ಅಪಘಾತ ತಡೆಯಲು ವಾಹನಗಳೇ ಪರಸ್ಪರ ಮಾತನಾಡಲಿವೆ! ಶೀಘ್ರದಲ್ಲೇ ಹೊಸ ವಾಹನಗಳಿಗೆ ಬರಲಿದೆ V2V ತಂತ್ರಜ್ಞಾನ

ನವದೆಹಲಿ: ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಘಾತ ತಡೆಯಲು ಕೇಂದ್ರ ಸರ್ಕಾರ ಹೊಸ ತಂತ್ರಜ್ಞಾನ ಜಾರಿಗೆ ಮುಂದಾಗಿದೆ. ವಾಹನ-ವಾಹನ ಸಂವಹನ (V2V) ವ್ಯವಸ್ಥೆಯನ್ನು ಹೊಸ ವಾಹನಗಳಿಗೆ ಕಡ್ಡಾಯಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕ್ರಮ ಕೈಗೊಂಡಿದೆ. ಏನಿದು V2V? V2V ತಂತ್ರಜ್ಞಾನದಲ್ಲಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪರಸ್ಪರ ಮಾಹಿತಿ ಹಂಚಿಕೊಳ್ಳುತ್ತವೆ. ವಾಹನದ ವೇಗ, ಸ್ಥಳ, ದಿಕ್ಕು ಹಾಗೂ ಬ್ರೇಕಿಂಗ್‌ ಮಾಹಿತಿಯನ್ನು ಹತ್ತಿರದ ವಾಹನಗಳಿಗೆ ಕಳುಹಿಸಲಾಗುತ್ತದೆ. ಉದಾಹರಣೆಗೆ, ಮುಂದಿರುವ ವಾಹನ ಏಕಾಏಕಿ ಬ್ರೇಕ್ […]

ಆಸ್ಪತ್ರೆಗಳಲ್ಲಿ ಕೆಲಸ ಮಾಡೋದನ್ನೇ ನೋಡಿ ಕ್ಲಿನಿಕ್ ತೆರೆದ ನಕಲಿ ವೈದ್ಯರು! 582 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಬಂದ್ ಮಾಡಿಸಿದ ಆರೋಗ್ಯ ಇಲಾಖೆ!

ಬೆಂಗಳೂರು: ‘ವೈದ್ಯೋ ನಾರಾಯಣೋ ಹರಿ’ ಎಂಬ ನಂಬಿಕೆಯಿಂದ ವೈದ್ಯರನ್ನು ದೇವರ ಸ್ವರೂಪವೆಂದು ಗೌರವಿಸುವ ನಮ್ಮ ಸಮಾಜದಲ್ಲೇ ಕೆಲವರು ವೈದ್ಯರ ಸೋಗಿನಲ್ಲಿ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಯಾವುದೇ ಅಧಿಕೃತ ವೈದ್ಯಕೀಯ ಪದವಿ ಇಲ್ಲದಿದ್ದರೂ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ ಪಡೆದ ಅನುಭವದ ಆಧಾರದ ಮೇಲೆ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಿದ್ದವರ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. 582ಕ್ಕೂ ಹೆಚ್ಚು ನಕಲಿ ಕ್ಲಿನಿಕ್‌ಗಳ ವಿರುದ್ಧ ಕ್ರಮ ಕರ್ನಾಟಕದಲ್ಲಿ 2024ರಿಂದ ಈವರೆಗೆ ಆರೋಗ್ಯ ಇಲಾಖೆ 582ಕ್ಕೂ ಹೆಚ್ಚು […]

ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

ಮಂಗಳೂರು, ಸೆಪ್ಟೆಂಬರ್ 6, 2026: ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್‌ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗೀದಾರರಿಗೆ ಪ್ರಮುಖ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಪ್ರಸ್ತಾಪಿಸಲಾದ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ, ಕೈಗಾರಿಕೆ, ಉದ್ಯಮಶೀಲತೆ ಮತ್ತು ಪ್ರವಾಸೋದ್ಯಮ ಪ್ರದರ್ಶನಕ್ಕೆ ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್ ಅವರು ಉತ್ತೇಜನಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ ನಿಯೋಗವು ಕರ್ನಾಟಕ ಸರ್ಕಾರದ ವಿಧಾನ […]

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರ ನಾಯ್ಕ್‌ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಶ್ರೀಮತಿ ಇಂದಿರಾ ರಾವ್‌, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ […]

ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’; ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ

ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಪ್ತಾಹದ ನಿರ್ದೇಶಕ ಬಾಸುಮ ಕೊಡಗು ತಿಳಿಸಿದರು.ಸಪ್ತಾಹದ ಉದ್ಘಾಟನೆಯನ್ನು ಜೇಸಿಐ ಭಾರತದ ಜೇಸಿ ಸಪ್ತಾಹ ನಿರ್ದೇಶಕ ಗೌರೀಶ್ ಭಾರ್ಗವ ನೆರವೇರಿಸಲಿದ್ದು, ಜೇಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು […]