ಮತದಾರರ ಪಟ್ಟಿಯಲ್ಲಿ ಹೆಸರು ತಿದ್ದುಪಡಿಗೆ ಶಿವರಾಜ್‌ಕುಮಾರ್ ಮನವಿ

ಬೆಂಗಳೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್‌ಕುಮಾರ್ ಅವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ತಿದ್ದುಪಡಿ ಮಾಡುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕಾಂತರಾಜ್, ನಟ ಶಿವರಾಜ್‌ಕುಮಾರ್ ಅವರಿಗೆ ಯಾವುದೇ ನೋಟಿಸ್ ಜಾರಿಯಾಗಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಪಾಸ್‌ಪೋರ್ಟ್‌ನಲ್ಲಿರುವಂತೆ ‘ಪುಟ್ಟಸ್ವಾಮಿ ಶಿವರಾಜ್ ಕುಮಾರ್’ ಎಂದು ಮತದಾರರ ಪಟ್ಟಿಯಲ್ಲೂ ಹೆಸರು ದಾಖಲಿಸುವಂತೆ ಶಿವರಾಜ್‌ಕುಮಾರ್ ಅವರೇ ಸ್ವಯಂಪ್ರೇರಿತವಾಗಿ ಮನವಿ ಮಾಡಿಕೊಂಡಿದ್ದಾರೆ ಎಂದು ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ […]
ಗೂಡ್ಸ್ ಟೆಂಪೋದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ:

ಉಡುಪಿ: ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯ ಕಟಪಾಡಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಬದಲು ಗೂಡ್ಸ್ ಟೆಂಪೋದಲ್ಲಿ ಪ್ರಯಾಣ ಮಾಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭ್ರಮದ ಹೆಸರಿನಲ್ಲಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಚೌತಿ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, […]