ರಾಜ್ಯದ 175 ತಾಲೂಕುಗಳನ್ನ ಬರ ಘೋಷಣೆ ಮಾಡಿ: ಆರ್‌. ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ವಿಪಕ್ಷ ನಾಯಕ ಆರ್‌. ಅಶೋಕ್ (R Ashok) ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸರ್ಕಾರದ ಬರ ಪಟ್ಟಿಯಲ್ಲಿ ತನ್ನ ಕ್ಷೇತ್ರ ಸೇರಿಸದೆ ಇದ್ದರೆ ಉಪವಾಸ ಮಾಡುವ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ಶಾಸಕನ ವಿಚಾರಕ್ಕೆ X ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ 101 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದ ದಿನವೇ ನಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದೆ. ರಾಜ್ಯದ […]

Crime News: ಕಾರ್ಖಾನೆಯಲ್ಲಿ ಕಾರ್ಮಿಕನಿಂದಲೇ 19 ವರ್ಷದ ಸಹೋದ್ಯೋಗಿಯ ಕೊಲೆ

ಪ್ರಾಥಮಿಕ ತನಿಖೆಯಲ್ಲಿ ಅದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸಾಹಿಲ್ ನನ್ನು ಕೊಂದಿರಬಹುದು ಎಂದು ತಿಳಿದುಬಂದಿದೆ. ಆದರೆ, ಕೊಲೆಯ ಹಿಂದಿನ ನಿಖರವಾದ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ನವದೆಹಲಿ: ಕಾರ್ಖಾನೆಯಲ್ಲಿ ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಈಶಾನ್ಯ ದೆಹಲಿಯ ಜಾಫ್ರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಚೌಹಾಣ್ ಬಂಗಾರ್ ಪ್ರದೇಶದ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನನ್ನು ಸಹ ಕೆಲಸಗಾರನೊಬ್ಬ ಇರಿದು ಕೊಂದಿದ್ದಾನೆ. ಸೆಪ್ಟೆಂಬರ್ 6 ರ ರಾತ್ರಿ ಕಾರ್ಖಾನೆಯಲ್ಲಿ ಈ […]

ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿದ ಶಾಸಕ ಮಂಜುನಾಥ ಭಂಡಾರಿ

ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಬಿಜಿಎಸ್ ಸಂಸ್ಥೆಗಳ ಪೀಠಾಧಿಪತಿಗಳಾದ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರೊಂದಿಗೆ ಮಾನ್ಯ ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿದರು. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಗ್ಗೂಡಿಸುವ ಹಾಗೂ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವ ಉದ್ದೇಶದ ಈ […]

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು? ಅವರ ಹಿನ್ನೆಲೆ ಇಲ್ಲಿದೆ

ಕನ್ನಡ ಕಿರುತೆರೆಯ ಬಹು ನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಸೆಪ್ಟೆಂಬರ್ 6ರಂದು ನಡೆದ ಗ್ರ್ಯಾಂಡ್ ಪ್ರೀಮಿಯರ್‌ನಲ್ಲಿ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ಬಿಗ್ ಬಾಸ್ ಮನೆಗೆ ಬರಮಾಡಿಕೊಂಡರು. ಈ ಬಾರಿ ಸಿನಿಮಾ, ಕಿರುತೆರೆ, ಮಾಡೆಲಿಂಗ್, ರಿಯಾಲಿಟಿ ಶೋ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಭೆಗಳು ಒಂದೇ ಮನೆಯಲ್ಲಿ ಸೇರಿದ್ದಾರೆ. ಒಟ್ಟು 16 ಸ್ಪರ್ಧಿಗಳು ಈ ಸೀಸನ್‌ನಲ್ಲಿ ಕಣಕ್ಕಿಳಿದಿದ್ದಾರೆ. ಜಗದೀಶ್ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ‘ಜಗ್ಗ ಮಮ್ಮಿ’ ಪಾತ್ರದ ಮೂಲಕ […]

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ಸಾಂಸ್ಕೃತಿಕ ವೈವಿಧ್ಯ, ಸಂಗೀತ, ನೃತ್ಯ, ಕ್ರೀಡೆ ಹಾಗೂ ಆಹಾರ ಪದ್ಧತಿಗಳ ಮೂಲಕ ಕರಾವಳಿಗರ ಮನಸೆಳೆಯಿತು. ಮಲಯಾಳಂ ಚಿತ್ರರಂಗದ ನಟಿ ನೀನಾ ಕುರುಪ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಓಣಂ ಕೇರಳದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಕೇರಳದಾದ್ಯಂತ ಹತ್ತು […]