ಚಿಕ್ಕಮಗಳೂರಿನಲ್ಲಿ ಉಚಿತ ಸ್ವ-ಉದ್ಯೋಗ ತರಬೇತಿ: ಊಟ, ವಸತಿ ಜೊತೆಗೆ ಸಿಗುವ ತರಬೇತಿಯಿಂದ ಏನೆಲ್ಲಾ ಲಾಭವಿದೆ?

ಚಿಕ್ಕಮಗಳೂರು: ಕೈಚಳಕದ ಮೂಲಕ ಸ್ವ-ಉದ್ಯೋಗ ಆರಂಭಿಸಿ ಆದಾಯ ಗಳಿಸಲು ಬಯಸುವವರಿಗೆ ಚಿಕ್ಕಮಗಳೂರಿನಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ. ಪವಿತ್ರವನದ ಸಮೀಪದ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೀರೆ ಕುಚ್ಚು, ಬೇಬಿ ಕುಚ್ಚು ಹಾಗೂ ಕ್ರೋಶ ಕುಚ್ಚು ತಯಾರಿಕೆ ಕುರಿತು 6 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನಡೆಯಲಿದೆ. ಸೆ.21ರಿಂದ 26ರವರೆಗೆ ತರಬೇತಿ ತರಬೇತಿಯು ಸೆಪ್ಟೆಂಬರ್ 21ರಿಂದ 26, 2026ರವರೆಗೆ ನಡೆಯಲಿದೆ. ಕೈಚಳಕದ ಕೌಶಲ್ಯವನ್ನು ಬಳಸಿಕೊಂಡು ಮನೆಯಲ್ಲಿಯೇ ಸಣ್ಣ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. […]

ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ವೇಗ: 11 ನಿಲ್ದಾಣ ಫೈನಲ್ !

ಮಂಗಳೂರು: ನಗರದ ಸಾರಿಗೆ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿರೀಕ್ಷೆ ಮೂಡಿಸಿರುವ ಪ್ರಸ್ತಾವಿತ ಮಂಗಳೂರು ವಾಟರ್ ಮೆಟ್ರೋ ಯೋಜನೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಯೋಜನೆಯಡಿ ಪ್ರಸ್ತಾವಿಸಲಾಗಿದ್ದ 19 ನಿಲ್ದಾಣಗಳ ಪೈಕಿ 11 ನಿಲ್ದಾಣಗಳನ್ನು ಮಂಗಳೂರು ಬಂದರು ಮತ್ತು ಮೀನುಗಾರಿಕಾ ಉಪವಿಭಾಗ ಅಂತಿಮಗೊಳಿಸಿದೆ. ನಗರ ಸಾರಿಗೆ ವ್ಯವಸ್ಥೆಯ ಜತೆಗೆ ಬಂದರು ಹಾಗೂ ಕರಾವಳಿ ಪ್ರದೇಶಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ಉದ್ದೇಶವನ್ನು ವಾಟರ್ ಮೆಟ್ರೋ ಯೋಜನೆ ಹೊಂದಿದೆ. ಹಳೆ ಮಂಗಳೂರು ಬಂದರು, ಪೋರ್ಟ್ ಫೆರಿ, ಸ್ಯಾಂಡ್‌ಬಾರ್, ತೋಟ ಬೆಂಗ್ರೆ, ಹೊಯ್ಗೆ […]

ಧರ್ಮಸ್ಥಳ, ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ!

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ […]

ಕಾರ್ಕಳ: ಪದವಿಪೂರ್ವ ವಿಭಾಗದ ತ್ರೋಬಾಲ್‍ನಲ್ಲಿ ಕ್ರೈಸ್ಟ್ ಕಿಂಗ್’ನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ಮಣ್ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ದೀಪ್ತಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ, ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶೇಕ್ ಇಮಾದ್, ಪ್ರಥಮ ವಾಣಿಜ್ಯ ವಿಭಾಗದ ಗಗನ್ ಶೆಟ್ಟಿ ಜಿಲ್ಲಾಮಟ್ಟಕ್ಕೆ […]

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ.

ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಶ್ಮಿ 57 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕುಸ್ತಿ ಪಟು ಆಗಿರುವ ಕೃಷ್ಣ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೂ […]