ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಆಟೋ ಸೇವೆಗೆ ಚಾಲನೆ.

ಉಡುಪಿ: ನರೇಂದ್ರ ಮೋದಿಯವರ ಜನುಮ ದಿನ ಪ್ರಯುಕ್ತ ಕಳೆದ 6 ವರ್ಷಗಳಿಂದ ಮೋದಿಯವರ ಬ್ಯಾನರ್ ನ್ನು ತನ್ನ ರಿಕ್ಷಾಕ್ಕೆ ಕಟ್ಟಿ ಬಾಡಿಗೆ ಮಾಡುತ್ತಿರುವ ಜನ ಸಂಘ ಮೂಲದ ಕಾರ್ಯಕರ್ತರು ಅತ್ರಾಡಿಯ ಗೋಪಾಲ ಕೃಷ್ಣ ಆಚಾರ್ಯ ಇವರು ಈ ಬಾರಿ ಮೋದಿಯವರ ಜನ್ಮದಿನ ಸೆಪ್ಟೆಂಬರ್ 17 ರಂದು ಬೆಳಗ್ಗಿನಿಂದ ರಾತ್ರಿಯವರೆಗೆ ಉಚಿತ ಆಟೋ ರಿಕ್ಷಾ ಸೇವೆಯನ್ನು ನೀಡಲು ನಿರ್ಧರಿಸಿದ್ದು, ಉಚಿತ ಆಟೋ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಇವರ ಉಪಸ್ಥಿತಿಯಲ್ಲಿ ಹಿರಿಯಡ್ಕದ ಮೋದಿ (ಸದಾನಂದ […]

ರೈತರು, ಕರಾವಳಿ ಅಭಿವೃದ್ಧಿಗೆ ಆದ್ಯತೆ ನೀಡಿ: ಕಿಸಾನ್ ಕಾಂಗ್ರೆಸ್

ಉಡುಪಿ: ಕರಾವಳಿ ಸಚಿವ ಸಂಪುಟ ಸಭೆಯಲ್ಲಿ ರೈತರು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಶೆಟ್ಟಿ, ಕಸ್ತೂರಿರಂಗನ್ ವರದಿಯಿಂದ ಬಾಧಿತ ರೈತರ ರಕ್ಷಣೆ, ವಾರಾಹಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರ್‌ಸ್ಥಾಪನೆಗೆ ₹100 ಕೋಟಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿ ತಾಲೂಕಿಗೆ ಒಂದರಂತೆ ಫಸಲು […]

ಎಪಿಎಲ್ ಬಿಪಿಎಲ್ ಪಡಿತರ ಚೀಟಿ ಇ-ಕೆವೈಸಿಗೆ ಗಡುವು ವಿಸ್ತರಣೆ: ಸರಕಾರದಿಂದ ಬಂದ ಮಹತ್ವದ ಆದೇಶವಿದು!

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇ-ಕೆವೈಸಿ ಗಡುವನ್ನು ಅಕ್ಟೋಬರ್ 20, 2026ರವರೆಗೆ ವಿಸ್ತರಿಸಿದೆ. ಈ ಹಿಂದೆ ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಇದೀಗ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯಿಂದ ಜನರು ಪರದಾಡುತ್ತಿರುವ ವಿಚಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗಡುವು ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ […]

ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ, ಕೇಂದ್ರದ ಹೊಸ ಪ್ರಸ್ತಾವನೆ

ನವದೆಹಲಿ: ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಿಯಂತ್ರಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮುಂದಾಗಿದೆ. ಇದರ ಭಾಗವಾಗಿ ಮೆಡಿಕಲ್‌ ಸ್ಟೋರ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಈ ಸಂಬಂಧ ಔಷಧ ನಿಯಮಗಳು, 1945ಕ್ಕೆ ತಿದ್ದುಪಡಿ ತರಲು ಸೆಪ್ಟೆಂಬರ್ 8ರಂದು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಕರಡು ನಿಯಮ ಜಾರಿಗೆ ಬಂದರೆ, ನೋಂದಾಯಿತ ವೈದ್ಯರ ಪ್ರಿಸ್ಕ್ರಿಪ್ಷನ್ ಆಧರಿಸಿ ಔಷಧ ಮಾರಾಟ ಮಾಡುವ ಪರವಾನಗಿ ಹೊಂದಿರುವ ಮೆಡಿಕಲ್‌ ಸ್ಟೋರ್‌ಗಳಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸಿ ನಿರ್ವಹಿಸುವುದು ಕಡ್ಡಾಯವಾಗಲಿದೆ. ಔಷಧ […]

ಜನನ–ಮರಣ ನೋಂದಣಿ ತಡವಾದರೆ ಇನ್ನು ಕಠಿಣ ನಿಯಮ; ಅಕ್ಟೋಬರ್ 1ರಿಂದ ಜಾರಿ

ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಿಸುವ ಪ್ರಕ್ರಿಯೆ ಇನ್ನು ಮುಂದೆ ಮತ್ತಷ್ಟು ಕಠಿಣವಾಗಲಿದೆ. ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ-2026ರ ನೂತನ ನಿಯಮಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಭಾರತದ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಹೊಸ ನಿಯಮದ ಪ್ರಕಾರ, ಜನನ ಅಥವಾ ಮರಣ ಸಂಭವಿಸಿ ಒಂದು ವರ್ಷ ಕಳೆದ ಬಳಿಕ, ಎರಡು ವರ್ಷ ಪೂರ್ಣಗೊಳ್ಳುವ ಮುನ್ನ ನೋಂದಣಿಗೆ ಅರ್ಜಿ ಸಲ್ಲಿಸಿದರೆ ಸಂಬಂಧಪಟ್ಟ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ […]