ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್ಗೆ ರಶ್ಮಿಕಾ ಮಂದಣ್ಣ ನಾಯಕಿ!

ಬೆಂಗಳೂರು: ಕರ್ನಾಟಕ ಶಾಸ್ತ್ರೀಯ ಸಂಗೀತದ ದಿಗ್ಗಜ, ‘ಭಾರತರತ್ನ’ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಬಯೋಪಿಕ್ ಚಿತ್ರಕ್ಕೆ ಕೊನೆಗೂ ನಾಯಕಿ ಅಂತಿಮಗೊಂಡಿದ್ದಾರೆ. ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಇದೀಗ ಈ ಐತಿಹಾಸಿಕ ಪಾತ್ರವನ್ನು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ನಿರ್ವಹಿಸುವುದು ಖಚಿತವಾಗಿದೆ. ಎಂ.ಎಸ್. ಸುಬ್ಬುಲಕ್ಷ್ಮಿ ಪಾತ್ರಕ್ಕಾಗಿ ಸಾಯಿ ಪಲ್ಲವಿ, ರುಕ್ಮಿಣಿ ವಸಂತ್, ಮೃಣಾಲ್ ಠಾಕೂರ್ ಸೇರಿದಂತೆ ಹಲವು ನಟಿಯರ ಲುಕ್ ಟೆಸ್ಟ್ ನಡೆಸಲಾಗಿತ್ತು. ಆದರೆ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ರಶ್ಮಿಕಾ, ತಾವೇ […]
ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸರ್ವರ್ ಡೌನ್ ಕಾಟ, ಸಾರ್ವಜನಿಕರ ಪರದಾಟ, ಶೀಘ್ರದಲ್ಲಿಯೇ ಸರಕಾರದಿಂದ ಮನೆಯಲ್ಲಿಯೇ ಇ-ಕೆವೈಸಿ ಮಾಡಿಸಲು ಅವಕಾಶ!

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದೆ. ಆದರೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅತಿಯಾದ ಜನದಟ್ಟಣೆ ಮತ್ತು ಸರ್ವರ್ ಡೌನ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಎದುರಿಸುತ್ತಿದ್ದ ತೊಂದರೆಯನ್ನು ತಪ್ಪಿಸಲು ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಶೀಘ್ರದಲ್ಲೇ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಮೂಲಕವೇ ಮನೆಯಲ್ಲಿ ಕುಳಿತು ಇ-ಕೆವೈಸಿ ಮಾಡಲು ಹೊಸ ಯೋಜನೆ ಸಿದ್ದಪಡಿಸಲಾಗುತ್ತಿದೆ. ಆ ಕುರಿತ ವರದಿ ಇಲ್ಲಿದೆ: ಮೊಬೈಲ್ ಆ್ಯಪ್ ಸೌಲಭ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರತಿ ಸಾಲು ಹಾಗೂ ಸರ್ವರ್ ಡೌನ್ ಸಮಸ್ಯೆಯನ್ನು ತಪ್ಪಿಸಲು, […]
ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಕಡಲ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವ ಚಿಂತನೆಯನ್ನಿಟಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಅವರದ್ದು ದಿಟ್ಟ ಮತ್ತು ಮಹತ್ವದ ಹೆಜ್ಜೆ – ರಮೇಶ್ ಕಾಂಚನ್.

ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು ಜನಸಾಮಾನ್ಯರ ಸಮೀಪಕ್ಕೆ ತರುವುದು ಮಹತ್ವದ ಹೆಜ್ಜೆ. ಕರಾವಳಿಯ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಲು, ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲು ನಮ್ಮ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಅವರು ಈ ನಿರ್ಧಾರ ಮಾಡಿರುವುದು ಬಹಳ ಮಹತ್ವದ್ದುಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಪ್ರದೇಶವು ರಾಜ್ಯದ ಆರ್ಥಿಕ, ಸಾಂಸ್ಕೃತಿಕ […]
ಉಡುಪಿ: ಸೆ.18 ರಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೆಬ್ರಿಗೆ ಭೇಟಿ; ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ.!

ಉಡುಪಿ ಸೆಪ್ಟಂಬರ್: ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಡೆಸಲಿರುವ ಸಭೆಯ ಕುರಿತು ಸೆ.15ರಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.ಮುಖ್ಯಮಂತ್ರಿಗಳು ಸೆ. 18 ರಂದು ಹೆಬ್ರಿಯ ಪದವಿ ಕಾಲೇಜಿನ ಆವರಣದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಠಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ […]
ಉಡುಪಿ: ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬoಧಿಸಿದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ರಾಷ್ಟ್ರೀಯ ಹೆದ್ದಾರಿ 169 […]