ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ, ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ ನೇಮಕ

ಉಡುಪಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.ಎರಡೂ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ.
ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಉಡುಪಿ: ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ನೀಡಲು ಸರಕಾರವು ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸುವುದರೊಂದಿಗೆ ಆ ಮೂಲಕ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಪ್ರಜಾಸೇವಾ ಇಲಾಖೆ ಹಾಗೂ […]
ಉಡುಪಿ: ತಪ್ಪು ಮಾಡದಿದ್ದರೂ ಕಳ್ಳತನದ ಆರೋಪಿ; ಕೊನೆಗೂ ಹೈಕೋರ್ಟ್‌ನಿಂದ ಅಮಾಯಕ ರಿಕ್ಷಾ ಚಾಲಕನಿಗೆ ನ್ಯಾಯ!

ಉಡುಪಿ: ಪೊಲೀಸರನ್ನು ನಂಬಿ ದಾಖಲೆಯೊಂದಕ್ಕೆ ಹಾಕಿದ ಸಹಿಯೊಂದು ಅಮಾಯಕ ರಿಕ್ಷಾ ಚಾಲಕನೊಬ್ಬನನ್ನು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯನ್ನಾಗಿ ಮಾಡಿತ್ತು. ಮಾನಸಿಕ ಯಾತನೆ, ಸಾಮಾಜಿಕ ಅವಮಾನ ಅನುಭವಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಶೀನ ಪೂಜಾರಿ ಅವರಿಗೆ ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯ ದೊರೆತಿದೆ. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೇರಿಸಲಾಗಿದ್ದ ಶೀನ ಪೂಜಾರಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಅವರ […]
ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ಕಿತ್ತುಹೋದ ರಸ್ತೆ!

ಉಡುಪಿ: ಮಣಿಪಾಲದ ಟೈಗರ್ ಸರ್ಕಲ್‌ನಿಂದ ಕೆನರಾ ಬ್ಯಾಂಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ರಸ್ತೆ ಕಿತ್ತುಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು ₹70 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಾಂಬರು ಕಿತ್ತುಹೋಗಿರುವುದರಿಂದ ರಸ್ತೆಯ ಹಲವೆಡೆ ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಹೊಸದಾಗಿ ನಿರ್ಮಿಸಿದ ರಸ್ತೆ ಕೆಲವೇ ತಿಂಗಳಲ್ಲಿ ಹದಗೆಟ್ಟಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಹಲವು […]
ಅಕ್ಷಯಾಮೃತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: 5ನೇ ವಾರ್ಷಿಕ ಮಹಾಸಭೆ

ಹಿರಿಯಡಕ: ಅಕ್ಷಯಾಮೃತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ವಾರ್ಷಿಕ ಮಹಾಸಭೆಯು ಸೆ.06 ರಂದು ಸುರಭಿ ಸಭಾಭವನ ಹಿರಿಯಡಕದಲ್ಲಿ ಅಪರಾಹ್ನ 4 ಗಂಟೆಗೆ ಸಂಘದ ಅಧ್ಯಕ್ಷರಾದ ಜನಾರ್ಧನ ಆರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸರ್ಕಾರಿ ಸೇವೆಗೈದು ಇತ್ತೀಚಿಗಷ್ಟೆ ನಿವೃತ್ತಿರಾದ ಐ.ಎ.ಎಸ್ ಅಧಿಕಾರಿ ಬಿ.ಸದಾಶಿವ ಪ್ರಭು ಎಳ್ಳಾರೆ, ಕೃಷಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆಗೈದ ವಾಸು ಪ್ರಭು ನರ್ಜೆಯವರನ್ನು, ಸಮಾಜ ಸೇವೆ ಮತ್ತು ಪತ್ರಿಕೋದ್ಯಮದಲ್ಲಿ ಕಾರ್ಯನಿವಹಿಸಿದ ಗೋಪಾಲಕೃಷ್ಣ ನಾಯಕ್ ರವರನ್ನು ಹಾಗು ಪ್ರಾಚೀನ ವಿದ್ಯೆ ಹಾಗು ಪಾರಂಪರಿಕ ವೈದ್ಯರಾಗಿರುವ […]