ಉದಯೋನ್ಮುಖ ಕಂಟೆಂಟ್ ಕ್ರಿಯೇಟರ್ ಗಳಿಗೆ ಮಣಿಪಾಲ MSDC ಯಿಂದ ಕ್ಯಾಮೆರಾ ಮುಂದೆ ಮಿಂಚಲು ಇಲ್ಲಿದೆ ಒಂದೊಳ್ಳೆ ಅವಕಾಶ

ಮಣಿಪಾಲ: ಕ್ಯಾಮೆರಾ ಮುಂದೆ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರದರ್ಶಿಸಲು ಆಸಕ್ತಿ ಹೊಂದಿರುವ ಹೊಸ ಪ್ರತಿಭೆಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳಿಗೆ ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ವಿಶೇಷ ಅವಕಾಶ ಕಲ್ಪಿಸಿದೆ. ಕ್ಯಾಮೆರಾ ಮುಂದೆ ಆತ್ಮವಿಶ್ವಾಸದಿಂದ ಮಾತನಾಡುವ ಹಾಗೂ ತಮ್ಮ ವ್ಯಕ್ತಿತ್ವ ಮತ್ತು ಎನರ್ಜಿಯಿಂದ ಪ್ರೇಕ್ಷಕರ ಗಮನ ಸೆಳೆಯಬಲ್ಲ ಫ್ರೆಶ್ ಫೇಸ್‌ಗಳು ಮತ್ತು ಉದಯೋನ್ಮುಖ ಕಂಟೆಂಟ್ ಕ್ರಿಯೇಟರ್‌ಗಳನ್ನು MSDC ಆಹ್ವಾನಿಸಿದೆ. ಆಯ್ಕೆಯಾಗುವವರಿಗೆ MSDC ಸಹಯೋಗದಲ್ಲಿ ಕಂಟೆಂಟ್ ರಚಿಸುವ ಅವಕಾಶದೊಂದಿಗೆ ಸಂಭಾವನೆ ಪಡೆಯುವ ಅವಕಾಶವೂ ದೊರೆಯಲಿದೆ. ಈ ಚಿತ್ರೀಕರಣ […]
ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಐಸಿಸಿ ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇದೇ ಮಾದರಿಯನ್ನು ಅನುಸರಿಸಲು ತೀರ್ಮಾನಿಸಿದೆ ಎನ್ನಲಾಗಿದೆ. ಆದೇಶದಲ್ಲಿ, ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ […]
ಶಿರೂರು: ನಿಯಂತ್ರಣ ತಪ್ಪಿದ ಲಾರಿ ಡಿಕ್ಕಿ ಹೊಡೆದು ಸರಣಿ ಅಪಘಾತ: ಬೈಕ್ ಸವಾರ ಸಾವು

ಉಡುಪಿ: ಅಪಘಾತಕ್ಕೀಡಾದ ವಾಹನವನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಸರಕು ಸಾಗಣೆ ಲಾರಿಯೊಂದು ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ. ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಸರಕು ತುಂಬಿದ ಲಾರಿಯನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ತಡೆದು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಈ ವೇಳೆ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ […]
‘ಪಕ್ಷದ ತೀರ್ಮಾನಕ್ಕೆ ಬದ್ಧ, ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ’

ಉಡುಪಿ: ‘ನಾಯಕರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷವು ನನ್ನನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಯಾರಿಗೆ ಅಸಮಾಧಾನ, ಯಾರಿಗೆ ಸಮಾಧಾನ ಎಂಬುದು ಈಗ ಮುಖ್ಯವಲ್ಲ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಸವಾಲು ನನ್ನ ಮುಂದಿದೆ’ ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು. ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಘೋಷಿಸಿ ಬಳಿಕ ಹಿಂಪಡೆಯಲಾಗಿತ್ತು. […]
ಗಣಪನಿಗೆ ರೂಪ ನೀಡುವ ಕೈಗಳಿಗೆ ಮಣ್ಣಿನ ಕೊರತೆಯ ಸಂಕಷ್ಟ

ಉಡುಪಿ: ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿಘ್ನವಿನಾಶಕ ಗಣಪನ ಮೂರ್ತಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ ಗಣಪನಿಗೆ ರೂಪ ನೀಡುವ ಕುಶಲಕರ್ಮಿಗಳಿಗೆ ಮಾತ್ರ ಅಗತ್ಯವಾದ ಮಣ್ಣಿನ ಕೊರತೆ ಎದುರಾಗಿದೆ. ಉಡುಪಿಯ ಕಿದಿಯೂರಿನ ಭಾಸ್ಕರ್ ಕೋಟ್ಯಾನ್ ಕುಟುಂಬ ಕಳೆದ 35 ವರ್ಷಗಳಿಂದ ಗಣಪತಿ ಮೂರ್ತಿ ನಿರ್ಮಾಣದ ಕಾಯಕದಲ್ಲಿ ತೊಡಗಿಸಿಕೊಂಡಿದೆ. ಪ್ರತಿ ವರ್ಷ 10ರಿಂದ 15ಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಮೂರ್ತಿಗಳನ್ನು ನಿರ್ಮಿಸುವ ಈ ಕುಟುಂಬಕ್ಕೆ, ಈ ಬಾರಿ ಅಗತ್ಯ ಪ್ರಮಾಣದ ಜೆಡಿ ಮಣ್ಣು ದೊರೆಯದೆ ಸಂಕಷ್ಟ ಎದುರಾಗಿದೆ. ಮಣ್ಣಿಗೆ ರೂಪ […]