ನಮ್ಮದು 2 ಸಾವಿರ ಕೋಟಿ ವಹಿವಾಟು, 2 ಕೋಟಿ ದೊಡ್ಡ ವಿಚಾರವೇ ಅಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕವಿದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Satish Jarkiholi ಹೇಳಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬಸ್ಥರಿಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಯ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆ ಹಾಗೂ ದಾಳಿಯ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು […]
Karnataka Dams: ಕೆಆರ್‌ಎಸ್, ಕಬಿನಿ ಜಲಾಶಯಗಳ ನೀರಿನ ಮಟ್ಟ ಕುಸಿತ ಕಾವೇರಿ ಕೊಳ್ಳದ ರೈತರಲ್ಲಿ ಆತಂಕ

ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ವ್ಯತ್ಯಾಸ. ಆಲಮಟ್ಟಿ, ಹಿಡ್ಕಲ್, ಭೀಮಾ ಲಿಫ್ಟ್ ಭರ್ತಿ. ಕಾವೇರಿ ಕೊಳ್ಳದ ಕೆ.ಆರ್.ಸಾಗರ, ಕಬಿನಿ ಮಟ್ಟ ತಗ್ಗಿದೆ. ಬೆಂಗಳೂರು: ಕರ್ನಾಟಕದಾದ್ಯಂತ ಮಳೆಯ (Rain) ಅಬ್ಬರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಪ್ರಮುಖ ಜಲಾಶಯಗಳ (Reservoirs) ನೀರಿನ ಮಟ್ಟದಲ್ಲಿ (Water Level) ಗಮನಾರ್ಹ ಬದಲಾವಣೆಗಳು ಕಂಡುಬರುತ್ತಿವೆ. ಉತ್ತರ ಕರ್ನಾಟಕ ಹಾಗೂ ಕರಾವಳಿ-ಮಲೆನಾಡಿನ ಕೆಲವು ಭಾಗಗಳಲ್ಲಿ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿದ್ದರೆ, ಕಾವೇರಿ (Cauvery) ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ನೀರು ನಿರೀಕ್ಷಿತ ಮಟ್ಟಕ್ಕಿಂತ ಕೊಂಚ ತಗ್ಗಿದೆ. […]
KSRTC ಪ್ರಯಾಣಿಕರಿಗೆ ಒಳ್ಳೆ ಸುದ್ದಿ:ಇನ್ಮುಂದೆ ವಾಟ್ಸ್‌ಆ್ಯಪ್‌ನಲ್ಲೇ ಬಸ್ ಟಿಕೆಟ್ ಬುಕ್ ಮಾಡಬಹುದು,ಇನ್ನೂ ಏನೇನು ವಿಶೇಷ?

ಬೆಂಗಳೂರು: ಕರ್ನಾಟಕದ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ದಸರಾ ಕೊಡುಗೆ ನೀಡಿದ್ದು, ಇನ್ಮುಂದೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಟಿಕೆಟ್‌ಗಳನ್ನು ವಾಟ್ಸ್‌ಆ್ಯಪ್ ಮೂಲಕವೇ ಕಾಯ್ದಿರಿಸುವ ಡಿಜಿಟಲ್ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರ ‘ಒನ್ ಕರ್ನಾಟಕ ಮೊಬಿಲಿಟಿ ಆ್ಯಪ್’ ಬಿಡುಗಡೆ ಮಾಡಿದ್ದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಡಿ ತರಲಾಗಿದೆ. ಇದರೊಂದಿಗೆ ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಕೆಕೆಆರ್‌ಟಿಸಿ ಬಸ್‌ಗಳಿಗೆ ವಾಟ್ಸ್‌ಆ್ಯಪ್ ಮೂಲಕ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನೂ ಪರಿಚಯಿಸಲಾಗಿದೆ. ವಿಧಾನಸೌಧದಲ್ಲಿ ಗುರುವಾರ ನಡೆದ […]
Earthquake Update: ಭಾರತದಲ್ಲಿ 2 ಬಾರಿ ಭೂಕಂಪನ, ಟಿಬೆಟ್, ಅಫ್ಘಾನ್‌ನಲ್ಲೂ ಕಂಪಿಸಿದ ಭೂಮಿ! ಮಧ್ಯರಾತ್ರಿ ಓಡಿದ ಜನರು

ಶುಕ್ರವಾರ ರಾತ್ರಿ, ಮೊದಲು ಲೇಹ್-ಲಡಾಖ್‌ನಲ್ಲಿ ಭೂಕಂಪ ಸಂಭವಿಸಿತು. ಇದರ ನಂತರ, ಅಸ್ಸಾಂನಲ್ಲಿಯೂ ಭೂಮಿ ಕಂಪಿಸಿತು. ಇದರ ನಂತರ, ಟಿಬೆಟ್ ಮತ್ತು ಅಫ್ಘಾನಿಸ್ತಾನದಲ್ಲಿಯೂ ಭೂಮಿ ಕಂಪಿಸಿದೆ. ನವದೆಹಲಿ: ಕಳೆದ ಮಧ್ಯರಾತ್ರಿ ಭಾರತ ಸೇರಿದಂತೆ ಅಕ್ಕಪಕ್ಕದ ದೇಶಗಳಲ್ಲಿ ಭೂಕಂಪನ ಸಂಭವಿಸಿದೆ. ಭಾರತದ ಎರಡು ರಾಜ್ಯಗಳಲ್ಲಿ ಒಂದರ ನಂತರ ಒಂದರಂತೆ ಭೂಕಂಪನಗಳು ಸಂಭವಿಸಿದ್ದು, ಅತ್ತ ಭಾರತದ ನೆರೆಯ ಟಿಬೆಟ್‌ನಿಂದ ಅಫ್ಘಾನಿಸ್ತಾನದ ತನಕ ಭೂಕಂಪಗಳು ಸಂಭವಿಸಿದೆ (Earthquake Update Today) ಎಂದು ವರದಿಯಾಗಿದೆ. ಶುಕ್ರವಾರ ರಾತ್ರಿ, ಮೊದಲು ಲೇಹ್-ಲಡಾಖ್‌ನಲ್ಲಿ ಭೂಕಂಪ ಸಂಭವಿಸಿತು. ಇದರ […]
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಗುರುವಾರ ವಿಶ್ವದ ಎಲ್ಲಾ ನೂತನ ಬಿಷಪ್ ಗಳನ್ನು ಭೇಟಿಯಾದ ಪೋಪ್ ಲಿಯೋ ಅವರು ಬಳಿಕ ಪ್ರತ್ಯೇಕವಾಗಿ ಪ್ರತಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಲೆಸ್ಲಿ ಅವರು ಧರ್ಮಪ್ರಾಂತ್ಯದ ಪರವಾಗಿ ಪೋಪ್ […]