ಅಂಚೆ ಅದಾಲತ್

ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ 7 ರಂದು ಬೆಳಿಗ್ಗೆ 10.30 ಕ್ಕೆ ಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳಿದ್ದಲ್ಲಿ ಅಕ್ಟೋಬರ್ 5 ರ ಒಳಗಾಗಿ ಇ-ಮೇಲ್ ವಿಳಾಸ [email protected]ಮೂಲಕ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ತಮ್ಮ ಸಮಸ್ಯೆಗಳನ್ನು ಸಮಕ್ಷಮ ಚರ್ಚಿಸಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವ-ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ. ಹೆಚ್ಚಿನ […]

ಬೆಳಿಗ್ಗೆ ಪಪ್ಪಾಯಿ ತಿಂದರೆ ಆರೋಗ್ಯಕ್ಕೆ ಹತ್ತಾರು ಲಾಭ: ಪಪ್ಪಾಯಿಯ ಈ ಗುಟ್ಟು ಗೊತ್ತಾ?

ಪಪ್ಪಾಯಿ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು. ಇದರಲ್ಲಿ ವಿಟಮಿನ್‌ಗಳು, ಖನಿಜಾಂಶಗಳು, ನಾರಿನಾಂಶ ಹಾಗೂ ವಿವಿಧ ಉತ್ಕರ್ಷಣ ನಿರೋಧಕಗಳು ಇರುವುದರಿಂದ ಸಮತೋಲಿತ ಆಹಾರದ ಭಾಗವಾಗಿ ಸೇವಿಸಬಹುದಾಗಿದೆ. ಪಪ್ಪಾಯಿಯಲ್ಲಿ ವಿಟಮಿನ್‌ ಸಿ, ವಿಟಮಿನ್‌ ಎ, ಫೋಲೇಟ್‌, ಪೊಟ್ಯಾಸಿಯಂ, ವಿಟಮಿನ್‌ ಇ, ವಿಟಮಿನ್‌ ಕೆ, ಬೀಟಾ-ಕ್ಯಾರೋಟಿನ್‌ ಮತ್ತು ಲೈಕೋಪೀನ್‌ ಸೇರಿದಂತೆ ಹಲವು ಪೋಷಕಾಂಶಗಳಿವೆ. ಅದರಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಗೆ ಸಹಕಾರಿಯಾಗಿದ್ದು, ಮಲಬದ್ಧತೆಯ ಸಮಸ್ಯೆ ಇರುವವರಿಗೆ ನೆರವಾಗಬಹುದು. ಪಪ್ಪಾಯಿಯನ್ನು ಬೆಳಗಿನ ಉಪಾಹಾರದ ಭಾಗವಾಗಿ ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಕೆಲವು ಪೋಷಕಾಂಶಗಳು ದೊರೆಯುತ್ತವೆ. ನಾರಿನಾಂಶ ಮತ್ತು ಕಡಿಮೆ […]

ನದಿಗೆ ಬಿದ್ದ ಕಾರು: ಚಾಲಕ, 3 ವರ್ಷದ ಮಗು ರಕ್ಷಣೆ

ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ ಅವರು, ಕ್ಷಣವೂ ವಿಳಂಬ ಮಾಡದೆ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದರು. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಅವರು ಯಶಸ್ವಿಯಾದರು. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಇಬ್ಬರ ಜೀವ […]

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: ಶೀಘ್ರವೇ ಸಭೆ ನಡೆಸಿ ತೀರ್ಮಾನ ಎಂದ ಸಿಎಂ

ಚಿಕ್ಕಮಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಮತ್ತೆ ಎದುರಾಗಿದೆ. ಹಾಲು ಉತ್ಪಾದಕರಿಂದ ದರ ಹೆಚ್ಚಳಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಸಭೆ ನಡೆಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಹಾಲಿನ ದರವನ್ನು ಲೀಟರ್‌ಗೆ ₹9ರಿಂದ ₹10ರವರೆಗೆ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಾಲಿನ ಖರೀದಿ ದರ ಹೆಚ್ಚಿಸಬೇಕು ಎಂಬ ಬೇಡಿಕೆ ರೈತರಿಂದ ಬಂದಿದೆ. ಈ ಕುರಿತು ಅಧಿಕಾರಿಗಳು ಹಾಗೂ ಹಾಲು ಒಕ್ಕೂಟಗಳೊಂದಿಗೆ […]