ಸಬ್ಸಿಡಿ ಎಲ್‌ಪಿಜಿ ಗ್ರಾಹಕರಿಗೆ ಮಹತ್ವದ ಸೂಚನೆ: ಅ.1ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯ

ನವದೆಹಲಿ: ಸಬ್ಸಿಡಿ ಅನ್ವಯಿಸುವ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ರೀಫಿಲ್ ಪಡೆಯುವ ಗ್ರಾಹಕರಿಗೆ 2026ರ ಅಕ್ಟೋಬರ್ 1ರಿಂದ ಬಯೋಮೆಟ್ರಿಕ್ ಆಧಾರ್ ದೃಢೀಕರಣ (BAA) ಕಡ್ಡಾಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಕಾರ, ಎಲ್‌ಪಿಜಿ ಸಂಪರ್ಕಗಳನ್ನು ನಿಖರವಾಗಿ ಗುರುತಿಸುವುದು, ನಕಲಿ ಹಾಗೂ ಅನರ್ಹ ಸಂಪರ್ಕಗಳನ್ನು ಪತ್ತೆಹಚ್ಚುವುದು ಮತ್ತು ಸಬ್ಸಿಡಿ ಹೊಂದಿರುವ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದುರ್ಬಳಕೆಯನ್ನು ತಡೆಯುವುದು ಈ ಕ್ರಮದ ಉದ್ದೇಶವಾಗಿದೆ. ಈಗಾಗಲೇ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಪ್ರಕ್ರಿಯೆ […]

ಕಡಿಯಾಳಿ ಸಿದ್ಧಿ ವಿನಾಯಕನ 60ನೇ ವರ್ಷದ ವೈಭವದ ವಿಸರ್ಜನಾ ಮೆರವಣಿಗೆ ಇಂದು

ಉಡುಪಿ: ಉಡುಪಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಸಿದ್ಧಿ ವಿನಾಯಕ ದೇವರ 60ನೇ ವರ್ಷದ ವೈಭವದ ಭವ್ಯ ವಿಸರ್ಜನಾ ಮೆರವಣಿಗೆ ಸೆ.20ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ಕಡಿಯಾಳಿಯಿಂದ ಆರಂಭವಾಗುವ ಮೆರವಣಿಗೆಯು ಸ್ತಬ್ಧಚಿತ್ರಗಳು ಹಾಗೂ ಮಂಗಳವಾದ್ಯಗಳೊಂದಿಗೆ ಉಡುಪಿಯ ಪ್ರಮುಖ ರಾಜಮಾರ್ಗಗಳಲ್ಲಿ ಸಂಚರಿಸಲಿದೆ. ಕಲ್ಸಂಕ, ರಥಬೀದಿ, ಬಡಗುಪೇಟೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಾಗಿದ ಬಳಿಕ ಶ್ರೀ ಸಿದ್ಧಿ ವಿನಾಯಕನನ್ನು ರಾತ್ರಿ ಸುಮಾರು 9.30ಕ್ಕೆ ಮಲ್ಪೆ ಸಮುದ್ರ ತೀರಕ್ಕೆ ಕೊಂಡೊಯ್ಯಲಾಗುವುದು. […]