ಉಡುಪಿ: ನ್ಯಾಯವಾದಿ ಕೊಡಂಕೂರು ಜಯರಾಮ ಶೆಟ್ಟಿ ನಿಧನ

ಉಡುಪಿ: ಇಂದ್ರಾಳಿ ನಿವಾಸಿ, ಕೊಡಂಕೂರು ಜಯರಾಮ ಶೆಟ್ಟಿ (73) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾದರು. ಅವರು ವಿಜಯಾ ಬ್ಯಾಂಕಿನಿಂದ 2000ರಲ್ಲಿ ಸ್ವಯಂ ನಿವೃತ್ತಿ (Voluntary Retirement) ಪಡೆದುಕೊಂಡ ಬಳಿಕ, ಉಡುಪಿಯಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದ ಅವರು, ಉಡುಪಿಯ ನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ ಹಾಗೂ ಲಯನ್ಸ್ […]
ಉಡುಪಿ: ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು; ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ ಹಸ್ತ ಚಾಚುವ ಮನುಷ್ಯರ ರೂಪದಲ್ಲಿಯೇ ದೇವರು ಬರುತ್ತಾನೆ. ಇತರರಿಗೆ ಒಳಿತನ್ನು ಬಯಸುವ ಮತ್ತು ಸಹಾಯ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ನಾವು ದೇವರನ್ನು ಕಾಣಬಹುದು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು. ಅವರು ಸೋಮವಾರ ಉಡುಪಿ ಶೋಕಮಾತಾ ಚರ್ಚಿನ ಆವೆಮರಿಯಾ ಸಭಾಂಗಣದಲ್ಲಿ ಎಮ್ ಡಿ ಎಸ್ ಚಾರೀಟಿಸ್ ವತಿಯಿಂದ ಸಮುದಾಯದ ಆಸಕ್ತ, ಅಗತ್ಯವಿರುವ ಹಾಗೂ ಅರ್ಹ ಯುವಜನರು ವೃತ್ತಿಪರ […]
ಕುಂದಾಪುರ: ಮನೆ–ದೇವಸ್ಥಾನದ ಬಾಗಿಲು ಮುರಿದು ಕಳ್ಳತನ – ಇಬ್ಬರ ಬಂಧನ; ಹುಲಿಕಲ್ ಘಾಟ್ ಬಳಿ ಆರೋಪಿಗಳ ಬಂಧನ; ₹1.19 ಲಕ್ಷ ನಗದು ವಶ

ಉಡುಪಿ: ಮನೆ ಹಾಗೂ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಇಬ್ಬರನ್ನು ಅಮಾಸೆಬೈಲು ಹಾಗೂ ಶಂಕರನಾರಾಯಣ ಪೊಲೀಸರು ಬಂಧಿಸಿದ್ದು, ಅವರಿಂದ ₹1,19,720 ನಗದು ವಶಪಡಿಸಿಕೊಂಡಿದ್ದಾರೆ.ಕುಂದಾಪುರ ತಾಲ್ಲೂಕಿನ ಮಚ್ಚಟ್ಟು ಗ್ರಾಮದ ಜಾಂಬೂರು ಜೆಡ್ಡು–ನೆಲ್ಲಿಗದ್ದೆ ಎಂಬಲ್ಲಿ ಸೆ.4ರಂದು ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಕೋಣೆಯಲ್ಲಿದ್ದ ಬಟ್ಟೆಗಳನ್ನು ಚಲ್ಲಾಪಿಲ್ಲಿ ಮಾಡಿ ಗೋದ್ರೇಜ್‌ನಲ್ಲಿದ್ದ ಪೇಪರ್‌ನಲ್ಲಿ ಸುತ್ತಿಟ್ಟಿದ್ದ ₹97 ಸಾವಿರ ನಗದನ್ನು ಕಳವು ಮಾಡಿದ್ದರು. ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೇ […]
ಉಡುಪಿ: ಕರಾವಳಿಯಲ್ಲಿ ಹೈಕೋರ್ಟ್ ಪೀಠಕ್ಕಾಗಿ ಮನವಿ

ಉಡುಪಿ: ಕರಾವಳಿ ಹೈಕೋರ್ಟ್ ಪೀಠಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿ ವತಿಯಿಂದ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಸೆ.18ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ಪೀಠ ವಿಷಯ ವನ್ನು ಸೇರಿಸಿ ಈ ಬಗ್ಗೆ ರಾಜ್ಯ ಸರಕಾರಕ್ಕೆ ನಿರ್ಣಯ ಕೈಗೊಳ್ಳುವಂತೆ ಪ್ರಯತ್ನಿಸಲು ಮನವಿಯಲ್ಲಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ, ಪ್ರಮುಖರಾದ ವಿಜಯ್ ಡಿಸೋಜ, […]
ಉಡುಪಿ – ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ ಶಂಕರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಅ.11ರಿಂದ 21ರವರೆಗೆ ನಡೆಯುವ ದಸರಾ ಕಾರ್ಯಕ್ರಮವನ್ನು ಮುಜರಾಯಿ, ಬಂದರು ಹಾಗೂ ಮೀನು ಗಾರಿಕಾ ಸಚಿವ ಕೆ.ಎಸ್.ಬಸಂತಪ್ಪ ಉದ್ಘಾಟಿಸಲಿರುವರು. ಸಕ್ಕರೆ ಮತ್ತು ಜವಳಿ ಸಚಿವರಾದ ರುದ್ರಪ್ಪ ಎಂ.ಲಮಾಣಿ, ಜಿಲ್ಲಾ […]