Nepal Earthquake: ಪ್ರವಾಹದ ಬೆನ್ನಲ್ಲೇ ನೇಪಾಳದಲ್ಲಿ ಭೂಕಂಪ ಪ್ರಾಣ ಭಯದಿಂದ ರಾತ್ರಿಯೇ ಓಡಿದ ಜನರು.

Nepal Earthquake: ನೇಪಾಳದ ಮುಸ್ತಾಂಗ್‌ನಲ್ಲಿ ಬುಧವಾರ ಭೂಕಂಪ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆಘಾತದ ಅಲೆಗಳು ಉಂಟಾಗಿ ಜನರು ತಮ್ಮ ಮನೆಗಳನ್ನು ಬಿಟ್ಟು ಓಡಿಹೋಗುವಂತೆ ಮಾಡಿದೆ. ಈ ಘಟನೆಯಲ್ಲಿ ಯಾವುದೇ ದೊಡ್ಡ ಹಾನಿ ಅಥವಾ ಸಾವುನೋವುಗಳು ವರದಿಯಾಗಿಲ್ಲ. ಕಠ್ಮಂಡು: ಭೀಕರ ಪ್ರವಾಹಕ್ಕೆ ತುತ್ತಾದ ಕೆಲವೇ ದಿನಗಳ ನಂತರ ಇದೀಗ ನೇಪಾಳದಲ್ಲಿ ಮತ್ತೊಮ್ಮೆ ಭೂಕಂಪ ಸಂಭವಿಸಿದೆ. ಮೊದಲೇ ಪ್ರವಾಹದ ಆಘಾತದಿಂದ ಹೊರಬಾರದೇ ಇರುವ ನೇಪಾಳದ ಜನರು ಹೊಸ ಭೂಕಂಪದಿಂದ (Nepal Earthquake) ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ನೇಪಾಳದ ಮುಸ್ತಾಂಗ್‌ನಲ್ಲಿ ಬುಧವಾರ […]

Most Famous CM in India: ಯೋಗಿ ದೇಶದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ, ಎರಡನೇ ಸ್ಥಾನದಲ್ಲಿದೆ ಈ ಸಿಎಂ ಹೆಸರು

ಮತ್ತೊಮ್ಮೆ, ಅವರು ಸಾಮಾಜಿಕ ಮಾಧ್ಯಮ ಜನಪ್ರಿಯತೆಯ ವಿಷಯದಲ್ಲಿ ಇತರ ಮುಖ್ಯಮಂತ್ರಿಗಳನ್ನು ಮೀರಿಸಿದ್ದಾರೆ. ಸಿಎಂ ಯೋಗಿ ಅವರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಒಟ್ಟು ಅನುಯಾಯಿಗಳ ಸಂಖ್ಯೆ 63.3 ಮಿಲಿಯನ್ ಮೀರಿದೆ. ಈ ಅಂಕಿ ಅಂಶದೊಂದಿಗೆ, ಅವರು ದೇಶದಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ. ಲಕ್ನೋ(ಸೆ.09): ಸಿಎಂ ಯೋಗಿ ಆದಿತ್ಯನಾಥ್ ತಮ್ಮ ನೇರ ನುಡಿ ಮತ್ತು ಕಠಿಣ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದಾರೆ. ಆದ್ದರಿಂದ, ಅವರು ತಮ್ಮ ರಾಜ್ಯದಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳಲ್ಲಿಯೂ ಬಹಳ ಜನಪ್ರಿಯರಾಗಿದ್ದಾರೆ. ಅವರ ಸಾಮಾಜಿಕ ಮಾಧ್ಯಮ ಉಪಸ್ಥಿತಿಯನ್ನು ನೋಡಿದರೆ […]

ಸತೀಶ್ ಜಾರಕಿಹೊಳಿ ನಿವಾಸ, ಕಚೇರಿ ಮೇಲೆ ಇಡಿ ದಾಳಿ: ವಿದೇಶಿ ಹೂಡಿಕೆ ಆರೋಪದ ತನಿಖೆ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿಯ ಬೆನ್ನಲ್ಲೇ ವಿದೇಶಿ ಹೂಡಿಕೆಗಳಿಗೆ ಸಂಬಂಧಿಸಿದ ಆರೋಪಗಳು ಮುನ್ನೆಲೆಗೆ ಬಂದಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘಿಸಿ ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪದ ಕುರಿತು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ವಿದೇಶದಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ […]

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದೆ ಎಂಬ ಭಾವನೆ ರೈತರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಕೂಡಲೇ ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಾವೇರಿ ನೀರಿನ ಹಂಚಿಕೆಯಲ್ಲಿ ಕರ್ನಾಟಕ ನಿರಂತರವಾಗಿ ಸಂಕಷ್ಟ ಎದುರಿಸುತ್ತಿದೆ. ನಮ್ಮ ಸಮಸ್ಯೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು […]

POP ಗಣೇಶ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸುತ್ತೋಲೆ ಹೊರಡಿಸಿದೆ. ಪಿಓಪಿ ಗಣೇಶ (POP Ganesh) ಮಾರಾಟ ಹಾಗೂ ತಯಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಒಂದೊಮ್ಮೆ ಯಾರಾದರೂ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಚ್ಚರಿಕೆ ನೀಡಿದೆ. ಗಣೇಶ ಕೂರಿಸಲು ಆಯೋಜಕರು ಅನುಮತಿ ಪಡೆಯಲು ವಾರ್ಡ್ವಾರು ನೋಡಲ್ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಅರ್ಜಿ ಬಂದ ಒಂದೇ ದಿನದಲ್ಲಿ ಅರ್ಜಿ ಪರಿಶೀಲಿಸಿ ಅನುಮತಿ ನೀಡಲಾಗುವುದು. ಸಿಂಗಲ್ ವಿಂಡೋ ಮೂಲಕ ಅರ್ಜಿ ವಿಲೇವಾರಿಗೆ […]