ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 29. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ […]
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಇದೇ ತಿಂಗಳು 33ನೇ ಕಂತಿನ ಹಣ ಜಮೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹಿಳೆಯರಿಗೆ ಸಿಹಿಸುದ್ದಿ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಇಂದಿನಿಂದ ಮನೆ-ಮನೆ ಸರ್ವೆ ಕಾರ್ಯ ಆರಂಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ಪೂರ್ಣಗೊಳ್ಳುವವರೆಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು. ಆದರೆ, ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರೊಂದಿಗೆ ನಡೆದ […]
ಸೆಪ್ಟೆಂಬರ್ ಆರಂಭದಲ್ಲೇ ಏರಿತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ,ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಶಾಕ್

ನವದೆಹಲಿ: ಸೆಪ್ಟೆಂಬರ್ ಆರಂಭದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ದರ ಏರಿಕೆಯ ಶಾಕ್ ನೀಡಿವೆ. 19 ಕೆ.ಜಿ. ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹9.50ರವರೆಗೆ ಹೆಚ್ಚಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಮಾಹಿತಿಯಂತೆ, ವಾಣಿಜ್ಯ ಸಿಲಿಂಡರ್ ದರ ಪರಿಷ್ಕರಣೆಯಾಗಿದ್ದರೂ ಗೃಹ ಬಳಕೆಯ 14 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಕೆ.ಜಿ. ಹಾಗೂ 10 ಕೆ.ಜಿ. ಸಿಲಿಂಡರ್‌ಗಳ ದರದಲ್ಲೂ ಹೆಚ್ಚಿನ ಬದಲಾವಣೆ ಇಲ್ಲ. ಸಿಲಿಂಡರ್‌ಗಳ ಪರಿಷ್ಕೃತ ದರ:
ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ವೇಗ ಹಾಗೂ ಉತ್ತಮ ಬೆಂಬಲವನ್ನು ಒದಗಿಸುವ ಸಲುವಾಗಿಕರ್ನಾಟಕ ರಾಜ್ಯದಲ್ಲಿ 418 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಮುಂದಾದ

ಬ್ಯಾಂಕ್ ಆಫ್ ಬರೋಡಾ ಆಯ್ಕೆಯಾಗುವ ನೂತನ ಅಧಿಕಾರಿಗಳು ತಮ್ಮ ವೃತ್ತಿಜೀವನದ ಆರಂಭಿಕ 12 ವರ್ಷಗಳ ಕಾಲ ಕಡ್ಡಾಯವಾಗಿತಮ್ಮದೇ ಸ್ವಂತ ರಾಜ್ಯದಲ್ಲಿ ಸೇವೆ ಸಲ್ಲಿಸಲಿದ್ದು, ಈ ಮೂಲಕ ಸ್ಥಳೀಯ ಪ್ರತಿಭಾವಂತ ಯುವ ಸಮುದಾಯಕ್ಕೆಅತ್ಯುನ್ನತ ಗುಣಮಟ್ಟದ ವೃತ್ತಿ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಗ್ರಾಮೀಣ ತಳಮಟ್ಟದ ಬ್ಯಾಂಕಿಂಗ್ಜಾಲವನ್ನು ಮತ್ತಷ್ಟು ಬಲಪಡಿಸುವುದು ಬ್ಯಾಂಕ್ ನ ಪ್ರಮುಖ ಉದ್ದೇಶವಾಗಿದೆ. ದೇಶದಾದ್ಯಂತ ಒಟ್ಟಾರೆಯಾಗಿ 2,482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಬ್ಯಾಂಕ್ ಆಫ್ಬರೋಡಾ ಸಂಸ್ಥೆಯು ಹಮ್ಮಿಕೊಂಡಿರುವ ಬೃಹತ್ ರಾಷ್ಟ್ರವ್ಯಾಪಿ ನೇಮಕಾತಿ ಅಭಿಯಾನದ ಒಂದು ಮಹತ್ವದ […]