ಹೊಸ ಏರ್‌ಪೋರ್ಟ್‌ಗೆ 2 ಸ್ಥಳ ಶಾರ್ಟ್‌ಲಿಸ್ಟ್ ಮಾಡಿದ ವಿಜಯ್ ಸರ್ಕಾರ

ಚೆನ್ನೈ: ಟಿವಿಕೆ ನೇತೃತ್ವದ ತಮಿಳುನಾಡು ಸರ್ಕಾರ (Tamil Nadu Govt) ರಾಜ್ಯದಲ್ಲಿ ಮತ್ತೊಂದು ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು 2 ಸ್ಥಳಗಳನ್ನ ಶಾರ್ಟ್‌ಲಿಸ್ಟ್ ಮಾಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ (C Joseph Vijay) ಅವರು ಪರಂದೂರು ಏರ್‌ಪೋರ್ಟ್ ಯೋಜನೆ ಅಧಿಕೃತವಾಗಿ ಕೈಬಿಟ್ಟ ನಂತರ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಉನ್ನತ ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಹೊಸ ವಿಮಾನ ನಿಲ್ದಾಣಕ್ಕಾಗಿ ಸಿಎಂ ವಿಜಯ್ ನೇತೃತ್ವದ ಸರ್ಕಾರ ಮಣೆಲ್ಲೂರು ಹಾಗೂ ಚೆಯ್ಯೂರು ಸ್ಥಳಗಳನ್ನ […]
ನಾಳೆಯಿಂದ ದಸರಾ ಆನೆಗಳ ತಾಲೀಮು ಆರಂಭ

ಮೈಸೂರು: ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಗೆ ನಾಳೆಯಿಂದ (ಸೆ.6) ತಾಲೀಮು ಆರಂಭವಾಗಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೂ ಈ ತಾಲೀಮು ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ನಡೆಯಲಿದೆ. ನಾಳೆಯಿಂದಲೇ ಆನೆಗಳಿಗೆ ಭಾರ ಹೊರಿಸುವ ತಾಲೀಮು ನಡೆಸಲಾಗುತ್ತದೆ. ಮೂರರಿಂದ ನಾಲ್ಕು ಆನೆಗಳಿಗೆ ಹಂತ ಹಂತವಾಗಿ ಭಾರ ಹೊರಿಸುವ ತಾಲೀಮು ನಡೆಸುತ್ತೇವೆ. ತಾಲೀಮು ನಡೆಯುವ ವೇಳೆ ಆನೆಗಳನ್ನು ನೋಡಲು ಹೆಚ್ಚು ಜನರು ಸೇರುತ್ತಾರೆ. ಹೀಗಾಗಿ ಜನರು ಆನೆಗಳಿಂದ ಅಂತರ ಕಾಯ್ದುಕೊಳ್ಳಬೇಕು. ದೂರದಿಂದಲೇ ಆನೆಗಳನ್ನು ನೋಡಿ ಆನಂದಿಸಬೇಕು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ತಿಳಿಸಿದ್ದಾರೆ. […]
ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಬ್ರಹ್ಮಾವರ: ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರದ ಆತಿಥ್ಯದಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ವಾಲಿಬಾಲ್ ಮತ್ತು ಫುಟ್ಬಾಲ್ ಕ್ರೀಡಾಕೂಟವು ಸೆಪ್ಟೆಂಬರ್ 4ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓ ಎಸ್ ಸಿ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಕಾಲೇಜಿನ ಸಂಚಾಲಕರಾದ ರೆ. ಫಾದರ್ ಎಂ.ಸಿ. ಮಥಾಯಿ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನತ್ ಸುವಾರಿಸ್ ಅವರು ಗಣ್ಯರನ್ನು ಹಾಗೂ ಕ್ರೀಡಾಪಟುಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಂತೋಷ್ ನೀಲಾವರ್ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ […]
ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಎರ್ಮಾಯಿಲ್ ಸಮೀಪ ತಲುಪಿದಾಗ ಬಸ್‌ನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್‌ನ್ನು ನಿಲ್ಲಿಸಿ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಯಾವುದೇ […]
ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ಬಾರಿಗೆ ಲಕ್ಷಗಟ್ಟಲೆ ಹಣ ಪಾವತಿಸಿ ಚಿನ್ನ ಖರೀದಿಸಬೇಕೆಂದಿಲ್ಲ!

ಚಿನ್ನ ಮತ್ತು ಆಭರಣ ಖರೀದಿಸಲು ಯೋಜಿಸುತ್ತಿದ್ದೀರಾ? ಒಂದೇ ಬಾರಿಗೆ ದೊಡ್ಡ ಮೊತ್ತದ ಹಣ ಪಾವತಿಸುವುದು ಕೆಲವರಿಗೆ ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಕೆಲವು ಆಭರಣ ಸಂಸ್ಥೆಗಳು ಗ್ರಾಹಕರಿಗೆ ವಿಭಿನ್ನ ಪಾವತಿ ಮತ್ತು ಉಳಿತಾಯ ಆಯ್ಕೆಗಳನ್ನು ನೀಡುತ್ತಿವೆ. ಡಿಜಿಟಲ್ ಚಿನ್ನ, ಮಾಸಿಕ ಉಳಿತಾಯ ಯೋಜನೆ, ಹಳೆಯ ಚಿನ್ನದ ವಿನಿಮಯ ಹಾಗೂ EMI ಸೇರಿದಂತೆ ವಿವಿಧ ಆಯ್ಕೆಗಳ ಮೂಲಕ ಆಭರಣ ಖರೀದಿಸುವ ಅವಕಾಶಗಳು ಲಭ್ಯವಿವೆ. ಇದರಿಂದ ಗ್ರಾಹಕರು ತಮ್ಮ ಆರ್ಥಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಚಿನ್ನ ಖರೀದಿಸಲು ಯೋಜಿಸಬಹುದು. Paytm–CaratLane ಪಾಲುದಾರಿಕೆ Paytm […]