ಉಡುಪಿ: ಕಾಪುವಿನಲ್ಲಿ ‘ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ’ದ 8ನೇ ನೂತನ ಶಾಖೆ ಶುಭಾರಂಭ

ಉಡುಪಿ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನೂತನ 8ನೇ ಶಾಖೆಯು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಮುಖ್ಯರಸ್ತೆಯಲ್ಲಿರುವ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲೂ ಸಮಾಜದ ಅಗತ್ಯಗಳಿಗೆ ಸ್ಪಂದಿಸುತ್ತಾ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು. ಸಂಘವು ಸತತ ಎರಡು ವರ್ಷ ರಾಜ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಕಳೆದ […]

37 ವರ್ಷಗಳ ಬಳಿಕ ರಾಜ್ಯದ ಕಾಲೇಜು-ಯುನಿವರ್ಸಿಟಿ ಗಳಲ್ಲಿ ವಿದ್ಯಾರ್ಥಿ ಚುನಾವಣೆ :ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಕರ್ನಾಟಕದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಸುಮಾರು 37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಮರುಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲು ಅನುಮೋದನೆ ನೀಡಲಾಗಿದೆ. ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ರಾಜಕೀಯಕ್ಕೆ ಸಂಬಂಧಿಸಿದ ಹಿಂಸಾಚಾರ, ಗೂಂಡಾಗಿರಿ ಹಾಗೂ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ 1989ರಲ್ಲಿ ಆಗಿನ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ನಿಷೇಧಿಸಿತ್ತು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ […]

ಆಹಾರದಲ್ಲಿ ಸ್ವಚ್ಛತೆ ಇಲ್ಲದ್ದಕ್ಕೆ ಮುಂಬೈ ಇಸ್ಕಾನ್ ದೇವಾಲಯದ ಕಿಚನ್ ಲೈಸೆನ್ಸ್ ರದ್ದು!

ಮುಂಬೈ: ಸ್ವಚ್ಛತೆ ಹಾಗೂ ನೈರ್ಮಲ್ಯದಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಜುಹು ಪ್ರದೇಶದಲ್ಲಿರುವ ಪ್ರತಿಷ್ಠಿತ ಇಸ್ಕಾನ್ ದೇವಾಲಯದ ಅಡುಗೆಮನೆಯ ಲೈಸೆನ್ಸ್‌ ಅನ್ನು ಆಹಾರ ಮತ್ತು ಔಷಧ ಆಡಳಿತ (FDA) ರದ್ದುಗೊಳಿಸಿದೆ. ನಿರಂತರ ತಪಾಸಣೆಯ ಭಾಗವಾಗಿ FDA ಅಧಿಕಾರಿಗಳು ಜುಹುವಿನ ಪ್ರಭು ರಾಧಾ ಕೃಷ್ಣ ಇಸ್ಕಾನ್ ದೇವಾಲಯದ ಆವರಣದಲ್ಲಿರುವ ಅಡುಗೆಮನೆಯನ್ನೂ ಪರಿಶೀಲಿಸಿದ್ದಾರೆ. ಈ ವೇಳೆ ದೇವಾಲಯದ ‘ಗೋವಿಂದ ರೆಸ್ಟೋರೆಂಟ್’ ಕಿಚನ್‌ನಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಪ್ರಮುಖವಾಗಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಕಂಡುಬಂದಿದೆ ಎನ್ನಲಾಗಿದೆ. ಪರಿಶೀಲನೆ […]

ಒಂದು ನೀರಿನ ಬಾಟಲಿಗೆ ಗ್ರಾಹಕರಿಂದ ರೂ.7 ಹೆಚ್ಚುವರಿ ಪಡೆಯುವ ಆಸೆಯಲ್ಲಿ 7 ಲಕ್ಷ ಕಳೆದುಕೊಂಡ ಅಂಗಡಿ ಮಾಲಿಕ!

ಕೆಲವೊಮ್ಮೆ ಅಂಗಡಿ ಮಾಲಿಕರು ಕೆಲವೊಂದು ವಸ್ತುಗಳಿಗೆ ಗ್ರಾಹಕರಿಂದ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಾರೆ. ಅತೀಯಾದ ಲಾಭದ ಆಸೆಯಿಂದ ಹೆಚ್ಚುವರಿ ಬೆಲೆ ವಿಧಿಸುತ್ತಾರೆ. ಗ್ರಾಹಕರು ಈ ಕುರಿತು ಏನನ್ನೂ ಪ್ರಶ್ನಿಸದೇ ಸುಮ್ಮನಾಗುತ್ತಾರೆ. ಆದರೆ ನೀರಿನ ಬಾಟಲಿಗೆ ನಿಗದಿತ ದರಕ್ಕಿಂತ ಕೇವಲ 7 ರೂ. ಹೆಚ್ಚುವರಿಯಾಗಿ ವಸೂಲಿ ಮಾಡಿದ ಅಂಗಡಿ ಮಾಲೀಕನಿಗೆ ಬರೋಬ್ಬರಿ 7 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಗ್ರಾಹಕರ ಆಯೋಗದ ಮೊರೆ […]

Tulu Language: ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ; ವಿ ಸುನೀಲ್ ಕುಮಾರ್

‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು’ ಎಂದು ವಿ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಇದೇ ಬರುವ ಸೆಪ್ಟೆಂಬರ್ 18ರಂದು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ […]