ರಾಜ್ಯಾದ್ಯಂತ ಬಾಲಕಾರ್ಮಿಕರ ಪತ್ತೆಗೆ ವಿಶೇಷ ಕಾರ್ಯಾಚರಣೆ; 800 ಮಕ್ಕಳು ಪತ್ತೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಸುಮಾರು 800 ಬಾಲಕಾರ್ಮಿಕರನ್ನು ಪತ್ತೆಹಚ್ಚಿದ್ದಾರೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದ್ದ ಮಾಲೀಕರ ವಿರುದ್ಧ ಬಾಲಕಾರ್ಮಿಕರ ನಿಷೇಧ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯಡಿ 20 ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ 31 ಜಿಲ್ಲೆಗಳ 962 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 16,951 ಸ್ಥಳಗಳಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸಲಾಗಿದೆ. ಬೆಂಗಳೂರು […]
ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ. ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ […]