ಪಟ್ಲ ರೂರಲ್ ಎಜುಕೇಶನ್ ಸೊಸೈಟಿ: ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ

ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.), ವಿದ್ಯಾನಗರ ಪಟ್ಲ ಇದರ ಆಡಳಿತ ಮಂಡಳಿ, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯು.ಎಸ್. ನಾಯಕ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಾಂತಪ್ಪ ಮೂಲಂಗಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲೋಕಮಾನ್ಯ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಸೀತಾರಾಮ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗಮಿಸಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದರು. […]
ಮಲ್ಪೆ: ಮೀನುಗಾರಿಕೆ ಸಚಿವ ಸಚಿವ ಕೆ.ಎಸ್ ಬಸವಂತಪ್ಪ ಮಲ್ಪೆ ಬಂದರಿಗೆ ಭೇಟಿ- ಮೀನುಗಾರರ ಜೊತೆ ಸಮಾಲೋಚನೆ

ಉಡುಪಿ: ರಾಜ್ಯದ ನೂತನ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರಾವಳಿ ಭಾಗಕ್ಕೆ ಭೇಟಿ ನೀಡಿದ ಇಲಾಖಾ ಸಚಿವ ಕೆ.ಎಸ್ ಬಸವಂತಪ್ಪ ಇಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಆಳಸಮುದ್ರದಲ್ಲಿ ಹಿಡಿದು ಬೋಟಿನಲ್ಲಿ ತಂದು ಬಂದರಿನ ಧಕ್ಕೆಯಲ್ಲಿ ಇರಿಸಿದ್ದ ವೈವಿಧ್ಯಮಯ ಮೀನುಗಳನ್ನು ನೋಡಿ ಖುಷಿ ಪಟ್ಟ ಸಚಿವರು, ಅವುಗಳನ್ನು ಕೈಯಲ್ಲಿ ಹಿಡಿದು, ಮುಟ್ಟಿ ನೋಡಿದರು. ಕಾಂಗ್ರೆಸ್ ನಾಯಕರಿಂದ ಕರಾವಳಿಯ ಮೀನುಗಾರಿಕೆ ಕುರಿತಂತೆ ಮಾಹಿತಿಗಳನ್ನು ಪಡೆದರು. […]
ನಮ್ಮ ಆರ್ಥಿಕ ಹಿತಾಸಕ್ತಿ ರಕ್ಷಣೆಗಾಗಿ ರಷ್ಯಾದಿಂದ ತೈಲ ಖರೀದಿ – ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ: ನಮ್ಮ ವಾಣಿಜ್ಯ, ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ರಷ್ಯಾದಿಂದ(Russia) ತೈಲವನ್ನು ಖರೀದಿ ಮಾಡುತ್ತಿದ್ದೇವೆ ಎಂದು ಅಮೆರಿಕಕ್ಕೆ(USA) ಭಾರತ ತಿರುಗೇಟು ನೀಡಿದೆ. ರಷ್ಯಾದಿಂದ ಇಂಧನ ಖರೀದಿಸುವ ದೇಶಗಳ ಮೇಲೆ ಶೇ.100 ರಷ್ಟು ಆಮದು ಸುಂಕ ವಿಧಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ ನೀಡುವ ಮಸೂದೆಯನ್ನು ಅಮೆರಿಕ ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ತನ್ನ 140 ಕೋಟಿ ಜನರ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣ ಬದ್ಧವಾಗಿದೆ ಎಂದು ಭಾರತ(India) ದೃಢವಾಗಿ ಪುನರುಚ್ಚರಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ […]
ಮಣಿಪಾಲ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ- ಪೋಷಕರ ಖಾಸಗಿ ದೂರಿನ ಬಳಿಕ ಯುವಕನ ಬಂಧನ

ಉಡುಪಿ: 10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದೀಯು ದಮನ್ ಕೇಂದ್ರಾಡಳಿತ ಪ್ರದೇಶದ ಸಾಯಿ ಸಂಜಯ್ ಬಿಂಗಾರೆ (21) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪಾಲದ ಹೊಟೇಲ್ ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಅಸ್ಸಾಂ ರಾಜ್ಯದ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಎಂಬವರ ಮಗಳು ಪೌಲಾ ಲೆಸ್ಲಿ ವಾಜ್ರಿರ್ ಎಂಬಾಕೆ 2025ರ ನ.7ರಂದು ರಾತ್ರಿ ಮಣಿಪಾಲದ ಕಾಯಿನ್ ಸರ್ಕಲ್ […]
ಉಡುಪಿ: ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಿ

ಉಡುಪಿ: ಉಡುಪಿ ಜಿಲ್ಲೆಯ ರಿಫೈನರಿ ಮತ್ತು ಶಿಪ್‌ಬಿಲ್ಡಿಂಗ್ ಘಟಕಗಳಲ್ಲಿ ಕೆಲಸ ಮಾಡಲು ಎಲೆಕ್ಟ್ರಿಕಲ್ ಟೆಕ್ನಿಷಿಯನ್, ಮೆಕ್ಯಾನಿಕಲ್ ಟೆಕ್ನಿಷಿಯನ್ ಹಾಗೂ DG ಆಪರೇಟರ್ ಹುದ್ದೆಗಳಿಗೆ ತಕ್ಷಣದ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ITI ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಹಾಗೂ ಕಾರ್ಯಾಚರಣೆ ಅಥವಾ ನಿರ್ವಹಣೆ (Operation/Maintenance) ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವಕ್ಕೆ ಅನುಗುಣವಾಗಿ ಆಕರ್ಷಕ ವೇತನದೊಂದಿಗೆ PF, ESI ಹಾಗೂ ಓವರ್‌ಟೈಮ್ (OT) […]