾಲ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಸಂದೇಶದ ಮೂಲಕ ಈ ಕುರಿತು ಮಾಹಿತಿ ನೀಡಿದ್ದು, ಫಲಾನುಭವಿಗಳು ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ […]
ಬೆಳ್ತಂಗಡಿ: ಹುಟ್ಟುಹಬ್ಬದ ಮರುದಿನವೇ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳದಲ್ಲಿ 14 ವರ್ಷದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ. ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಹಳೆಕೋಟೆಯ ವಾಣಿ ಹೈಸ್ಕೂಲ್‌ನಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಶನಿವಾರ ಸಂಜೆ ಬಾಲಕ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಎನ್ನಲಾಗಿದೆ. ಆದರೆ, ಮರುದಿನ ಬೆಳಗ್ಗೆ ಆತ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು […]