SIR: ರಾಜ್ಯದಲ್ಲಿ 7.31 ಲಕ್ಷ ಮತದಾರರಿಗೆ ನೋಟಿಸ್; ದಾಖಲೆ ಸಲ್ಲಿಸಲು ಸೆ.24 ಕೊನೆ ದಿನ!

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್ ವಿತರಣೆ ಕಾರ್ಯವನ್ನು ಚುರುಕುಗೊಳಿಸಿದೆ. ಅನ್‌ಮ್ಯಾಪಿಂಗ್ ಆಗಿರುವ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಗೊಂದಲವಿರುವ ಪ್ರಕರಣಗಳ ಪರಿಶೀಲನೆಗಾಗಿ ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 43,81,143 ಮತದಾರರಿಗೆ ನೋಟಿಸ್ ನೀಡುವ ಗುರಿ ಹೊಂದಲಾಗಿದ್ದು, ಈ ಪೈಕಿ ಇದುವರೆಗೆ 7,31,770 ಮಂದಿಗೆ ನೋಟಿಸ್ ವಿತರಿಸಲಾಗಿದೆ. ಇನ್ನೂ 36,49,373 ಮತದಾರರಿಗೆ ನೋಟಿಸ್ ನೀಡುವುದು ಬಾಕಿ ಇದೆ. ನೋಟಿಸ್ ಪಡೆದವರ ಪೈಕಿ ಇದುವರೆಗೆ 206 […]
ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್: 3 ಡ್ರೋನ್ ತಂಡ, 45 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ; ಏಳು ಕಡೆ ವಾಹನ ನಿಲುಗಡೆ ವ್ಯವಸ್ಥೆ

ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.ಮಹೋತ್ಸವದ ಬಂದೋಬಸ್ತ್‌ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 25 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 35 ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 186 ಹೆಡ್ ಕಾನ್‌ಸ್ಟೆಬಲ್, ಪೊಲೀಸ್ ಕಾನ್‌ಸ್ಟೆಬಲ್ ಹಾಗೂ […]
ಮಂಗಳೂರು:ಹೊಟೇಲ್‌ನಲ್ಲಿ ಯುವಕ, ಯುವತಿಯರಿಗೆ ಬೆದರಿಕೆ ಆರೋಪ, ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ

ಮಂಗಳೂರು: ವಿವಿಧ ಧರ್ಮಗಳಿಗೆ ಸೇರಿದ ಯುವಕ-ಯುವತಿಯರ ಗುಂಪಿಗೆ ಹೊಟೇಲ್‌ನಲ್ಲಿ ರೌಡಿ ಹಿನ್ನೆಲೆಯ ವ್ಯಕ್ತಿಗಳು ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಒಳಗೊಂಡ ಗುಂಪು ಹೊಟೇಲ್‌ನಲ್ಲಿ ಕುಳಿತಿದ್ದ ವೇಳೆ ಕೆಲವರು ಅಲ್ಲಿಗೆ ಬಂದು ಅವರನ್ನು ಪ್ರಶ್ನಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಯುವಕರು ಹೊಟೇಲ್‌ನಿಂದ ಹೊರಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ಬಳಿಕ ಪೊಲೀಸರು ಹೊಟೇಲ್‌ಗೆ ತೆರಳಿ, […]
ರೇಣುಕಾಸ್ವಾಮಿ ಹತ್ಯೆ ಕೇಸ್ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

ಬಂಧನ ಭೀತಿ ಹಿನ್ನಲೆ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ 59 ಸಿಸಿಹೆಚ್ ಕೋರ್ಟ್ (Court), ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು, ಪುನೀತ್‌ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ತಲೆಮರೆಸಿಕೊಂಡಿದ್ದ. ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಜೊತೆ ಕಾನ್ಫರೇನ್ಸ್ […]
ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರ್ಕಳ-ಮಂಗಳೂರು ಖಾಸಗಿ ಎಕ್ಸ್‌ಪ್ರೆಸ್ ಬಸ್, 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮಂಗಳೂರು: ಕಾರ್ಕಳದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದೃಷ್ಟವಶಾತ್ ಎಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಅಪಘಾತದಲ್ಲಿ ಬೆಳ್ಮಣ್ ನಿವಾಸಿ ಆದಿತ್ಯ ಎಂಬ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸಾರ್ವಜನಿಕರ […]