‘ನನ್ನ ಹಾಟ್‌ ವಿಡಿಯೋಗಳು ತುಂಬಾ ಜನರಿಗೆ ನೆಮ್ಮದಿ ಕೊಡುತ್ತೆ,ಮೈಮಾಟ ತೋರಿಸಿದ್ರೆ ತಪ್ಪೇನು’ ಎಂದ ನಟಿ ಪೂನಂ!

ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಮಾಡೆಲ್‌ ಹಾಗೂ ನಟಿ ಪೂನಂ ಪಾಂಡೆ, ಇದೀಗ ಭಾರತದಲ್ಲಿ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸುವ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ತಮ್ಮ ವಿಡಿಯೋಗಳನ್ನು ‘ಸಾಮಾಜಿಕ ಸೇವೆ’ ಎಂದು ಬಣ್ಣಿಸಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆರ್‌ವಿಸಿಜೆ ಮೂವೀಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪೂನಂ ಪಾಂಡೆ, ತಮ್ಮ ಹಾಟ್‌ ವಿಡಿಯೋಗಳು ಒತ್ತಡದಲ್ಲಿರುವ ಜನರಿಗೆ, ವಿಶೇಷವಾಗಿ ಪುರುಷರಿಗೆ, ನೆಮ್ಮದಿ ನೀಡಲು ಸಹಾಯ ಮಾಡಬಹುದು ಎಂದು ಹೇಳಿದ್ದಾರೆ. ‘ನನ್ನ ವಿಡಿಯೋ ಒಬ್ಬರಿಗೆ ನೆಮ್ಮದಿ […]

SBI Scholarship 2026: ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಲು ₹15 ಲಕ್ಷದವರೆಗೆ ಸ್ಕಾಲರ್‌ಶಿಪ್; ಅರ್ಜಿ ಸಲ್ಲಿಸಿ, ನಿಮ್ಮ ಶಿಕ್ಷಣದ ಕನಸನ್ನು ನನಸಾಗಿಸಿ!

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಫೌಂಡೇಶನ್ ಮತ್ತೊಂದು ಮಹತ್ವದ ಅವಕಾಶವನ್ನು ನೀಡುತ್ತಿದೆ. **‘SBI ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್‌ಶಿಪ್ 2026-27’**ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 9ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಹಾಗೂ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳವರೆಗೆ ಈ ವಿದ್ಯಾರ್ಥಿವೇತನ ಅನ್ವಯಿಸುತ್ತದೆ. ವಿದ್ಯಾರ್ಥಿಯ ಶಿಕ್ಷಣ ಮಟ್ಟ ಮತ್ತು ಕೋರ್ಸ್‌ಗೆ ಅನುಗುಣವಾಗಿ ವಾರ್ಷಿಕ ₹15 ಸಾವಿರದಿಂದ ಗರಿಷ್ಠ ₹15 ಲಕ್ಷದವರೆಗೆ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ. […]

ತಡರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ: ಭಕ್ತಿಸಾಗರದಲ್ಲಿ ಉಡುಪಿ ಶ್ರೀಕೃಷ್ಣ ಮಠ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಪ್ರಮುಖ ಧಾರ್ಮಿಕ ವಿಧಿಯಾದ ಅರ್ಘ್ಯ ಪ್ರದಾನವು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ತಡರಾತ್ರಿ ಭಕ್ತಿಪೂರ್ವಕವಾಗಿ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಧಾರ್ಮಿಕ ವಿಧಿ ಮಠದ ಪರಿಸರದಲ್ಲಿ ವಿಶೇಷ ಭಕ್ತಿಯ ವಾತಾವರಣ ಸೃಷ್ಟಿಸಿತು. ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ವಿಶೇಷವಾಗಿ ಅರ್ಘ್ಯ ಪ್ರದಾನ ಮಾಡಿದರು. ಬಳಿಕ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಕೃಷ್ಣನಿಗೆ ಅರ್ಘ್ಯ […]

ಬಸ್ ಪ್ರಯಾಣಿಕರಿಗೆ ದರ ಏರಿಕೆ ಶಾಕ್: ಶೀಘ್ರದಲ್ಲೇ ಟಿಕೆಟ್ ದರ ಪರಿಷ್ಕರಣೆ

ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಬಸ್ ಪ್ರಯಾಣವೂ ದುಬಾರಿಯಾಗುವ ಸಾಧ್ಯತೆ ಎದುರಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಕುರಿತು ಸುಳಿವು ನೀಡಿದ್ದು, ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆಯನ್ನು ಹೆಚ್ಚಿಸಿದ್ದರೂ ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. […]