80’S ಟ್ರೆಂಡ್ ಗೆ ಮರುಳಾಗಿ ಸೈಬರ್ ವಂಚಕರ ಜಾಲಕ್ಕೆ ಬೀಳಬೇಡಿ: ಪೊಲೀಸ್ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿರುವ 80ರ ದಶಕದ ಮಾದರಿಯ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಮನವಿ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳನ್ನು 80ರ ದಶಕದ ಚಿತ್ರಗಳ ಮಾದರಿಯಲ್ಲಿ ಎಡಿಟ್ ಮಾಡಿಸಿಕೊಳ್ಳುವ ಟ್ರೆಂಡ್ ಹೆಚ್ಚಾಗಿದೆ. ಇದಕ್ಕಾಗಿ ಹಲವರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಅಪರಿಚಿತ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್‌ಗಳನ್ನು ತೆರೆಯುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಪೊಲೀಸರು […]

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚಾಂತಾರು ರೆಡ್ ಕ್ರಾಸ್ ಜಿಲ್ಲಾ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ […]

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಉಡುಪಿಯ ಸೈಂಟ್ ಸಿಸಿಲಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ‘‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’’ಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ. ಹೆಚ್. ಮಾತನಾಡಿ, ಪ್ರತೀ ವರ್ಷ ಸೆಪ್ಟೆಂಬರ್ 10 ರಂದು ವಿಶ್ವದಾಧ್ಯಾಂತ ‘‘ವಿಶ್ವ ಆತ್ಮಹತ್ಯೆ ತಡೆ ದಿನ’’ವನ್ನಾಗಿ ಆಚರಿಸಲಾಗುತ್ತದೆ. […]

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಯುವ ಸಂಸತ್ತು ಸಭೆಗೆ ಸೆಪ್ಟಂಬರ್ 15 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಂಸತ್ತು ಸಭೆಯ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ತತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ […]

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬoಧಿಸಿದoತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14 ರಂದು […]