ಬೆಳ್ತಂಗಡಿ: ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಶನಿವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಕ್ಕಡ ಸಮೀಪ ನಡೆದಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಸೇರಿದಂತೆ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು […]
ಬೆಂಗಳೂರು ವಿಶ್ವವಿದ್ಯಾಲಯದಲ್ಲಿದೆ ಸಂಯೋಜಕರ ಹುದ್ದೆ: ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವ ಕನಸಿದ್ದರೆ ಮಿಸ್ ಮಾಡದೇ ಟ್ರೈ ಮಾಡಿ!

ಬೆಂಗಳೂರು: ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಡಾ. ಮನಮೋಹನ್ ಸಿಂಗ್ ಬಿಸಿಯು ಸಂಸ್ಥೆಯಲ್ಲಿ ಉದ್ಯೋಗಾವಕಾಶ ಲಭ್ಯವಿದೆ. ಸಂಯೋಜಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000 ರೂ.ವರೆಗೆ ಸಂಭಾವನೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 10ರಂದು ಆರಂಭವಾಗಿದ್ದು, ಸೆಪ್ಟೆಂಬರ್ 15, […]
ಮೂಡ್ಲಕಟ್ಟೆ ಎಂ ಐ ಟಿ ಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್ 2026

ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಡೆಯುತ್ತಿರುವ ಪ್ರಾದೇಶಿಕ ಪ್ರಮುಖ ಕಾರ್ಯಕ್ರಮವಾದ ಜಾಬ್ಸ್ ಎಕ್ಸ್ಪ್ರೆಸ್ 2026, ಸೆಪ್ಟೆಂಬರ್ 17 ಮತ್ತು 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, 5,000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಇದರ ಮೂಲಕ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವೃತ್ತಿ ಅವಕಾಶಗಳನ್ನು ಪಡೆಯಲು […]
ಜೈಲಿನಲ್ಲಿದ್ರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಮೊಬೈಲ್ ನಲ್ಲಿ ಸಿಕ್ಕಿತು ರಾಶಿ ರಾಶಿ ಅಶ್ಲೀಲ ವಿಡಿಯೋಗಳು! ತನಿಖಾಧಿಕಾರಿಗಳೂ ಶಾಕ್!

ಬೆಂಗಳೂರು: ಜೈಲಿನಲ್ಲಿದ್ದಾಗ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಮೊಬೈಲ್ ಬಳಕೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಫ್‌ಎಸ್‌ಎಲ್ (ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ವರದಿ ದೊರೆತಿದ್ದು, ಮೊಬೈಲ್ ಹಾಗೂ ಪೆನ್‌ಡ್ರೈವ್‌ನಲ್ಲಿದ್ದ ಡೇಟಾದಿಂದ ಹಲವು ವಿವರಗಳು ಪತ್ತೆಯಾಗಿವೆ ಎನ್ನಲಾಗಿದೆ. ತನಿಖೆಯ ವೇಳೆ ಪೆನ್‌ಡ್ರೈವ್‌ನಲ್ಲಿ ಒಟ್ಟು 173 ವೀಡಿಯೋ ಫೈಲ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಮೂರು ವೀಡಿಯೋಗಳೂ ಇವೆ ಎಂದು […]
ಕಟಪಾಡಿ: ಕಾಮಗಾರಿ ಪ್ರದೇಶಕ್ಕೆ ನುಗ್ಗಿ ಪಲ್ಟಿಯಾದ ಮೀನಿನ ಲಾರಿ: ಚಾಲಕ ಅಪಾಯದಿಂದ ಪಾರು!

ಉಡುಪಿ: ಕಟಪಾಡಿ ಅಂಡರ್‌ಪಾಸ್ ಪ್ರದೇಶದಲ್ಲಿ ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮೀನಿನ ಲಾರಿ ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಪ್ರದೇಶಕ್ಕೆ ನುಗ್ಗಿ ಪಲ್ಟಿಯಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಲಾರಿ ಚಾಲಕ ಪರ್ಯಾಯ ರಸ್ತೆಗೆ ತೆರಳದೆ ನೇರವಾಗಿ ಕಾಮಗಾರಿ ಪ್ರದೇಶಕ್ಕೆ ಪ್ರವೇಶಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾಮಗಾರಿ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸೂಚನಾ ಫಲಕವನ್ನು ಗಮನಿಸದೆ ಲಾರಿ ಮುಂದುವರಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ […]