ಭಕ್ತಿಭಾವದ ನಡುವೆ ಕಡಿಯಾಳಿ ಗಣಪನಿಗೆ ಜಲಸ್ತಂಭನ

ಉಡುಪಿ: ‘ಉಡುಪಿಯ ರಾಜ’ ಖ್ಯಾತಿಯ ಕಡಿಯಾಳಿ ಉಡುಪಿ ಸಾರ್ವಜನಿಕ ಗಣೇಶೋತ್ಸವದ ಸಂಕಷ್ಟಹರ ಗಣಪತಿ ವಿಗ್ರಹದ ಜಲಸ್ತಂಭನ ಮಲ್ಪೆ ಕಡಲ ಕಿನಾರೆಯಲ್ಲಿ ನೆರವೇರಿತು. ಕಡಿಯಾಳಿಯಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆ ಕಲ್ಸಂಕ, ಕೃಷ್ಣಮಠ ಸೇರಿದಂತೆ ನಗರದ ವಿವಿಧ ಮಾರ್ಗಗಳಲ್ಲಿ ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಭಕ್ತರು ಗಣಪತಿಯ ಶೋಭಾಯಾತ್ರೆಯನ್ನು ಭಕ್ತಿಭಾವದಿಂದ ವೀಕ್ಷಿಸಿದರು. ಮೆರವಣಿಗೆಯುದ್ದಕ್ಕೂ ವಿವಿಧ ಸಾಂಸ್ಕೃತಿಕ ತಂಡಗಳು, ವಾದ್ಯಮೇಳಗಳು ಗಮನ ಸೆಳೆದವು. ಕೃಷ್ಣಮಠದ ಸಮೀಪ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸಂಕಷ್ಟಹರ ಗಣಪತಿಗೆ ಮಂಗಳಾರತಿ ಬೆಳಗಿದರು. ವಜ್ರಮಹೋತ್ಸವದ […]

ಶಿರ್ವ: ಮೇಯಲು ಬಿಟ್ಟಿದ್ದ ದನ ಕಳವು: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ. ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಸೆ.19ರಂದು ಸಂಜೆ ವಸಂತಿ ಸುನೀತಾ ಕ್ವಾಡ್ರಸ್‌ ಅವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಎರಡು ವರ್ಷದ ಕಪ್ಪು ಬಣ್ಣದ ದನವೊಂದು ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿದ್ದ ಟೆಂಪೋದಲ್ಲಿ ತಮ್ಮ ದನದೊಂದಿಗೆ ಮತ್ತೊಂದು ದನವನ್ನೂ ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಕಂಡುಬಂದಿತ್ತು. ಟೆಂಪೋ ನೋಂದಣಿ ಸಂಖ್ಯೆ ಪರಿಶೀಲಿಸಿದಾಗ KA […]

ರಾಮ ಮಂದಿರ ದೇಣಿಗೆ ಕಳವು: CCTVಯಲ್ಲಿ 105 ಕಳ್ಳತನದ ದೃಶ್ಯಾವಳಿಗಳು ಪತ್ತೆ!

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ದೇಣಿಗೆ ಹಾಗೂ ಬೆಲೆಬಾಳುವ ವಸ್ತುಗಳ ಕಳವು ಆರೋಪಕ್ಕೆ ಸಂಬಂಧಿಸಿದಂತೆ ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳಲ್ಲಿ 105 ಕಳವು ಘಟನೆಗಳು ಪತ್ತೆಯಾಗಿವೆ ಎಂದು ವಿಶೇಷ ತನಿಖಾ ತಂಡ (SIT) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸೋಮವಾರ ಪ್ರಕರಣದ ವಿಚಾರಣೆ ವೇಳೆ ಉತ್ತರ ಪ್ರದೇಶ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ಸಿದ್ಧಪಡಿಸಿರುವ ಸ್ಥಿತಿಗತಿ ವರದಿಯ ವಿವರಗಳನ್ನು ನ್ಯಾಯಪೀಠದ ಮುಂದಿಟ್ಟರು. ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 25ರೊಳಗೆ ದೋಷಾರೋಪ ಪಟ್ಟಿ […]

ಸೆ.28 ರಿಂದ ಮೂರು ದಿನ ಬ್ಯಾಂಕ್ ಮುಷ್ಕರ: SBI ಗ್ರಾಹಕರಿಗೆ ಮಹತ್ವದ ಸೂಚನೆ

ನವದೆಹಲಿ: ಸೆಪ್ಟೆಂಬರ್ 28ರಿಂದ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಸೆಪ್ಟೆಂಬರ್ 28, 29 ಹಾಗೂ 30ರಂದು ಬ್ಯಾಂಕ್ ಮುಷ್ಕರ ನಡೆಯಲಿದ್ದು, ಇದಕ್ಕೂ ಮುನ್ನ ಸೆಪ್ಟೆಂಬರ್ 26 ಮತ್ತು 27ರಂದು ವಾರಾಂತ್ಯ ರಜೆ ಇರುವುದರಿಂದ ಸತತ ಐದು ದಿನಗಳ ಕಾಲ ಶಾಖಾ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶಾಖೆಗೆ ಸಂಬಂಧಿಸಿದ ಪ್ರಮುಖ ಕೆಲಸಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸುವಂತೆ […]

ಮಂಗಳೂರಿನ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿದೆ ಉದ್ಯೋಗಾವಕಾಶ, ನೇರ ಸಂದರ್ಶನ:

ಮಂಗಳೂರು : ಮಂಗಳೂರಿನ ಫಳ್ನೀರ್ ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ನಡೆಸಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (Resume) ದೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ದಿನಾಂಕ: ಸೆಪ್ಟೆಂಬರ್ 22, 2026ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ರವರೆಗೆಸ್ಥಳ: ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂ, ಫಳ್ನೀರ್, ಮಂಗಳೂರು ಹೆಚ್ಚಿನ ವಿವರಗಳಿಗಾಗಿ ಶೋರೂಂ ಅನ್ನು ಸಂಪರ್ಕಿಸಿ. ಸಂಪರ್ಕಿಸಿ:ಮಲಬಾರ್ ಗೋಲ್ಡ್ & ಡೈಮಂಡ್ಸ್,ಫಳ್ನೀರ್, ಮಂಗಳೂರು.0824-2410916