ಜಿಲ್ಲಾ ಮಟ್ಟದ ಕೋಕೋ ಪಂದ್ಯಾವಳಿಯಲ್ಲಿ ಎಸ್.ಎಂ.ಎಸ್. ತಂಡದ ಸಾಧನೆ; ಸತತ ಎರಡನೇ ವರ್ಷ ರಾಜ್ಯಮಟ್ಟಕ್ಕೆ ಆಯ್ಕೆ

ಬ್ರಹ್ಮಾವರ: ಜಿಲ್ಲಾ ಮಟ್ಟದ ಕೋಕೋ ಬಾಲಕರ ವಿಭಾಗದ ಪಂದ್ಯಾವಳಿಯಲ್ಲಿ ಬ್ರಹ್ಮಾವರದ ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನ ತಂಡವು ಗಮನಾರ್ಹ ಸಾಧನೆ ಮಾಡಿ ಸತತ ಎರಡನೇ ವರ್ಷ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.ತೀವ್ರ ಪೈಪೋಟಿಯಿಂದ ಕೂಡಿದ್ದ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಎಸ್.ಎಂ.ಎಸ್. ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿತು. ತಂಡದ ಆಟಗಾರರು ಉತ್ತಮ ಕೌಶಲ್ಯ, ಶಿಸ್ತು, ವೇಗ ಹಾಗೂ ತಂಡದ ಒಗ್ಗಟ್ಟಿನಿಂದ ಆಟವಾಡಿ ಈ ಯಶಸ್ಸನ್ನು ಸಾಧಿಸಿದರು. ಇದೇ ಸಂದರ್ಭದಲ್ಲಿ ಕೋಕೋ ಬಾಲಕರ ವಿಭಾಗದಲ್ಲಿ 6 ಮಂದಿ […]

ಕ್ರೈಸ್ಟ್ ಕಿಂಗ್: ಪ್ರಾಥಮಿಕ ಶಾಲಾ ಬ್ಯಾಡ್ಮಿಂಟನ್‍ನಲ್ಲಿ ಗ್ರಂಥ ಹಾಗೂ ಅಂಜನಿ ಕಾಮತ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.ತಂಡವನ್ನು ಪ್ರತನಿಧಿಸಿದ್ದ ಆಟಗಾರ್ತಿಯರಾದ ಎಂಟನೇ ತರಗತಿಯ ಗ್ರಂಥ ಹಾಗೂ ಏಳನೇ ತರಗತಿಯ ಅಂಜನಿ ಕಾಮತ್ ಈ ಮೂಲಕ ಜಿಲ್ಲಾಮಟ್ಟಕ್ಕೆ […]

ಕರಾವಳಿ ಸಚಿವ ಸಂಪುಟ ಸಭೆ: 5,000 ಕೋಟಿ ರೂ. ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮನವಿ

ಬೆಂಗಳೂರು: ಕರಾವಳಿ ಭಾಗದಲ್ಲಿ ಆಯೋಜಿಸಲಾಗುತ್ತಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಈ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮಗ್ರ ಮನವಿ ಪತ್ರ ಸಲ್ಲಿಸಿದ್ದಾರೆ. ಕರಾವಳಿ ಜಿಲ್ಲೆಗಳ ಆರ್ಥಿಕತೆ, ಮೀನುಗಾರಿಕೆ, ಪ್ರವಾಸೋದ್ಯಮ, ಉನ್ನತ ಶಿಕ್ಷಣ ಹಾಗೂ ಸಂಸ್ಕೃತಿಯ ರಕ್ಷಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು 5,000 ಕೋಟಿ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಸೇರಿದಂತೆ ಹಲವು […]

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಹಕಾರಿಯ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಲಾಗಿದ್ದು, ಸಂಘವು ಸುಮಾರು ₹11.75 ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ₹6.45 ಲಕ್ಷ ಲಾಭ ಗಳಿಸಿದೆ. ಈ ಹಿನ್ನೆಲೆಯಲ್ಲಿ ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡುವುದಾಗಿ ಘೋಷಿಸಲಾಯಿತು. ಸಹಕಾರಿಯ ಉಪಾಧ್ಯಕ್ಷರಾದ ಶ್ರೀ ಮನೀಶ್ ಭಟ್ […]

ಉಡುಪಿ: ಸೆ.14ರಿಂದ 23ರ ತನಕ ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಂಭ್ರಮ

ಉಡುಪಿ: ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸಂಭ್ರಮದ ಗಣೇಶೋತ್ಸವ ಸೆ.14ರಿಂದ 23ರ ತನಕ ನಡೆಯಲಿದೆ.ಸೆ.14ರಂದು ಬೆಳಗ್ಗೆ 8.30ಕ್ಕೆ ಮೆರವಣಿಗೆಯಲ್ಲಿ ಗಣಪತಿ ವಿಗ್ರಹ ತರಲಾಗುವುದು. ಬೆಳಗ್ಗೆ 10 ಗಂಟೆಗೆ ಪ್ರಾರ್ಥನೆ, ಬೆಳಗ್ಗೆ 10.15ಕ್ಕೆ ಪ್ರಾಣ ಪ್ರತಿಷ್ಠೆ ವಿಧಿ ನೆರವೇರಲಿದೆ. ನಿತ್ಯ ಭಜನೆ, ಭಕ್ತಿ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7.30ಕ್ಕೆ ರಂಗಪೂಜೆ ಜರುಗಲಿದೆ.15ರ ರಾತ್ರಿ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಿವಿಲ್ ಎಂಜಿನಿಯರ್ ಎಂ.ಗಂಗಾಧರ […]