ಉಡುಪಿ: ಸೆ.18 ರಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೆಬ್ರಿಗೆ ಭೇಟಿ; ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ.!

ಉಡುಪಿ ಸೆಪ್ಟಂಬರ್: ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಸಲಿರುವ ಸಭೆಯ ಕುರಿತು ಸೆ.15ರಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.ಮುಖ್ಯಮಂತ್ರಿಗಳು ಸೆ. 18 ರಂದು ಹೆಬ್ರಿಯ ಪದವಿ ಕಾಲೇಜಿನ ಆವರಣದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಠಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ […]
ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬoಧಿಸಿದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಷ್ಟ್ರೀಯ ಹೆದ್ದಾರಿ 169 […]
ಕ್ರೈಸ್ಟ್ ಕಿಂಗ್: ಪ್ರೌಢಶಾಲಾ ವಿಭಾಗದ ವಾಲಿಬಾಲ್‍ನಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ, ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಹತ್ತನೇ ತರಗತಿಯ ಶಗುನ್ ಎಸ್ ವರ್ಮ ಹೆಗ್ಡೆ, ಶೈನಿ ಡಿಸೋಜ, ಒಂಬತ್ತನೇ ತರಗತಿಯ ಪಾವನಿ, ಎಂಟನೇ ತರಗತಿಯ ಐಶ್ವರ್ಯ, ಅನುರಾಧ ಆರ್ […]
ಉಡುಪಿ-ದ.ಕ. ಜಿಲ್ಲೆಗಳಲ್ಲಿ ಭೋವಿ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡಲು ಹಿಂದೇಟು: ಸಮಸ್ಯೆ ಬಗೆಹರಿಸಲು ಆಗ್ರಹ

ಸೆ.18ರ ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಪವನ್ ಕುಮಾರ್ ಶಿರ್ವ ಒತ್ತಾಯ ಉಡುಪಿ: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದು, ಇದರಿಂದ ಸಮುದಾಯದ ಸಾವಿರಾರು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಭೋವಿ ಸಮುದಾಯದ ಮುಖಂಡ ಪವನ್ ಕುಮಾರ್ ಶಿರ್ವ ಆಗ್ರಹಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಪ್ರಮಾಣಪತ್ರ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆ ಕುರಿತು […]