ಉಡುಪಿಯ ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ಇದೀಗ ಇನ್ನಷ್ಟು ಉತ್ತಮ ಸೇವೆ, ಮಕ್ಕಳ ಹಾಗೂ ನವಜಾತ ಶಿಶುಗಳ ವಿಭಾಗ ವಿಸ್ತರಣೆ

ಉಡುಪಿ: ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಇನ್ನಷ್ಟು ಉತ್ತಮ ಹಾಗೂ ಸಮಗ್ರ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಮಕ್ಕಳ ಹಾಗೂ ನವಜಾತ ಶಿಶುಗಳ ವಿಭಾಗವನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅನುಭವಿ ತಜ್ಞ ವೈದ್ಯರನ್ನು ಒಳಗೊಂಡ ಬಲಿಷ್ಠ ತಂಡವನ್ನು ಪರಿಚಯಿಸಲಾಗಿದೆ. ನವಜಾತ ಶಿಶುಗಳು ಹಾಗೂ ಮಕ್ಕಳಿಗೆ ಗುಣಮಟ್ಟದ ಮತ್ತು ತ್ವರಿತ ಚಿಕಿತ್ಸಾ ಸೇವೆ ಒದಗಿಸುವ ಉದ್ದೇಶದಿಂದ ವಿಭಾಗದಲ್ಲಿ ತಜ್ಞ ವೈದ್ಯರ ತಂಡವನ್ನು ಬಲಪಡಿಸಲಾಗಿದೆ. ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಜೊತೆಗೆ ನವಜಾತ ಶಿಶುಗಳ ವಿಶೇಷ […]

108 ಅಂಬುಲೆನ್ಸ್ ಸಿಬ್ಬಂದಿಯಿಂದ ಮುಷ್ಕರದ ಎಚ್ಚರಿಕೆ: ಸೆ.20ರಿಂದ ಸಾಮೂಹಿಕ ರಾಜೀನಾಮೆ!

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ-108 ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಬುಲೆನ್ಸ್ ಸಿಬ್ಬಂದಿ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿರುವ ನೌಕರರ ಸಂಘಟನೆಗಳು, ಸಮಸ್ಯೆಗಳಿಗೆ ಪರಿಹಾರ ದೊರೆಯದಿದ್ದರೆ ಸೆಪ್ಟೆಂಬರ್ 20ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುವುದಾಗಿ ಎಚ್ಚರಿಸಿವೆ. ಈ ಕುರಿತು ‘ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ’ ಹಾಗೂ ‘ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ’ದ […]