ಮಣಿಪಾಲ: ಸೆ.21ರಿಂದ 26ರವರೆಗೆ ಉಚಿತ ಪ್ರೊಸ್ಟೇಟ್ ಆರೋಗ್ಯ ತಪಾಸಣೆ, ಸಲಹಾ ಶಿಬಿರ

ಮಣಿಪಾಲ: ಪ್ರೊಸ್ಟೇಟ್ ಜಾಗೃತಿ ಮಾಸಾಚರಣೆ ಅಂಗವಾಗಿ ಮಣಿಪಾಲದ ಮುನಿಯಾಲ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಶಲ್ಯತಂತ್ರ ವಿಭಾಗದ ವತಿಯಿಂದ ಸೆ. 21ರಿಂದ 26ರವರೆಗೆ ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಉಚಿತ ಪ್ರೊಸ್ಟೇಟ್ ಆರೋಗ್ಯ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ. ಪುರುಷರಲ್ಲಿ ಕಂಡುಬರುವ ಪದೇಪದೇ ಮೂತ್ರ ವಿಸರ್ಜನೆ, ಮೂತ್ರ ವಿಸರ್ಜನೆಗೆ ತುರ್ತು ಭಾವನೆ, ಮೂತ್ರ ತೊಟ್ಟಿಕ್ಕುವುದು, ಮೂತ್ರದ ಹರಿವು ಕಡಿಮೆಯಾಗುವುದು, ಮೂತ್ರ ವಿಸರ್ಜನೆ ಆರಂಭಿಸಲು ತೊಂದರೆ, ಮೂತ್ರಕೋಶ ಸಂಪೂರ್ಣ ಖಾಲಿಯಾಗದಿರುವ ಭಾವನೆ ಹಾಗೂ ಸೊಂಟ ಮತ್ತು […]
ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‍ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ವು ದಿನಾಂಕ 20 ಸೆಪ್ಟೆಂಬರ್ 2026ರಂದು ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು. ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಇಲ್ಲಿನ ಕುಲಸಚಿವರಾದ ಡಾ. ಪ್ರಸಾದ್ ಬಿ. […]