ಗಮನಿಸಿ, ಮಕ್ಕಳ ಪಾಸ್‌ಪೋರ್ಟ್ ಅವಧಿ ಬದಲಾವಣೆ ಅರ್ಜಿ ಶುಲ್ಕ ಪರಿಷ್ಕರಣೆ – ಏಷ್ಟು ಏರಿಕೆ

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ‘ಪಾಸ್‌ಪೋರ್ಟ್‌ಗಳ (ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಮಕ್ಕಳ ಪಾಸ್‌ಪೋರ್ಟ್(Passports) ಮಾನ್ಯತೆಯ ಅವಧಿ ಹಾಗೂ ಅರ್ಜಿ ಶುಲ್ಕದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. 5 ವರ್ಷದೊಳಗಿನ ಮಕ್ಕಳಿಗೆ(Child) ನೀಡಲಾಗುವ 36 ಪುಟಗಳ ಸಾಮಾನ್ಯ ಪಾಸ್‌ಪೋರ್ಟ್, ವಿತರಿಸಿದ ದಿನಾಂಕದಿಂದ 5 ವರ್ಷಗಳವರೆಗೆ ಅಥವಾ ಆ ಮಗುವಿಗೆ 18 ವರ್ಷ ತುಂಬುವವರೆಗೆ(ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ) ಮಾತ್ರ ಮಾನ್ಯವಾಗಿರುತ್ತದೆ. ನಿಯಮ 8 (1)ರ ತಿದ್ದುಪಡಿಗಳ ಅನ್ವಯ, ಎಲ್ಲಾ ಬಗೆಯ ಅರ್ಜಿ ಶುಲ್ಕಗಳು […]
ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಮಾಡಿದ ಖಾಸಗಿ ಬಸ್ ಗಳ ವಿರುದ್ಧ RTO ಕಾರ್ಯಾಚರಣೆ: ರಾಜ್ಯದಲ್ಲಿ ಒಟ್ಟು 3,756 ಪ್ರಕರಣ ದಾಖಲು

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ಆರೋಪದ ಮೇರೆಗೆ ಖಾಸಗಿ ಬಸ್‌ಗಳ ವಿರುದ್ಧ ಆರ್‌ಟಿಒ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಸೆಪ್ಟೆಂಬರ್ 11ರಿಂದ 15ರವರೆಗೆ ನಡೆದ ಐದು ದಿನಗಳ ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಒಟ್ಟು 14,987 ಖಾಸಗಿ ಬಸ್‌ಗಳನ್ನು ತಪಾಸಣೆ ಮಾಡಲಾಗಿದೆ. ಈ ವೇಳೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 3,756 ಪ್ರಕರಣಗಳನ್ನು ದಾಖಲಿಸಲಾಗಿದ್ದು, 33 ಬಸ್‌ಗಳನ್ನು ಜಪ್ತಿ ಮಾಡಲಾಗಿದೆ. ಪರವಾನಗಿ ನಿಯಮ ಉಲ್ಲಂಘನೆ, ತೆರಿಗೆ ಪಾವತಿಸದೆ ಸಂಚರಿಸುವುದು […]
ಮಣಿಪಾಲದಲ್ಲಿ 30 ಗ್ರಾಂ ಎಂಡಿಎಂಎ ವಶ; ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಎಂಡಿಎಂಎ ಮಾದಕ ವಸ್ತುವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ತಾಲ್ಲೂಕಿನ ಉದ್ಯಾವರದ ಪಳ್ಳಿಗುಡ್ಡೆಯ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸೆ.17ರ ಮಧ್ಯರಾತ್ರಿ 12.10ರ ಸುಮಾರಿಗೆ ಪೆರಂಪಳ್ಳಿ ಸೇತುವೆ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆಂಗಳೂರಿನಿಂದ ಬಂದಿದ್ದ ಎನ್ನಲಾದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು […]
ಮಂಗಳೂರು: ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿ.ಎಂ,ಡಿ.ಕೆ. ಶಿವಕುಮಾರ್

ಮಂಗಳೂರು: ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆಗಳ ಮೇಲೆ ರಾಜಕೀಯ ಮಾಡುವುದಿಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದರು. ಮಂಗಳೂರಿನ ಗಾಂಧೀಜಿ ಅವರು ಉಳಿದುಕೊಂಡಿದ್ದ ಮನೆಗೆ ಭೇಟಿ ನೀಡಿ ಅಲ್ಲಿ ಉಪಹಾರ ಸೇವಿಸಿದ್ದೇನೆ. ಮಂಗಳೂರು ಬನ್ಸ್ […]
ಬೆಳಪು ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ

ಉಡುಪಿ: ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾಂಗ್ರೆಸ್ ಮುಖಂಡರಾದ ಹರಿಪ್ರಸಾದ್ ರೈ, ಬೆಳಪು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.