ಗೃಹಜ್ಯೋತಿ ಮರುಪರಿಶೀಲನೆ: ನೀವು ದಾಖಲೆ ನೀಡದೇ ಇದ್ದರೆ ಉಚಿತ ವಿದ್ಯುತ್ ಸೇವೆ ನಿಮಗೆ ಸಿಗಲ್ಲ!

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಯೋಜನೆಯ ಮರುಪರಿಶೀಲನೆಗೆ ನಿಗದಿಪಡಿಸಿದ್ದ ಆಗಸ್ಟ್ 31ರ ಗಡುವನ್ನು ಸೆಪ್ಟೆಂಬರ್ 30, 2026ರವರೆಗೆ ವಿಸ್ತರಿಸಿದೆ. ರಾಜ್ಯಾದ್ಯಂತ ಇದುವರೆಗೆ ಶೇ.70ರಷ್ಟು ಫಲಾನುಭವಿಗಳು ಮಾತ್ರ ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಉಳಿದ ಶೇ.30ರಷ್ಟು ಫಲಾನುಭವಿಗಳು ತಮ್ಮ ಮಾಹಿತಿಯನ್ನು ದೃಢೀಕರಿಸಿಕೊಳ್ಳಲು ಇನ್ನೊಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಮರುಪರಿಶೀಲನೆ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳಿಗೆ ಮಾತ್ರ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯಲಿದೆ. ಮನೆ ಬಾಗಿಲಿಗೇ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ ಗೃಹಜ್ಯೋತಿ ಮರುಪರಿಶೀಲನೆಗಾಗಿ […]
ಮದುವೆ ಮನೆಯ ಮೇಲೆಯೇ ಅಮೆರಿಕ ದಾಳಿ; 5 ಮಂದಿ ಸಾವು, ಹಲವರಿಗೆ ಗಾಯ

ಇರಾನ್ ವಿರುದ್ಧ ಅಮೆರಿಕ ಮತ್ತೊಮ್ಮೆ ವೈಮಾನಿಕ ದಾಳಿ ನಡೆಸಿದ್ದು, ದಕ್ಷಿಣ ಇರಾನ್‌ನ ಕೊಹೆಸ್ತಾಕ್ ನಗರದಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಮನೆಯೂ ದಾಳಿಗೆ ತುತ್ತಾಗಿದೆ. ಮಂಗಳವಾರ ಸಂಜೆ ನಡೆದ ದಾಳಿಯಿಂದ ಪ್ರದೇಶದಲ್ಲಿ ಭಾರಿ ಹಾನಿಯಾಗಿರುವುದನ್ನು ತೋರಿಸುವ ವಿಡಿಯೊವನ್ನು ಇರಾನಿನ ರೆಡ್ ಕ್ರೆಸೆಂಟ್ ಬಿಡುಗಡೆ ಮಾಡಿದೆ. ಇರಾನ್‌ನ ಹಲವು ಗುರಿಗಳ ಮೇಲೆ ಅಮೆರಿಕ ಸೇನೆ ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದು, ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಹಲವು ಪ್ರದೇಶಗಳಲ್ಲಿ ಕ್ಷಿಪಣಿ ಹಾಗೂ ಡ್ರೋನ್ […]
ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹ ಮುಖ್ಯ: ಚೇತನ್ ಆರ್

ಉಡುಪಿ: ಪ್ರಕರಣಗಳ ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯಗಳನ್ನು ಸಮರ್ಪಕವಾಗಿ ಸಂಗ್ರಹಿಸಿ, ಅವುಗಳನ್ನು ಪ್ರಕರಣದೊಂದಿಗೆ ಜೋಡಿಸಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವುದು ಅತ್ಯಂತ ಮುಖ್ಯ. ಇದರಿಂದ ಆರೋಪಿಗೆ ಶಿಕ್ಷೆ ಕೊಡಿಸುವುದರ ಜತೆಗೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಫೊರೆನ್ಸಿಕ್ ಸೈನ್ಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ (ಡಿಐಜಿ) ಚೇತನ್ ಆರ್. ಹೇಳಿದರು. ಮಣಿಪಾಲ ಕೆಎಂಸಿಯ ಡಾ. ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆದ ಮಂಗಳೂರು ಪಶ್ಚಿಮ ವಲಯ ಮಟ್ಟದ ಎಂಟನೇ […]