ದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ED) ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ(BJP) ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ.

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ‘ಗುರು ದೇವೋಭವ’ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ, ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು.ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ದಿನಕರ ಆರ್ ಶೆಟ್ಟಿ ನಿವೃತ್ತ ಮುಖ್ಯ ಶಿಕ್ಷಕರು ನಿವೇದಿತಾ ಪ್ರೌಢಶಾಲೆ ಬಸ್ರೂರು, ಶ್ರೀ ಮಂಜುನಾಥ್ ಕೆ ಎಸ್ ರಸಾಯನ ಶಾಸ್ತ್ರ ಉಪನ್ಯಾಸಕರು ತ್ರಿಶಾ ಪದವಿ ಪೂರ್ವ […]
ಒಂದು ರೀಲ್ಸ್ ಕಾರಣಕ್ಕೆ ಎರಡು ಜೀವ ಬಲಿ, ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ:

ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ನಡೆದು, ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೆಚ್‌ಎಎಲ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ಹೀಗಾಗಿ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ನಿನ್ನೆ ಗಲಾಟೆ […]
ಗಣೇಶ ಹಬ್ಬಕ್ಕೆ ಖಡಕ್ ರೂಲ್ಸ್: ಪಿಓಪಿ ಗಣೇಶ, ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ

ಬೆಂಗಳೂರು: ಗಣೇಶ ಚತುರ್ಥಿ ಹಬ್ಬಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಬಿಎ ಎಚ್ಚರಿಕೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಆಯೋಜಕರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಇದಕ್ಕಾಗಿ ವಾರ್ಡ್‌ವಾರು ನೋಡಲ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅರ್ಜಿ ಸಲ್ಲಿಸಿದ ಒಂದೇ ದಿನದಲ್ಲಿ ಪರಿಶೀಲನೆ ನಡೆಸಿ ಅನುಮತಿ […]