ಉಡುಪಿ: ನಿವೃತ್ತ ಶಿಕ್ಷಕರ ಕೈಯಲ್ಲಿ ಅರಳಿದ ಪರಿಸರ ಸ್ನೇಹಿ ಗಣಪ; ಆವೆ ಮಣ್ಣಿನಿಂದ ಮೂರ್ತಿಗಳ ನಿರ್ಮಾಣ; ಒಂದೂವರೆ ಅಡಿಯಿಂದ ಐದು ಅಡಿ ಎತ್ತರದವರೆಗೆ ಗಣಪನಿಗೆ ರೂಪ.!

ಉಡುಪಿ: ಗಣೇಶೋತ್ಸವ ಬಂದರೆ ಸಾಕು ಉಡುಪಿಯ ಅಲೆವೂರಿನ ನಿವೃತ್ತ ಶಿಕ್ಷಕ ಶೇಖರ ಕಲ್ಮಾಡಿ ಅವರ ಮನೆಯಂಗಳದಲ್ಲಿ ವಿವಿಧ ವಿನ್ಯಾಸದ ಗಣಪತಿ ಮೂರ್ತಿಗಳ ನಿರ್ಮಾಣದ ಚಟುವಟಿಕೆ ಗರಿಗೆದರಿದೆ. ಹಲವು ವರ್ಷಗಳಿಂದ ಆವೆ ಮಣ್ಣಿನಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ನಿರ್ಮಿಸುತ್ತಿರುವ ಅವರು, ಈ ಬಾರಿಯೂ ತಮ್ಮ ಕಲಾ ಕೌಶಲದಿಂದ ಗಮನ ಸೆಳೆಯುತ್ತಿದ್ದಾರೆ.ಅಲೆವೂರು, ಮಣಿಪುರ, ಶಾಂತಿನಗರ, ಪ್ರಗತಿನಗರ, ಮಟ್ಟು ಸೇರಿದಂತೆ ವಿವಿಧೆಡೆಯ ಗಣೇಶೋತ್ಸವ ಸಮಿತಿಗಳು ಪ್ರತಿವರ್ಷ ಶೇಖರ ಕಲ್ಮಾಡಿ ಅವರು ನಿರ್ಮಿಸುವ ಮೂರ್ತಿಗಳನ್ನೇ ಕೊಂಡೊಯ್ಯುತ್ತವೆ.ಅಲೆವೂರಿನ ನೆಹರೂ ಪ್ರೌಢಶಾಲೆಯಲ್ಲಿ ಕಲಾ ಶಿಕ್ಷಕರಾಗಿ, […]

ಬಡಗಬೆಟ್ಟು ಸೊಸೈಟಿಗೆ ₹15.09 ಕೋಟಿ ನಿವ್ವಳ ಲಾಭ; ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ- ಸತತ 20ನೇ ಜಿಲ್ಲಾ ಸಾಧನಾ ಪ್ರಶಸ್ತಿ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025–26ನೇ ಸಾಲಿನಲ್ಲಿ ₹15.09 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡುವುದಾಗಿ ಘೋಷಿಸಿದೆ.ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆದ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸೊಸೈಟಿ 22,869 ಸದಸ್ಯರನ್ನು ಹೊಂದಿದ್ದು, ₹4.89 ಕೋಟಿ ಪಾಲು ಬಂಡವಾಳ ಹಾಗೂ […]

ಕಲಾವಿದರಿಗೆ ಮೈಸೂರು ದಸರಾದಲ್ಲಿದೆ ಈ ಒಂದು ಭರ್ಜರಿ ಅವಕಾಶ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ–2026ರ ಅಂಗವಾಗಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನ ಆಯೋಜಿಸಲಾಗಿದೆ. ರಾಜ್ಯದ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರಿಂದ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ. ಮೈಸೂರಿನ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಆವರಣದಲ್ಲಿ ಪ್ರದರ್ಶನ ನಡೆಯಲಿದೆ. ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಛಾಯಾಚಿತ್ರ ಹಾಗೂ ಅನ್ವಯಕಲೆ ವಿಭಾಗಗಳಲ್ಲಿ ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರಿಗೆ ಅವಕಾಶವಿದೆ. ಸಾಂಪ್ರದಾಯಿಕ ಶಿಲ್ಪಕಲೆ, ಚಿತ್ರಕಲೆ ಹಾಗೂ ಕರಕುಶಲ ವಿಭಾಗಗಳಲ್ಲೂ ಕಲಾಕೃತಿಗಳನ್ನು ಸ್ವೀಕರಿಸಲಾಗುತ್ತದೆ. ಪ್ರತಿ […]

‘ರಾಮಾಯಣ’ ಚಿತ್ರದ ಮೊದಲ ಹಾಡು ‘ಜೈ ಜೈ ರಾಮ್’ ರಿಲೀಸ್, ಮೋಡಿ ಮಾಡುವ ಸಂಗೀತಕ್ಕೆ ಮರುಳಾದ ಅಭಿಮಾನಿಗಳು!

ಮುಂಬೈ: ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಮೊದಲ ಭಾಗದ ಮೊದಲ ಹಾಡು ‘ಜೈ ಜೈ ರಾಮ್’ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿರುವ ‘ಜೈ ಜೈ ರಾಮ್’ ಹಾಡಿಗೆ ಡಾ. ಕುಮಾರ್ ವಿಶ್ವಾಸ್ ಸಾಹಿತ್ಯ ಬರೆದಿದ್ದಾರೆ. ಅರಿಜಿತ್ ಸಿಂಗ್ ಹಾಗೂ ಶ್ರೇಯಾ ಘೋಷಾಲ್ ಧ್ವನಿ ನೀಡಿದ್ದಾರೆ. ಸೆಪ್ಟೆಂಬರ್ 14ರಂದು ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ […]

ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ  ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ಹಾಗೂ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ  ಥ್ರೋಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನದೊಂದಿಗೆ ವಿಜಯದ ಕಿರೀಟವನ್ನು ಧರಿಸಿ ಜಿಲ್ಲಾ ಮಟ್ಟದ  ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ.  ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ತರಬೇತಿಯನ್ನು ನೀಡಿದ್ದಾರೆ. ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ […]