ಎಸ್ಐಆರ್: ವಾಸ್ತವ್ಯ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ತಕ್ಷಣವೇ ನೀಡಲು ಕ್ರಮವಹಿಸಿ

ಉಡುಪಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಮತದಾರರ ವಿವರಗಳಲ್ಲಿನ ವ್ಯತ್ಯಾಸ ಸೇರಿದಂತೆ ವಿವಿಧ ಕಾರಣಗಳಿಂದ ಹಲವರಿಗೆ ನೋಟಿಸ್ ಜಾರಿಯಾಗಿದೆ. ನೋಟಿಸ್‌ನಲ್ಲಿ ಸೂಚಿಸಿರುವ ದಾಖಲೆಗಳು ತಮ್ಮ ಬಳಿ ಇಲ್ಲದ ಸಂದರ್ಭದಲ್ಲಿ, ಚುನಾವಣಾ […]
ಉಡುಪಿ: ಯುವತಿ ನಾಪತ್ತೆ

ಉಡುಪಿ ಸೆಪ್ಟಂಬರ್ 11: ಕಿನ್ನಿಮುಲ್ಕಿ ವೇಗಸ್ ಟೌನ್‍ಶಿಪ್‍ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗುತ್ತಿದ್ದು ತನ್ನನ್ನು ಹುಡುಕಬೇಡಿ ಎನ್ನುವ ಪತ್ರ ಬರೆದಿಟ್ಟು ಸೆಪ್ಟಂಬರ್ 6 ರಂದು ಮಧ್ಯರಾತ್ರಿ ಅವಧಿಯಲ್ಲಿ ಮನೆಯಿಂದ ಕಾಣೆಯಾಗಿದ್ದಾರೆ.4 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂ:0820-2520444, ಉಡುಪಿ ಕಂಟ್ರೋಲ್ ರೂಂ: 0820-2526444, ಪೊಲೀಸ್ […]
ಉಡುಪಿ: ಪಿಕಪ್ ವಾಹನದ ಹಿಂಭಾಗದಲ್ಲಿ 8–10 ಮಕ್ಕಳನ್ನು ಕರೆದೊಯ್ದ ಚಾಲಕನ ವಿರುದ್ಧ ಪ್ರಕರಣ

ಉಡುಪಿ: ಪಿಕಪ್ ವಾಹನದ ಹಿಂಭಾಗದಲ್ಲಿ ಸುಮಾರು 8ರಿಂದ 10 ಮಕ್ಕಳನ್ನು ನಿಲ್ಲಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿದ ಆರೋಪದ ಮೇಲೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಸೆ.10ರಂದು ಸಂಜೆ 7.30ರ ಸುಮಾರಿಗೆ ಕಟಪಾಡಿ ಅಂಡರ್‌ಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ KL-33-B-7463 ನೋಂದಣಿ ಸಂಖ್ಯೆಯ ಪಿಕಪ್ ವಾಹನದಲ್ಲಿ ಮಕ್ಕಳನ್ನು ವಾಹನದ ಹಿಂಬದಿಯ ಬಾಡಿಯಲ್ಲಿ ನಿಲ್ಲಿಸಿಕೊಂಡು ಕರೆದೊಯ್ಯಲಾಗುತ್ತಿತ್ತು ಎನ್ನಲಾಗಿದೆ. ವಾಹನದ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ, ಮಕ್ಕಳ ಜೀವಕ್ಕೆ […]
ಬೊಮ್ಮರಬೆಟ್ಟಿನಲ್ಲಿ ₹3.85 ಕೋಟಿ ಕಾಮಗಾರಿಗಳಿಗೆ ಚಾಲನೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.85 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶುಕ್ರವಾರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿಯ 1ನೇ ವಾರ್ಡ್‌ನ ಪಾಪುಜೆ ರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ, 6ನೇ ವಾರ್ಡ್‌ನ ಮೈರೆಗೆ ಹೋಗುವ ರಸ್ತೆ ಅಭಿವೃದ್ಧಿಗೆ ₹10 ಲಕ್ಷ, ಕೊಲ್ಯಾರು ಮಠದ ರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ ಹಾಗೂ 7ನೇ ವಾರ್ಡ್‌ನ ಮಿತ್ರದಾಸ್ ಶ್ಯಾನ್‌ಭೋಗ್ […]
ಸರ್ಕಾರಿ ಜಾಗದಲ್ಲಿ ಬಂಡೆ ಸ್ಫೋಟ: ಇಬ್ಬರ ಬಂಧನ

ಉಡುಪಿ: ಯಾವುದೇ ಪರವಾನಗಿ ಪಡೆಯದೆ ಸರ್ಕಾರಿ ಜಮೀನಿನಲ್ಲಿ ಸ್ಫೋಟಕ ವಸ್ತು ಬಳಸಿ ಬಂಡೆ ಸ್ಫೋಟಿಸಿದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಸೆ.5ರಂದು ಬೆಳಿಗ್ಗೆ 11ರ ಸುಮಾರಿಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಉಡುಪಿ ತಾಲ್ಲೂಕಿನ ಮರ್ಣೆ ಗ್ರಾಮದ ಕುಕ್ಕುಪಲ್ಕೆ ಸರ್ಕಾರಿ ಜಮೀನಿನಲ್ಲಿ ಘಟನೆ ನಡೆದಿದೆ. ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸ್ಫೋಟಕ ವಸ್ತು ಬಳಸಿ ಜಮೀನಿನಲ್ಲಿದ್ದ ಬಂಡೆಕಲ್ಲನ್ನು ಸ್ಫೋಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮಣಿಪಾಲ ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್. […]